News18 India World Cup 2019

ಜಮ್ಮುವಿನಲ್ಲಿ ಎನ್​ಕೌಂಟರ್​; ಎಲ್​ಇಟಿ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.

Latha CG | news18
Updated:June 14, 2019, 4:55 PM IST
ಜಮ್ಮುವಿನಲ್ಲಿ ಎನ್​ಕೌಂಟರ್​; ಎಲ್​ಇಟಿ ಸಂಘಟನೆಯ ಇಬ್ಬರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
Latha CG | news18
Updated: June 14, 2019, 4:55 PM IST
ಶ್ರೀನಗರ,(ಜೂ.14): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಲಷ್ಕರ್​-ಇ-ತೊಹಿಬಾ (ಎಲ್​ಇಟಿ) ಸಂಘಟನೆಗೆ ಸೇರಿದ ಭಯೋತ್ಪಾದಕರು ಎಂದು ಭದ್ರತಾ ಪಡೆ ತಿಳಿಸಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಆವಂತಿಪುರ ಪ್ರದೇಶದ ಸುತ್ತಮುತ್ತ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಉಗ್ರರ ಕಡೆಗೆ ಗುಂಡಿನ ಮಳೆ ಸುರಿಸಿದರು. ಪರಿಣಾಮ ಈ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರು ಹತರಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: SCO Summit | ಭಯೋತ್ಪಾದನೆ ವಿರುದ್ಧ ಯುದ್ಧ ಸಾರಲು ಜಾಗತಿಕ ಸಮ್ಮೇಳನ ಆಯೋಜನೆಗೆ ಪ್ರಧಾನಿ ಮೋದಿ ಕರೆ

ಎನ್​ಕೌಂಟರ್​ನಲ್ಲಿ ಹತ್ಯೆಗೈದ ಉಗ್ರರನ್ನು ಇರ್ಫಾನ್​ ಅಹಮದ್​ ದೆಗು ಅಲಿಯಾಸ್​ ಅಬು ಜರಾರ್​ ಮತ್ತು ತಸದುಕ್​ ಅಮಿನ್​ ಎಂದು ಗುರುತಿಸಲಾಗಿದೆ. ದಾಳಿ ನಡೆದ ಸ್ಥಳದಲ್ಲಿ ಉಗ್ರರ ಮದ್ದು-ಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದರು.

ದಾಳಿಯಲ್ಲಿ ಹತರಾದ ಇಬ್ಬರು ಉಗ್ರರು ಎಲ್​ಇಟಿ ಸಂಘಟನೆಗೆ ಸೇರಿದವರಾಗಿದ್ದು, ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿದ್ದರು. ಇಬ್ಬರ ಮೇಲೂ ಕ್ರಿಮಿನಲ್​ ಕೇಸ್​ಗಳು ದಾಖಲಾಗಿದ್ದವು  ಎಂದು ಮೂಲಗಳು ತಿಳಿಸಿವೆ.

First published:June 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...