ಶ್ರೀನಗರ (ಅ. 13): ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಎನ್ಕೌಂಟರ್ ನಡೆಸಿ, ಹತ್ಯೆ ಮಾಡಿದ್ದಾರೆ. ಸೋಮವಾರ ಎಲ್ಇಟಿ ಮತ್ತು ಭಾರತೀಯ ಸೇನೆಯ ನಡುವೆ ಶ್ರೀನಗರದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಯಲ್ಲಿ ಎಲ್ಇಟಿ ಕಮಾಂಡರ್ ಸೇರಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ನೌಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಎಲ್ಇಟಿ ಕಮಾಂಡರ್ ಸೈಫುಲ್ಲಾ ಭಾರತೀಯ ಸೇನೆಯ ಎನ್ಕೌಂಟರ್ಗೆ ಬಲಿಯಾಗಿದ್ದಾನೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
#Update 2 terrorists killed during an encounter in the Rambagh area of Srinagar. The search is underway. Further details awaited: Jammu & Kashmir Police https://t.co/OpAuNs3H5O
— ANI (@ANI) October 12, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ