UIDAI Recruitment 2021: ಖಾಲಿ ಇರುವ ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಖಾಲಿ ಇರುವ 4 ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
    ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಖಾಲಿ ಇರುವ 4 ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ವಿದ್ಯಾರ್ಹತೆಯನ್ನುಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,23,100 ನಿಂದ 2,15,900ರೂಗಳ ವರೆಗೆ ವೇತನ ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ (ಟೆಕ್ನಾಲಜಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ: ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://uidai.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಬೇಕು. ನಂತರ ಭರ್ತಿ ಮಾಡಿ ಅಗತ್ಯವಾದ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕು. ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ತಲುಪಲು ಕೊನೆಯ ದಿನಾಂಕವಾಗಿದೆ.

    ಕಚೇರಿ ವಿಳಾಸ: ADG (HR), Unique Identification authority of india (UIDAI), 4th floor, bangla sahib road, behind kali mandir, gole market, New delhi-110001.
    Published by:Harshith AS
    First published: