ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯು 2020ರ ಯುಜಿಸಿ ಎನ್‌ಇಟಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಂತಿಮ ಕೀ-ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ಎನ್‌ಇಟಿ 2020 ಪರೀಕ್ಷೆಯನ್ನು ಸೆಪ್ಟೆಂಬರ್ 24 ರಿಂದ ನವೆಂಬರ್13 ರವರೆಗೆ ದೇಶದಾದ್ಯಂತ ಹಲವು ಕೇಂದ್ರಗಳಲ್ಲಿ ನಡೆಸಿತ್ತು. ಈ ವರ್ಷ ಯುಜಿಸಿ ನೆಟ್ ಪರೀಕ್ಷೆಗೆ ಒಟ್ಟು 8,60,976 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 5,26,707 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
81 ಎನ್‌ಇಟಿ ವಿಷಯಗಳಿಗೆ (02 ಶಿಫ್ಟ್‌ಗಳಲ್ಲಿ ಇಂಗ್ಲಿಷ್, ವಾಣಿಜ್ಯ ಮತ್ತು ಹಿಂದಿ) ಅಂತಿಮ ಉತ್ತರ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. https://nta.ac.in/Download/Notice/Notice_20201130081103.pdf
ಎನ್‌ಇಟಿ ಅಂತಿಮ ಕೀ ಉತ್ತರಗಳನ್ನು ಚೆಕ್ ಮಾಡುವುದು ಹೇಗೆ:
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ಹೋಗಿ ಅಂತಿಮ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು https://nta.ac.in/Home
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ