ಮಧ್ಯಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಮೂವರು ಸಾವು

ಮಧ್ಯಪ್ರದೇಶದ ಸಿಂಗ್ರೌಳಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಎರಡು ರೈಲುಗಳು ಒಂದೇ ಹಳಿಯಲ್ಲಿ ಬಂದಿದ್ದರಿಂದ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

news18-kannada
Updated:March 1, 2020, 1:03 PM IST
ಮಧ್ಯಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಮೂವರು ಸಾವು
ಅಪಘಾತವಾದ ರೈಲು
  • Share this:
ಭೋಪಾಲ್ (ಮಾ.1)​: ಮಧ್ಯಪ್ರದೇಶದಲ್ಲಿ ಎರಡು ಸರಕು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಮಧ್ಯಪ್ರದೇಶದ ಸಿಂಗ್ರೌಳಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಎರಡು ರೈಲುಗಳು ಒಂದೇ ಹಳಿಯಲ್ಲಿ ಬಂದಿದ್ದರಿಂದ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಂದು ರೈಲಿನಲ್ಲಿ ಕಲ್ಲಿದ್ದಲನ್ನು ತುಂಬಲಾಗಿತ್ತು. ಮತ್ತೊಂದು ರೈಲು ಖಾಲಿ ತೆರಳುತ್ತಿತ್ತು.  ರೈಲು ಡಿಕ್ಕಿ ಹೊಡೆದ ರಭಸಕ್ಕೆ ರೈಲು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂರು ಶವ ಹೊರತೆಗೆಯಲಾಗಿದೆ. ಅನೇಕರು ರೈಲಿನಡಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಸದ್ಯ, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ರೈಲು ಅಪಘಾತದಿಂದ ಈ ಮಾರ್ಗದಲ್ಲಿ ಸಾಗಬೇಕಿದ್ದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹೀಗಾಗಿ ಕೆಲ ರೈಲುಗಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿ ರೈಲ್ವೆ ಇಲಾಖೆ ತನಿಖೆಗೆ ಆದೇಶಿಸಿದೆ.
First published: March 1, 2020, 1:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading