ಜಮ್ಮು ಕಾಶ್ಮೀರದಲ್ಲಿ ರಾತ್ರೋರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರ ಹತ್ಯೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಶನಿವಾರ ರಾತ್ರಿ ಜಮ್ಮು ಕಾಶ್ಮೀರದ ಶ್ರೀನಗರದ ಪಂತಚೌಕ್​ನಲ್ಲಿ ಎನ್​ಕೌಂಟರ್ ನಡೆದಿದ್ದು, ಒಟ್ಟು ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಪೊಲೀಸ್ ಸಿಬ್ಬಂದಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ.

  • Share this:

ಶ್ರೀನಗರ (ಆ. 30): ಜಮ್ಮು ಕಾಶ್ಮೀರದಲ್ಲಿ ಎರಡು ದಿನಗಳಿಂದ ರಾತ್ರಿ ಎನ್​ಕೌಂಟರ್ ನಡೆದಿದ್ದು, ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಓರ್ವ ಪೊಲೀಸ್ ಕೂಡ ಹುತಾತ್ಮರಾಗಿದ್ದಾರೆ. ನಿನ್ನೆ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಸಿಆರ್​ಪಿಎಫ್​ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ.


ಶನಿವಾರ ರಾತ್ರಿ ಜಮ್ಮು ಕಾಶ್ಮೀರದ ಶ್ರೀನಗರದ ಪಂತಚೌಕ್​ನಲ್ಲಿ ಎನ್​ಕೌಂಟರ್ ನಡೆದಿದ್ದು, ಒಟ್ಟು ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಪೊಲೀಸ್ ಸಿಬ್ಬಂದಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ನಾಕಾಬಂದಿ ನಡೆಸಿದ್ದ ಪೊಲೀಸರು ಮತ್ತು ಸಿಆರ್​ಪಿಎಫ್ ಮೇಲೆ ಉಗ್ರರು ದಾಳಿ ಆರಂಭಿಸಿದರು.



ಶೋಧ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಮತ್ತೊಮ್ಮೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಭದ್ರತಾ ಪಡೆಯ ಯೋಧರು ಉಗ್ರರಿಗೆ ತಕ್ಕ ಉತ್ತರ ನೀಡಿದ್ದಾರೆ. ಇದುವರೆಗೆ ಒಟ್ಟು ಮೂವರು ಉಗ್ರರನ್ನು ಮಟ್ಟಹಾಕಿದ್ದಾರೆ. ಕೂಡಲೇ ಪ್ರದೇಶವನ್ನು ಸುತ್ತುವರಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ.

ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಜಮ್ಮು ಕಾಶ್ಮೀರದಲ್ಲಿ ಎರಡು ಎನ್​ಕೌಂಟರ್ ನಡೆದಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಿನ್ನೆ ನಡೆದ ಎನ್​ಕೌಂಟರ್​ನಲ್ಲಿ ಹಿಜ್​ಬುಲ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರು ಹತ್ಯೆಯಾಗಿದ್ದು, ಓರ್ವ ಯೋಧರು ಹುತಾತ್ಮರಾಗಿದ್ದಾರೆ. ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿತ್ತು.

top videos
    First published: