ಪಂಜಾಬ್​ ಕಾಂಗ್ರೆಸ್​​ನಲ್ಲಿ ಬಂಡಾಯ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹಾಗೂ ಸಿಧು ನಡುವಿನ ಭಿನ್ನಾಭಿಪ್ರಾಯ ಆರಂಭದಿಂದಲೂ ಹೊಗೆಯಾಡುತ್ತಿತ್ತು. ಆದರೆ, ಆ ಭಿನ್ನಾಭಿಪ್ರಾಯ ಇಂದು ದೊಡ್ಡ ಮಟ್ಟದಲ್ಲಿ ಸ್ಫೋಟಕವಾಗಿದೆ.

Latha CG | news18
Updated:July 14, 2019, 1:14 PM IST
ಪಂಜಾಬ್​ ಕಾಂಗ್ರೆಸ್​​ನಲ್ಲಿ ಬಂಡಾಯ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್​ ಸಿಧು
Latha CG | news18
Updated: July 14, 2019, 1:14 PM IST
ನವದೆಹಲಿ,(ಜು.14): ಪಂಜಾಬ್​ ಸಿಎಂ ಅಮರಿಂದರ್​ ಸಿಂಗ್​ ಜೊತೆಗಿನ ಅಸಮಾಧಾನದ  ಬಳಿಕ ಕಾಂಗ್ರೆಸ್​ ನಾಯಕ ನವಜೋತ್ ಸಿಂಗ್ ಸಿಧು ಇಂದು​ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಟ್ವಿಟರ್​ ಅಕೌಂಟ್​​ನಲ್ಲಿ ರಾಜೀನಾಮೆ ಪತ್ರವನ್ನು ಹಾಕಿಕೊಂಡಿದ್ದಾರೆ.

ಅಮಿಂದರ್​ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕಳೆದ ತಿಂಗಳು ಸಂಪುಟ ಪುನಾರಚನೆ ಮಾಡಿತ್ತು. ಈ ಸಂದರ್ಭದಲ್ಲಿ ನವಜೋತ್​ ಸಿಂಗ್​ ಸಿಧು ಅವರಗೆ ಖಾತೆಯನ್ನು ಬದಲಾಯಿಸಲಾಗಿತ್ತು. ಸ್ಥಳೀಯ ಸಂಸ್ಥೆಗಳ ಖಾತೆಯಿಂದ ಇಂಧನ ಮತ್ತು ನವೀಕರಿಸಬಹುದಾದ ಶಕ್ತಿ ಇಲಾಖೆಗೆ ಸಚಿವರನ್ನಾಗಿ ವರ್ಗಾವಣೆ ಮಾಡಲಾಗಿತ್ತು. 

ಕಳೆದ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಸಚಿವರಾಗಿದ್ದಾಗ್ಯೂ ಗ್ರಾಮೀಣ ಭಾಗಗಳಲ್ಲಿ ಕಳಪೆ ಸಾಧನೆ ತೋರಿಸಿದ್ದಕ್ಕಾಗಿ ಸಿಧು ಅವರಿಗೆ ಖಾತೆ ಬದಲಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಇದರಿಂದ ಬೇಸರಗೊಂಡಿದ್ದ ಈವರೆಗೆ ಅಧಿಕಾರ ವಹಿಸಿಕೊಂಡಿರಲಿಲ್ಲ. ಅಲ್ಲದೆ, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ; ಏನಿದು ಮೈತ್ರಿ ನಾಯಕರ ಹೊಸ ತಂತ್ರ?

ಕಳೆದ ತಿಂಗಳು ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜೀನಾಮೆ ಸಲ್ಲಿಸಿರುವುದಾಗಿ ನವಜೋತ್​ ಸಿಂಗ್ ಸಿಧು ತಿಳಿಸಿದ್ದಾರೆ. ಜೊತೆಗೆ ಇಂದು ತಮ್ಮ ರಾಜೀನಾಮೆ ಪತ್ರವನ್ನು ಪಂಜಾಬ್​ ಸಿಎಂಗೆ ಕಳುಹಿಸಿರುವುದಾಗಿ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ನವಜೋತ್​ ಸಿಂಗ್ ಸಿಧು ಕೊನೆಯದಾಗಿ ಜೂನ್​ 10 ರಂದು ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಜೊತೆ ಕಾಣಿಸಿಕೊಂಡಿದ್ದರು. ಅದೇ ದಿನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹಾಗೂ ಸಿಧು ನಡುವಿನ ಭಿನ್ನಾಭಿಪ್ರಾಯ ಆರಂಭದಿಂದಲೂ ಹೊಗೆಯಾಡುತ್ತಿತ್ತು. ಆದರೆ, ಆ ಭಿನ್ನಾಭಿಪ್ರಾಯ ಇಂದು ದೊಡ್ಡ ಮಟ್ಟದಲ್ಲಿ ಸ್ಫೋಟಕವಾಗಿದೆ.
First published:July 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...