ಪೌರತ್ವ ಕಾಯ್ದೆ ಎಫೆಕ್ಟ್: ಅಸ್ಸಾಂ​​​ ಪ್ರವಾಸೋದ್ಯಮ ಇಲಾಖೆಗೆ ಬರೋಬ್ಬರಿ 1 ಸಾವಿರ ಕೋಟಿ ರೂ. ನಷ್ಟ 

ದೆಹಲಿಯಲ್ಲಿ ಜಾಮಿಯ ಮಿಲಿಯಾ ವಿವಿಯಲ್ಲಿ ವಿದ್ಯಾರ್ಥಿಗಳ ಹೋರಾಟ ಮುಂದುವರೆದಿದೆ. ಈ ವಿದ್ಯಾರ್ಥಿಗಳ ಹೋರಾಟಕ್ಕೆ ದೇಶದ ಹಲವು ವಿವಿ ವಿದ್ಯಾರ್ಥಿಗಳು ಬೆಂಬಲ ನೀಡಿದ್ಧಾರೆ. ಇನ್ನು ಈಶಾನ್ಯ ರಾಜ್ಯ ಅಸ್ಸಾಂನಲ್ಲಿಯೂ ಪ್ರತಿಭಟನೆಗಳು ಮುಂದುವರೆದಿದ್ದು, ಪ್ರವಾಸಿಗರು ಪ್ರವಾಸ ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ.

news18-kannada
Updated:January 1, 2020, 8:19 AM IST
ಪೌರತ್ವ ಕಾಯ್ದೆ ಎಫೆಕ್ಟ್: ಅಸ್ಸಾಂ​​​ ಪ್ರವಾಸೋದ್ಯಮ ಇಲಾಖೆಗೆ ಬರೋಬ್ಬರಿ 1 ಸಾವಿರ ಕೋಟಿ ರೂ. ನಷ್ಟ 
ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ
  • Share this:
ನವದೆಹಲಿ(ಡಿ.31): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟಗಳಿಂದ ಅಸ್ಸಾಂ ಸರ್ಕಾರಕ್ಕೆ ಭಾರೀ ಪ್ರಮಾಣದ ಮೊತ್ತ ನಷ್ಟವಾಗಿದೆ ಎನ್ನಲಾಗುತ್ತಿದೆ. ಸಿಎಎ ಮತ್ತು ಎನ್​​ಆರ್​​ಸಿ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಗಳ ಕಾರಣದಿಂದಾಗಿ ಅಸ್ಸಾಂನ ಪ್ರವಾಸೋದ್ಯಮ ಇಲಾಖೆಗೆ ಸುಮಾರು ಒಂದು ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಗುವಾಹಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ವಾಸೋದ್ಯಮ ಅಭಿವೃದ್ಧಿ ಇಲಾಖೆಯ ಅಧ್ಯಕ್ಷ ಜಯಂತ್ ಮಲ್ಲಾ ಬರುವಾ, ಸಿಎಎ ವಿರುದ್ಧ ಡಿಸೆಂಬರ್ ತಿಂಗಳಿನಲ್ಲಿ ಭಾರೀ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿವೆ. ಈ ಪ್ರತಿಭಟನೆಗಳಿಂದಾಗಿ ರಾಜ್ಯದ ಪ್ರವಾಸೋದ್ಯಮ ಇಲಾಖೆಗೆ ಭಾರೀ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಆರಂಭದಿಂದಲೂ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಇಡೀ ದೇಶವೇ ಪ್ರತಿಭಟಿಸುತ್ತಿದೆ. ಈಶಾನ್ಯ ರಾಜ್ಯ ಮತ್ತು ದೆಹಲಿಯಲ್ಲಿ ಶಾಂತ ರೀತಿಯಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ದಾಳಿ ನಡೆಸಿದ್ದರ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ . ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಪೊಲೀಸರು ಜಾಮಿಯಾ ವಿವಿಯ ಮಹಿಳಾ ಹಾಸ್ಟೆಲ್ ಪ್ರವೇಶಿಸಿ ವಿದ್ಯಾರ್ಥಿನಿಯರ ಮೇಲೆ ದಾಳಿ ಮಾಡಿದ್ದಾರೆನ್ನಲಾಗುತ್ತಿದೆ. ಜನರ ಧ್ವನಿ ಹತ್ತಿಕ್ಕುವ ವಿಷಯದಲ್ಲಿ ಯಾವುದೇ ರಾಜಿಯಿಲ್ಲ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಜಗಜ್ಜಾಹೀರುಗೊಳಿಸಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಕಾಶ್ಮೀರದಲ್ಲಿ ಎಸ್​​ಎಂಎಸ್​​​ ಸೇವೆ ಆರಂಭ: ನಾಳೆಯಿಂದ ಇಂಟರ್​​ನೆಟ್ ಸೇವೆ​​​ ಲಭ್ಯ

ದೇಶಾದ್ಯಂತ ತೀವ್ರ ಗಲಭೆಗೆ ಕಾರಣದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ. ಹಾಗೆಯೇ ಪಶ್ಚಿಮ ಬಂಗಾಳ ಸರ್ಕಾರ ಕೂಡ ತನ್ನ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬೆನ್ನಲೇ ಸಿಎಂ ಮಮತಾ ಬ್ಯಾನರ್ಜಿ ಈ ನಿರ್ಧಾರ ಘೋಷಣೆ ಮಾಡಿದ್ದಾರೆ.

ಪೌರತ್ವ ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತದೆಯಾದರೂ ಶಾಸನ ಜಾರಿಗೊಳಿಸಲೇಬೇಕೆಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸುವಂತಿಲ್ಲ. ಈ ಕಾಯ್ದೆಯೂ ಭಾರತದ ಸಂವಿಧಾನಕ್ಕೆ ಧಕ್ಕೆ ಉಂಟುಮಾಡುತ್ತದೆ. ಹಾಗಾಗಿ ತಾವು ಯಾವುದೇ ಕಾರಣಕ್ಕೂ ತಮ್ಮ ರಾಜ್ಯದಲ್ಲಿ ಸಿಎಬಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಾಗೆಯೇ ದೆಹಲಿಯಲ್ಲಿ ಜಾಮಿಯ ಮಿಲಿಯಾ ವಿವಿಯಲ್ಲಿ ವಿದ್ಯಾರ್ಥಿಗಳ ಹೋರಾಟ ಮುಂದುವರೆದಿದೆ. ಈ ವಿದ್ಯಾರ್ಥಿಗಳ ಹೋರಾಟಕ್ಕೆ ದೇಶದ ಹಲವು ವಿವಿ ವಿದ್ಯಾರ್ಥಿಗಳು ಬೆಂಬಲ ನೀಡಿದ್ಧಾರೆ. ಇನ್ನು ಈಶಾನ್ಯ ರಾಜ್ಯ ಅಸ್ಸಾಂನಲ್ಲಿಯೂ ಪ್ರತಿಭಟನೆಗಳು ಮುಂದುವರೆದಿದ್ದು, ಪ್ರವಾಸಿಗರು ಪ್ರವಾಸ ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ.
First published:December 31, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ