• ಹೋಂ
 • »
 • ನ್ಯೂಸ್
 • »
 • ದೇಶ-ವಿದೇಶ
 • »
 • Ratnaprabha: ತಿರುಪತಿ ಉಪಚುನಾವಣೆ: ನಿವೃತ್ತ ಮುಖ್ಯಕಾರ್ಯದರ್ಶಿ ಕೆ ರತ್ನಪ್ರಭಾಗೆ ಬಿಜೆಪಿ ಟಿಕೆಟ್​ ಘೋಷಣೆ

Ratnaprabha: ತಿರುಪತಿ ಉಪಚುನಾವಣೆ: ನಿವೃತ್ತ ಮುಖ್ಯಕಾರ್ಯದರ್ಶಿ ಕೆ ರತ್ನಪ್ರಭಾಗೆ ಬಿಜೆಪಿ ಟಿಕೆಟ್​ ಘೋಷಣೆ

ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

ಪ್ರಸ್ತುತ ಬಿಎಸ್​ ಯಡಿಯೂರಪ್ಪ ಸರ್ಕಾರದಲ್ಲಿ ಕೆ ರತ್ನಪ್ರಭಾ ಅವರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ  ಕಾರ್ಯನಿರ್ವಹಿಸುತ್ತಿದ್ದಾರೆ

 • Share this:

  ಸಿದ್ದರಾಮಯ್ಯ ಸರ್ಕಾರದಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಹೆಸರಾಗಿದ್ದ  ನಿವೃತ್ತ ಐಎಎಸ್​ ಅಧಿಕಾರಿ ಕೆ ರತ್ನಪ್ರಭಾ ಅವರಿಗೆ ಬಿಜೆಪಿ ಟಿಕೆಟ್​ ನೀಡಿದೆ. ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಉಪಚುನಾವಣಾ ಕಣದ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿಯಲಿದ್ದಾರೆ. ಕಳೆದ ಏಪ್ರಿಲ್​ನಲ್ಲಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ  ಬಿಜೆಪಿ ಸೇರ್ಪಡನೆಗೊಂಡಿದ್ದ ರತ್ನಪ್ರಭಾ ಕಲಬುರಗಿಯಿಂದ ಕಲಬುರ್ಗಿ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಾರೆ ಎನ್ನಲಾಗಿತ್ತು. ಆದರೆ, ಬಿಜೆಪಿ ಆ ಸಮಯದಲ್ಲಿ ಉಮೇಶ್​ ಜಾಧವ್​ಗೆ ಟಿಕೆಟ್​ ನೀಡಿತು. ಎಸ್​ಸಿ ಮೀಸಲು ಕ್ಷೇತ್ರವಾದ ಇದಾಗಿದೆ. ಕಳೆದ ಸೆಪ್ಟೆಂಬರ್​ನಲ್ಲಿ ತಿರುಪತಿ ಸಂಸದರಾಗಿದ್ದ ದುರ್ಗಾ ಪ್ರಸಾದ್​ ರಾವ್​ ಕೋವಿಡ್​ನಿಂದಾಗಿ ನಿಧನರಾಗಿದ್ದರು.


  ಇನ್ನು ಈ ಕ್ಷೇತ್ರಕ್ಕೆ ಟಿಡಿಪಿಯಿಂದ ಪನಬಗ ಲಕ್ಷ್ಮೀ ಅವರನ್ನು ಕಣಕ್ಕೆ ಇಳಿಸುವುದಾಗಿ ಚಂದ್ರಬಾಬು ನಾಯ್ಡು ಅವರು ತಿಳಿಸಿದ್ದರು. ಬಿಜೆಪಿಗೆ ಮಿತ್ರ ಪಕ್ಷ ಜನಸೇನಾ ಅಧ್ಯಕ್ಷ ಪವನ್​ ಕಲ್ಯಾಣ್​ ಬೆಂಬಲ ವ್ಯಕ್ತಪಡಿಸಿದ್ದು, ಕೇಸರಿ ಪಾಳೆಯಕ್ಕೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ.


  ಸಿದ್ದರಾಮಯ್ಯ ಸರ್ಕಾರದಲ್ಲಿ ಮುಖ್ಯ ಕಾರ್ಯದರ್ಶಿಯಾಗಿದ್ದ ರತ್ನಪ್ರಭಾ


  ಮೂಲತಃ ಆಂಧ್ರಪ್ರದೇಶದವಾರದ ರತ್ನಪ್ರಭಾ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ದಿಟ್ಟ, ನೇರ ಹಾಗೂ ಜನಪರ ಆಡಳಿತದ ಮೂಲಕ ಹೆಸರಾಗಿದ್ದ ಅವರನ್ನು ಸಿದ್ದರಾಮಯ್ಯ ಸರ್ಕಾರ ಆಯ್ಕೆ ಮಾಡಿದಾಗ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಪರಿಶಿಷ್ಠ ಜಾತಿಗೆ ಸೇರಿದ ಮಹಿಳಾ ಅಧಿಕಾರಿಯೊಬ್ಬರು ಸರ್ಕಾರದ ಮುಖ್ಯ ಹುದ್ದೆ ಅಲಂಕರಿಸಿದ್ದರ ಬಗ್ಗೆ ಶ್ಲಾಘನೆ ಕೂಡ ವ್ಯಕ್ತವಾಗಿತ್ತು. ಕಾಂಗ್ರೆಸ್​ ಸರ್ಕಾರದ ಬಳಿಕ ರಚನೆಯಾದ ಮೈತ್ರಿ ಸರ್ಕಾರದಲ್ಲಿ ಮೂರು ತಿಂಗಳು ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಿತ್ತು.


  ಪ್ರಸ್ತುತ ಬಿಎಸ್​ ಯಡಿಯೂರಪ್ಪ ಸರ್ಕಾರದಲ್ಲಿ ಕೆ ರತ್ನಪ್ರಭಾ ಅವರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ  ಕಾರ್ಯನಿರ್ವಹಿಸುತ್ತಿದ್ದಾರೆ

  Published by:Seema R
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು