ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಎನ್​ಕೌಂಟರ್​; ಇಬ್ಬರು ಉಗ್ರರ ಹತ್ಯೆ

ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆ ಕಡೆಗೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಉಗ್ರರ ಮೇಲೆ ಗುಂಡಿನ ಮಳೆಗೈದರು. ಈ ವೇಳೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latha CG | news18
Updated:June 17, 2019, 2:54 PM IST
ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಎನ್​ಕೌಂಟರ್​; ಇಬ್ಬರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
  • News18
  • Last Updated: June 17, 2019, 2:54 PM IST
  • Share this:
ಶ್ರೀನಗರ,(ಜೂ.17): ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಎನ್​​ಕೌಂಟರ್​ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಈ ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಕಾಶ್ಮೀರದ ಅಚಾಬಲ್​ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತ್ತು.

ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆ ಕಡೆಗೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಉಗ್ರರ ಮೇಲೆ ಗುಂಡಿನ ಮಳೆಗೈದರು. ಈ ವೇಳೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಟೆಂಪೋ ಚಾಲಕನನ್ನು ನಡುರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸರು; ಮೂವರು ಸಿಬ್ಬಂದಿ ಅಮಾನತು

ಕಳೆದ ಬುಧವಾರ ಜೈಷ್​-ಇ-ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕ  ಸಿಆರ್​ಪಿಎಫ್​ಗೆ ಸೇರಿದ ಗಸ್ತು ತಿರುಗುವ ತಂಡವನ್ನು ಟಾರ್ಗೆಟ್​ ಮಾಡಿದ್ದ ಎನ್ನಲಾಗಿದೆ. ಅರೆಸೇನಾ ಪಡೆಗೆ ಸೇರಿದ ಐವರು ಸಿಬ್ಬಂದಿ ಉಗ್ರರ ದಾಳಿಗೆ ಬಲಿಯಾಗಿದ್ದರು.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಮ್ಮು-ಕಾಶ್ಮೀರದ ಪೊಲೀಸ್​ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಓರ್ವ ನಾಗರಿಕ ಸೇರಿದಂತೆ ಕೆಲವು ಜನರು ಗಾಯಗೊಂಡಿದ್ದರು.

First published:June 17, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ