ಶ್ರೀನಗರ (ಜೂ.16): ಜಮ್ಮು ಕಾಶ್ಮೀರದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಕೇವಲ ಎರಡು ವಾರಗಳಲ್ಲಿ 14 ಭಯೋತ್ಪಾದಕರನ್ನು ಸೇನೆ ಹತ್ಯೆ ಮಾಡಿದಂತಾಗಿದೆ.
ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ಶೋಫಿಯಾನಾ ಜಿಲ್ಲೆಯ ತುರ್ಕವಾಂಗಂ ಭಾಗದಲ್ಲಿ ರಾಷ್ಟ್ರೀಯ ರೈಫಲ್ಸ್ ಹಾಗೂ ಭಯೋತ್ಪಾದಕರ ನಡುವೆ ಬೆಳಗ್ಗೆ ಐದು ಗಂಟೆ ಸುಮಾರಿ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ), ಕೇಂದ್ರ ಮೀಸಲು ಪಡೆ (ಸಿಆರ್ಪಿಎಫ್) ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಮುಂಜಾನೆ 6:30ರ ಸುಮಾರಿಗೆ ಕಾರ್ಯಾಚರಣೆ ಪೂರ್ಣಗೊಂಡಿದೆ.
ಈ ಬಗ್ಗೆ ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದಿದ್ದಾರೆ. ಈ ಮೂಲಕ ಕಣಿವೆ ರಾಜ್ಯವನ್ನು ಉಗ್ರ ಮುಕ್ತವನ್ನಾಗಿ ಮಾಡುವ ಕಾರ್ಯಾಚರಣೆ ಮುಂದುವರಿದಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಎನ್ಕೌಂಟರ್; 4 ದಿನಗಳಲ್ಲಿ 11 ಉಗ್ರರ ಹತ್ಯೆ
ಇದೇ ತಿಂಗಳು ಏಳರಂದು ಶೋಫಿಯಾನಾ ಭಾಗದಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ಐವರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದರು. ಎಂಟನೇ ತಾರೀಖಿನಂದು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕಳೆದ ಬುಧವಾರ ಇಬ್ಬರನ್ನು ಹತ್ಯೆ ಗೈಯಲ್ಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ