ಅಮೆರಿಕ(ನ.21): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಮಗನಿಗೆ ಕೊರೋನಾ ಸೋಂಕು ದೃಢವಾಗಿದ್ದು, ಸದ್ಯ ಕ್ವಾರಂಟೈನ್ನಲ್ಲಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹ ಕೊರೋನಾ ಪಾಸಿಟಿವ್ ಬಂದಿದೆ ಎಂದು ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಮಗ ಡೊನಾಲ್ಡ್ ಜಾನ್ ಟ್ರಂಪ್ ಜೂನಿಯರ್ಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ಕ್ವಾರಂಟೈನ್ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಈ ವಾರದ ಆರಂಭದಲ್ಲೇ ಜೂನಿಯರ್ ಟ್ರಂಪ್ ಅವರಿಗೆ ಕೋವಿಡ್-19 ಖಚಿತವಾಗಿದ್ದು, ಆಗಿನಿಂದ ತಮ್ಮ ಕ್ಯಾಬಿನ್ನಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಳ್ಳದ ಜೂನಿಯರ್ ಟ್ರಂಪ್ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ. ಜೊತೆಗೆ ವೈದ್ಯರ ಸೂಚನೆ ಅನ್ವಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಟ್ರಂಪ್ ಜೂನಿಯರ್ಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಬಳಿಕ ಅವರ ಜೊತೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ.
ಸಂಪುಟ ಸರ್ಕಸ್ನಲ್ಲಿ ದಿಕೆಟ್ಟ ಆಡಳಿತ; ಸರ್ಕಾರದ ಕಾರ್ಯವೈಖರಿ ಬಗ್ಗೆ ಸಿದ್ದರಾಮಯ್ಯ ಟೀಕೆ
ಶ್ವೇತ ಭವನದಲ್ಲಿ ಯಾರೊಂದಿಗಾದರೂ ಸಂಪರ್ಕ ಹೊಂದಿದ್ದರೆ ಅವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯವೂ ನಡೆದಿದೆ. ಜೊತೆಗೆ ಅವರ ತಂದೆ ಡೊನಾಲ್ಡ್ ಟ್ರಂಪ್, ಟ್ರಂಪ್ ಪತ್ನಿ ಮೆಲೇನಿಯಾ ಮತ್ತು ಟ್ರಂಪ್ ಕಿರಿಯ ಮಗ ಬ್ಯಾರನ್ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಕೆಲವು ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿತ್ತು. ಮೈಲ್ಡ್(ಸೌಮ್ಯ) ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದ ಟ್ರಂಪ್ ಅವರನ್ನು ಶ್ವೇತ ಭವನದಿಂದ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ