ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಾಸ್ಕರ್ ಮುಂಬೈನಲ್ಲಿ ಬಂಧನ!
ಕಾಸ್ಕರ್ ಹಲವು ಲಾಂಡರಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಮತ್ತು ಮಹಾರಾಷ್ಟ್ರದ ಪ್ರಮುಖ ಬಿಲ್ಡರ್‌ನನ್ನು ಸುಲಿಗೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಆತನ ವಿರುದ್ಧ ಪ್ರಕರಣ ದಾಖಲಿಸಿದೆ.
ಮುಂಬೈ (ಮಹಾರಾಷ್ಟ್ರ): ಅಂಡರ್ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಾಸ್ಕರ್ನನ್ನು ಎನ್ಸಿಬಿ ಅಧಿಕಾರಿಗಳು ಬುಧವಾರ ಮುಂಬೈನಲ್ಲಿ ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮಾದಕ ವಸ್ತು ಸಾಗಣೆ ಪ್ರಕರಣ ಸಂಬಂಧ ಇಕ್ಬಾಲ್ ಕಾಸ್ಕರ್ನನ್ನು ಬಂಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಿಂದ ಪಂಜಾಬ್‌ಗೆ ಇಪ್ಪತ್ತೈದು ಕೆಜಿ ಚರಾಸ್ ಮಾದಕ ವಸ್ತು ತರಲಾಗುತ್ತಿತ್ತು ಮತ್ತು ಅಲ್ಲಿಂದ ಮುಂಬಯಿಯಲ್ಲಿ ವಿತರಿಸಲಾಗುತ್ತಿತ್ತು.
ಇದಕ್ಕೂ ಮುನ್ನ, ಕಾಸ್ಕರ್ ಹಲವು ಲಾಂಡರಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಮತ್ತು ಮಹಾರಾಷ್ಟ್ರದ ಪ್ರಮುಖ ಬಿಲ್ಡರ್‌ನನ್ನು ಸುಲಿಗೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಆತನ ವಿರುದ್ಧ ಪ್ರಕರಣ ದಾಖಲಿಸಿದೆ.