ಕಾಶ್ಮೀರದ ಪುಲ್ವಾಮಾ ಬಳಿ ಎನ್​ಕೌಂಟರ್; ಭಾರತೀಯ ಸೇನೆಯಿಂದ ಇಬ್ಬರು ಉಗ್ರರ ಹತ್ಯೆ

ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ತ್ರಾಲ್​ನ ಚೆವಾ ಉಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಶ್ರೀನಗರ (ಜೂ. 26): ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿಯಿಂದ ನಡೆದ ಎನ್​ಕೌಂಟರ್​ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ತ್ರಾಲ್​ನ ಚೆವಾ ಉಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಕೂಡಲೇ ಎನ್​ಕೌಂಟರ್ ಕಾರ್ಯಾಚರಣೆ ಮಾರ್ಪಡಿಸಿದ ಭದ್ರತಾ ಪಡೆಗಳು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.ನಿನ್ನೆ ಸಂಜೆಯಿಂದ ಆರಂಭವಾದ ಎನ್​ಕೌಂಟರ್ ಕಾರ್ಯಾಚರಣೆ ಇನ್ನೂ ಮುಂದುವರೆಯುತ್ತಿದೆ. ಇಂದು ಬೆಳಗ್ಗೆ ಒಬ್ಬ ಉಗ್ರನನ್ನು ಹತ್ಯೆ ಮಾಡಿದ್ದರು. ನಂತರ ಇನ್ನೋರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
First published: