HOME » NEWS » National-international » TWO MILITANTS KILLED IN ENCOUNTER WITH SECURITY FORCES IN J KS SHOPIAN LG

ಜಮ್ಮು-ಕಾಶ್ಮೀರದಲ್ಲಿ ಎನ್​ಕೌಂಟರ್; ಇಬ್ಬರು ಉಗ್ರರ ಹತ್ಯೆ ಮಾಡಿದ ಭಾರತೀಯ ಸೇನೆ

ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಯು ಶೋಫಿಯಾನ್​ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತ್ತು ಎಂದು ತಿಳಿದು ಬಂದಿದೆ.

news18-kannada
Updated:April 22, 2020, 11:36 AM IST
ಜಮ್ಮು-ಕಾಶ್ಮೀರದಲ್ಲಿ ಎನ್​ಕೌಂಟರ್; ಇಬ್ಬರು ಉಗ್ರರ ಹತ್ಯೆ ಮಾಡಿದ ಭಾರತೀಯ ಸೇನೆ
ಪ್ರಾತಿನಿಧಿಕ ಚಿತ್ರ
  • Share this:
ಶ್ರೀನಗರ(ಏ.22): ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಇಂದು ಭಧ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ದಾಳಿಯಲ್ಲಿ ಭಾರತೀಯ ಸೇನೆಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಯು ಶೋಫಿಯಾನ್​ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿತ್ತು ಎಂದು ತಿಳಿದು ಬಂದಿದೆ.

ಭಾರತದಲ್ಲಿ ಕೊರೋನಾಗೆ 645 ಬಲಿ; 20 ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಭಾರತೀಯ ಸೇನೆಯೂ ಸಹ ಉಗ್ರರ ಕಡೆಗೆ ಗುಂಡಿನ ಸುರಿಮಳೆ ನಡೆಸಿತು. ಈ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಸಹ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹತ್ಯೆಯಾದ ಇಬ್ಬರು ಉಗ್ರರ ಗುರುತನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.
First published: April 22, 2020, 11:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories