Goa Election: ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 5 ಸಾವಿರ ರೂ. - ಮಹುವಾ ಮೊಯಿತ್ರಾ

ಮೊನ್ನೆ ತಾನೇ ಗೋವಾಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ 'ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ಕೊಡಲಾಗುವುದು' ಎಂದು ಘೋಷಿಸಿದ್ದರು‌.

ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ

  • Share this:
ನವದೆಹಲಿ, ‌ಡಿ. 11: ಮುಂದಿನ‌ ವರ್ಷದ ಮಾರ್ಚ್ - ಏಪ್ರಿಲ್ ತಿಂಗಳಲ್ಲಿ ಉತ್ತ ಪ್ರದೇಶ (Uttar Pradesh), ಪಂಜಾಬ್ (Punjab) ಮಣಿಪುರ (Manipur) ಉತ್ತರ ಖಂಡ (Uttarkhand) ಮತ್ತು ಗೋವಾ (Goa) ವಿಧಾನಸಭಾ ಚುನಾವಣೆ ನಡೆಯಲಿದೆ. 2024ರ ಲೋಕಸಭಾ‌ ಚುನಾವಣೆಯ (2024 Lokasabha Election) ದೃಷ್ಟಿಯಿಂದ ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶ‌ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಅತ್ಯಂತ ಮಹತ್ವದ್ದಾಗಿದ್ದರೆ ಸ್ಥಳೀಯ ಪಕ್ಷಗಳಾದ ಆಮ್ ಆದ್ಮಿ‌ಪಕ್ಷ (Aam Admi Party) ಮತ್ತು ತೃಣಮೂಲ ಕಾಂಗ್ರೆಸ್ (Trinamool Congress) ಗಳಿಗೆ ನೆಲೆ ವಿಸ್ತರಣೆ ಮಾಡಿಕೊಳ್ಳುವ ದೃಷ್ಟಿಯಿಂದ ಗೋವಾ ವಿಧಾನಸಭಾ ಚುನಾವಣೆ ಅತ್ಯಂತ ನಿರ್ಣಾಯಕವಾದುದಾಗಿದೆ. ಈ‌ ಹಿನ್ನೆಲೆಯಲ್ಲಿ 'ಗೋವಾದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 5 ಸಾವಿರ ರೂಪಾಯಿಗಳನ್ನು ಪ್ರೋತ್ಸಾಹಧನ ನೀಡಲಾಗುವುದು' ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತಿಳಿಸಿದ್ದಾರೆ.

ಮಹಿಳೆಯರಿಗೆ 5 ಸಾವಿರ ರೂಪಾಯಿಗಳನ್ನು ಪ್ರೋತ್ಸಾಹಧನ

ಅಕ್ಟೋಬರ್ 28ರಂದು ಟಿಎಂಸಿ ಅಧಿನಾಯಕಿ ಹಾಗೂ ಪಶ್ಚಿಮ‌ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal Chief Minister Mamata Banarji) ಗೋವಾಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು. ಇದಕ್ಕೂ ಮೊದಲು ಗೋವಾ ಪ್ರವಾಸದಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡೇರಿಕ್ ಓ'ಬ್ರೆಯನ್ (Trinamool Congress Rajasabha Member Derek O’Brien), ಗಾಯಕ ಲಕ್ಕಿ ಅಲಿ (Singer Lucky Ali) ಮತ್ತು ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ನಫೀಸಾ ಅಲಿ (Actress and Activist Nafisa Ali) ಅವರನ್ನು ಭೇಟಿ ಮಾಡಿ ಇವರಿಬ್ಬರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದರು. ಈಗ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಗೋವಾದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 5 ಸಾವಿರ ರೂಪಾಯಿಗಳನ್ನು ಪ್ರೋತ್ಸಾಹಧನ ನೀಡಲಾಗುವುದು' ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ಕಳುವಾಗಿದ್ದ ಮರಡೋನಾರ 20 ಲಕ್ಷ ಮೌಲ್ಯದ ವಾಚ್​ ಅಸ್ಸಾಂನಲ್ಲಿ ಪತ್ತೆ

ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೂ ಹಣ

ಟಿಎಂಸಿ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ‘ಗೃಹ ಲಕ್ಷ್ಮಿ' (Gruha Lakshmi) ಎಂಬ ಹೆಸರಿನ ಯೋಜನೆಯಡಿ ರಾಜ್ಯದ ಪ್ರತಿಯೊಬ್ಬ ಮಹಿಳೆಗೂ ತಿಂಗಳಿಗೆ 5 ಸಾವಿರ‌‌‌ ರೂಪಾಯಿಗಳನ್ನು ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದು’ ಎಂದು ಮೊಯಿತ್ರಾ ತಿಳಿಸಿದ್ದಾರೆ. ಈ ‘ಗೃಹ ಲಕ್ಷ್ಮಿ' ಯೋಜನೆಯು 3.5 ಲಕ್ಷ ಮಹಿಳೆಯರಿಗೆ ಅನ್ವಯವಾಗಲಿದೆ ಎಂದು ವಿವರಿಸಿದ್ದಾರೆ. ಗೋವಾದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಸದ್ಯ ಮಹಿಳೆಯರಿಗೆ ಪ್ರತಿ ತಿಂಗಳಿಗೆ 1,500 ರೂಪಾಯಿಗಳನ್ನು ನೀಡಲಾಗುತ್ತಿದೆ. ಬಿಜೆಪಿ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡಲು ಆದಾಯ ಮಿತಿ ವಿಧಿಸಿದೆ. ಇದರಿಂದ ಕೇವಲ 1.5 ಲಕ್ಷ ಮಹಿಳೆಯರಿಗೆ ಮಾತ್ರ ಪ್ರೋತ್ಸಾಹ ಧನ ಸಿಗುವಂತಾಗಿದೆ ಎಂದು ವಿವರಿಸಿದ್ದಾರೆ.

ದೀದಿ ಮ್ಯಾಜಿಕ್​ ನಡೆಯುತ್ತಾ? 

ತೃಣಮೂಲ ಕಾಂಗ್ರೆಸ್ ಪಕ್ಷ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧೆ ಮಾಡುವುದಾಗಿ ಘೋಷಿಸಿದಾಗಲೇ‌ ವಿಶೇಷ ರೀತಿಯ ಕುತೂಹಲ ನಿರ್ಮಾಣ ಆಗಿತ್ತು. ಬಳಿಕ ಟಿಎಂಸಿ ಗೋವಾದಲ್ಲಿ ತನ್ನ‌ ಚುನಾವಣಾ ತಯಾರಿಯನ್ನು‌ ಚುರುಕುಗೊಳಿಸಿತ್ತು. ಎರಡು ದಿನ‌ ಗೋವಾದಲ್ಲಿ ಇರಲಿರುವ ಮಮತಾ ಬ್ಯಾನರ್ಜಿ ಗೋವಾ ವಿಧಾನಸಭಾ ಚುನಾವಣೆಗೆ ಇನ್ನಷ್ಟು ಮೆರುಗು ನೀಡಿದ್ದರು. ಮಾಜಿ  ಮುಖ್ಯಮಂತ್ರಿ ಲುಝಿನ್ಹೋ ಫಲೇರೋ (Former Chief Minister Luizinho Falerio) ಮತ್ತು ಕಾಂಗ್ರೆಸ್ (Congress) ಪಕ್ಷದ ಇತರ ದೊಡ್ಡ ನಾಯಕರು ಟಿಎಂಸಿ ಸೇರಿಕೊಂಡಿದ್ದರು.

ಟಿಎಂಸಿಯ ರೀತಿಯಲ್ಲೇ ಗೋವಾ ಮೇಲೆ ವಿಶೇಷ ಗಮನ‌‌ ನೀಡಿರುವ ಆಮ್ ಆದ್ಮಿ ಪಕ್ಷ ಕೂಡ ತಾನು ಅಧಿಕಾರಕ್ಕೆ ಬಂದರೆ ವಿಶೇಷ ಸೌಲಭ್ಯ ನೀಡುವುದಾಗಿ ಘೋಷಿಸಿದೆ. 'ಗೃಹ ಆಧಾರ್' ಯೋಜನೆಯ ಮೊತ್ತವನ್ನು 1,500 ರೂಪಾಯಿಗಳಿಂದ 2,500 ರೂಪಾಯಿವರೆಗೆ ಹೆಚ್ಚಿಸಲಾಗುವುದು ಎಂದು ಹೇಳಿದೆ. ಇನ್ನೊಂದೆಡೆ ಮೊನ್ನೆ ತಾನೇ ಗೋವಾಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Congress General Secretary Priyanka Gandhi) 'ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉದ್ಯೋಗದಲ್ಲಿ ಶೇಕಡಾ 30ರಷ್ಟು ಮೀಸಲಾತಿ ಕೊಡಲಾಗುವುದು' ಎಂದು ಘೋಷಣೆ ಮಾಡಿದ್ದರು‌.
Published by:Kavya V
First published: