ಹೆಚ್ಚುವರಿ ಸಾಲ ಪಡೆಯಲು ನಿರ್ಬಂಧ ಹೇರಿದ ಕೇಂದ್ರದ ನಡೆಗೆ 3 ರಾಜ್ಯಗಳ ಆಕ್ಷೇಪ

ರಾಜ್ಯಗಳು ಸಾಲ ಪಡೆಯಲು ಕೇಂದ್ರ ಸರ್ಕಾರ ಷರತ್ತು ವಿಧಿಸಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜ್ಯಗಳ ಅಭಿಪ್ರಾಯ ಪಡೆಯುತ್ತಿಲ್ಲ ಎಂದು ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

  • News18
  • Last Updated :
  • Share this:
ನವದೆಹಲಿ(ಮೇ 19): ಕಂಡು‌ಕೇಳರಿಯದ‌‌ ಕೊರೋನಾ ‌ಮತ್ತು ಅದನ್ನು ನಿಯಂತ್ರಿಸಲು‌ ತಂದ ಲಾಕ್​ಡೌನ್​ಗಳಿಂದಾಗಿ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿರುವ ರಾಜ್ಯ ಸರ್ಕಾರಗಳು ಪದೇ ಪದೇ ಕೇಂದ್ರ ಸರ್ಕಾರದ ಮುಂದೆ ಹಣಕಾಸಿನ ನೆರವಿಗೆ ಮ‌ನವಿ ಮಾಡಿದವು. ಪರಿಸ್ಥಿತಿ ನಿಭಾಯಿಸಲು ಹಣಕಾಸಿನ ನೆರವು ನೀಡದ ಕೇಂದ್ರ ಸರ್ಕಾರ ಈಗ ರಾಜ್ಯಗಳು ಹೆಚ್ಚುವರಿ ಸಾಲ ಪಡೆಯುವುದಕ್ಕೂ ಕೆಲ ನಿರ್ಬಂಧಗಳನ್ನು ವಿಧಿಸಿದೆ‌. ಕೇಂದ್ರ ಸರ್ಕಾರದ ಈ ನಡೆಗೆ ರಾಜ್ಯಗಳು ಕಿಡಿಕಾರಿವೆ.

ಪ್ರಧಾನಿ ಮೋದಿಗೆ ಪತ್ರ ಬರೆದಿರುವ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಡೆಯಿಂದ ಒಕ್ಕೂಟ ವ್ಯವಸ್ಥೆಗೆ ಅರ್ಥವೇ ಇಲ್ಲದಂತಾಗಿದೆ ಎಂದು‌ ಆಕ್ಷೇಪಿಸಿದ್ದಾರೆ.

ಕೊರೊನಾ ಮತ್ತು ಲಾಕ್​ಡೌನ್ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರದ ಹಣಕಾಸಿನ ನೆರವು ಸಿಗದೇ ಇದ್ದರೆ ರಾಜ್ಯಗಳಿಗೆ ಸಾಲ ಪಡೆದು ಪರಿಸ್ಥಿತಿಯನ್ನು ನಿಭಾಯಿಸುವುದು ಅನಿವಾರ್ಯ ಆಗುತ್ತದೆ. ಆದರೀಗ ಕೇಂದ್ರ ಸರ್ಕಾರ ರಾಜ್ಯಗಳು ಹೆಚ್ಚುವರಿ ಸಾಲ ಪಡೆಯಲು ಕೆಲವು ಷರತ್ತುಗಳನ್ನು ವಿಧಿಸಿದೆ. ಈ ಬಗ್ಗೆ ಪತ್ರ ಬರೆದಿರುವ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಕೊರೋನಾ ಎಫೆಕ್ಟ್​; ಕೇಂದ್ರ ಸರ್ಕಾರಿ ನೌಕರರಿಗೂ ಇನ್ನುಮುಂದೆ 3 ಶಿಫ್ಟ್​ನಲ್ಲಿ ಕೆಲಸ

ರಾಜ್ಯಗಳು ಸಾಲ ಪಡೆಯಲು ಕೇಂದ್ರ ಸರ್ಕಾರ ಷರತ್ತು ವಿಧಿಸಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜ್ಯಗಳ ಅಭಿಪ್ರಾಯ ಪಡೆಯುತ್ತಿಲ್ಲ. ಕೇಂದ್ರ ಸರ್ಕಾರವೇ ಏಕಾಏಕಿ ನಿರ್ಧರಿಸಿ ರಾಜ್ಯಗಳ  ಮೇಲೆ ಆ ನಿರ್ಣಯಗಳನ್ನು ಹೇರುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿ ರಾಜ್ಯಗಳು ಸಾಲ ಪಡೆಯಲು ಕೇಂದ್ರ ಸರ್ಕಾರ ಷರತ್ತು ವಿಧಿಸುತ್ತಿರುವುದರಿಂದ ಒಕ್ಕೂಟ ವ್ಯವಸ್ಥೆ ಎಂಬುದೇ ಹೊರಟುಹೋಗಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದಂತೆ ಮಾಡಿದೆ‌. ಅಸಂತೋಷದಿಂದ ಕೂಡಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರದಿ: ಧರಣೀಶ್ ಬೂಕನಕೆರೆ
First published: