Tragic Incident: ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ 12 ಮಂದಿ ಸಾವು, ಹಲವರಿಗೆ ಗಾಯ

ಈ ದುರಂತ ಘಟನೆ ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ನಡೆದಿದೆ. ಹೊಸ ವರ್ಷದ ಆರಂಭವನ್ನು ಸಂಭ್ರಮಿಸಲು ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ದೇವಾಲಯಕ್ಕೆ ಆಗಮಿಸಿದ್ದರು.

ದೇವಾಲಯ

ದೇವಾಲಯ

  • Share this:
ಜಮ್ಮು(ಜ.1): ಹೊಸ ವರ್ಷದ ದಿನದಂದೇ(New Year) ಭೀಕರ ದುರಂತ ಸಂಭವಿಸಿದ್ದು, ಕರಾಳ ದಿನವಾಗಿ ಪರಿಣಮಿಸಿದೆ. ಹೊಸ ವರ್ಷಾಚರಣೆ ಪ್ರಯುಕ್ತ ಜಮ್ಮು-ಕಾಶ್ಮೀರದ(Jammu and Kashmir) ಮಾತಾ ವೈಷ್ಣೋದೇವಿ ದೇವಾಲಯ(Mata Vaishno Devi shrine)ಕ್ಕೆ ಆಗಮಿಸಿದ್ದ ಅನೇಕ ಭಕ್ತರು ನೂಕುನುಗ್ಗಲು(stampede) ಉಂಟಾಗಿ ಮೃತಪಟ್ಟಿದ್ದಾರೆ. ಸುಮಾರು 12 ಮಂದಿ ಸಾವನ್ನಪ್ಪಿದರೆ, 14ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇವಾಲಯ(Temple)ದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದರಿಂದ ಈ ನೂಕು ನುಗ್ಗಲು ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Narendra Modi) ಈ ಘಟನೆ ಕುರಿತಾಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ದುರಂತದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಕಾಲ್ತುಳಿತದಿಂದಾಗಿ ಸುಮಾರು 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಜೊತೆಗೆ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಥವಾ ಎಡಿಜಿಪಿ ಮುಖೇಶ್​​ ಸಿಂಗ್​ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಜನಸಂದಣಿ ಹೆಚ್ಚಾಗಿದ್ದರಿಂದ ನೂಕುನುಗ್ಗಲು

ಈ ದುರಂತ ಘಟನೆ ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ನಡೆದಿದೆ. ಹೊಸ ವರ್ಷದ ಆರಂಭವನ್ನು ಸಂಭ್ರಮಿಸಲು ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ದೇವಾಲಯಕ್ಕೆ ಆಗಮಿಸಿದ್ದರು. ಹೆಚ್ಚಿನ ಪ್ರಮಾಣದ ಜನರು ಸೇರಿದ ಪರಿಣಾಮ ನೂಕು ನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Explained: ಮತ್ತೆ ಕೊರೊನಾ ಸ್ಫೋಟ ಗ್ಯಾರಂಟಿ? ದೇಶದ ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಸೋಂಕು

ರಕ್ಷಣಾ ಕಾರ್ಯಾಚರಣೆ

ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಂಡಿದ್ದಾರೆ.

ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪ್ರಾಣ ಹಾನಿಯಾಗಿರುವುದು ಅತೀವ ದುಃಖ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.ಪ್ರಧಾನ ಮಂತ್ರಿಗಳ ಕಾರ್ಯಾಲಯವು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದೆ. ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಈ ಪರಿಹಾರ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ. ಗಾಯಾಳುಗಳಿಗೆ ₹ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇದನ್ನೂ ಓದಿ: Explained: ಕೊರೊನಾ ರೂಪಾಂತರಗಳನ್ನು ಸದೆಬಡೆಯಲು ಭಾರತ ರೆಡಿಯಾಗಿದೆ, ಏನೇನು ತಯಾರಿ ನಡೆದಿದೆ ನೋಡಿ...


"ಶ್ರೀ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಹಾನಿಯಾಗಿರುವುದು ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು‘‘ ಎಂದು ಜೆ & ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.ನಾನು ಪ್ರಧಾನಿಯೊಂದಿಗೆ ಮಾತನಾಡಿದ್ದೇನೆ ಮತ್ತು ಘಟನೆಯ ಬಗ್ಗೆ ಅವರಿಗೆ ವಿವರಿಸಿದ್ದೇನೆ ಎಂದು ಹೇಳಿದ್ದಾರೆ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ₹ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
Published by:Latha CG
First published: