ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್, ಕೇಂದ್ರ ಮೀಸಲು ಪೊಲೀಸ್ ಪಡೆಯ ವಿಶೇಷ ಘಟಕವಾಗಿದ್ದು, ಇದನ್ನು ಮಾವೋವಾದಿ ವಿರೋಧಿ ಕಾರ್ಯಾಚರಣೆಗಾಗಿ ಬಿಹಾರ ರಾಜ್ಯದಲ್ಲಿ ನಿಯೋಜಿಸಲಾಗಿದೆ.
ಬಿಹಾರ (ನವೆಂಬರ್ 22); ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ. ಗಯಾ ಜಿಲ್ಲೆಯಲ್ಲಿ ಮಾವೋವಾದಿಗಳಿರುವ ಕುರಿತು ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆ ಸೈನಿಕರು ಶನಿವಾರ ರಾತ್ರಿಯಿಂದಲೇ ಶೋಧ ಕಾರ್ಯ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಏಕಾಏಕಿ ಗುಂಡಿನ ಚಕಮಕಿ ನಡೆದಿದ್ದು, ಮೂವರು ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘರ್ಷಣೆಯಲ್ಲಿ ಹತರಾದ ಮಾವೋವಾದಿಗಳಲ್ಲಿ ಕಮಾಂಡರ್ ಅಲೋಕ್ ಯಾದವ್ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಪಾಟ್ನಾದಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಯಾ ಜಿಲ್ಲೆಯ ಬರಾಚಟ್ಟಿ ಅರಣ್ಯ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ ಎನ್ನಲಾಗಿದೆ.
205 ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್) ಮತ್ತು ಬಿಹಾರ ಪೊಲೀಸ್ ಸಿಬ್ಬಂದಿ ಈ ಶೋಧಕಾರ್ಯಾಚಣೆಯಲ್ಲಿ ಭಾಗವಹಿಸಿದ್ದರು. ಘಟನಾ ಸ್ಥಳದಿಂದ ಒಂದು ಎಕೆ -47 ರೈಫಲ್ ಮತ್ತು ಒಂದು ಐಎನ್‌ಎಸ್ಎಎಸ್ ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಧಿಕೃತ ಹೇಳಿಕೆಯ ಪ್ರಕಾರ, ಮಾವೋವಾದಿಗಳ ವಲಯ ಕಮಾಂಡರ್ ಅಲೋಕ್ ಯಾದವ್ ಈ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಕೊಂದಿದ್ದಾನೆ ಎಂದು ವರದಿಯಾದ ನಂತರ ಭದ್ರತಾ ಪಡೆಗಳು ಮುಂಜಾನೆ 12.20 ರ ಸುಮಾರಿಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಇಂದು ಬೆಳಿಗ್ಗೆ ಮಹೂರಿ ಗ್ರಾಮ ಪ್ರದೇಶದ ದೇವಾಲಯವೊಂದರ ಬಳಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಕೋಬ್ರಾ ಕಮಾಂಡೋಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ದಾಳಿ ಸಂಭವಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತಪಟ್ಟ ಮೂವರು ಮಾವೋವಾದಿಗಳ ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್, ಕೇಂದ್ರ ಮೀಸಲು ಪೊಲೀಸ್ ಪಡೆಯ ವಿಶೇಷ ಘಟಕವಾಗಿದ್ದು, ಇದನ್ನು ಮಾವೋವಾದಿ ವಿರೋಧಿ ಕಾರ್ಯಾಚರಣೆಗಾಗಿ ಬಿಹಾರ ರಾಜ್ಯದಲ್ಲಿ ನಿಯೋಜಿಸಲಾಗಿದೆ.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ