Union Budget 2019 LIVE: ರೂ. 5 ಲಕ್ಷದ ವರೆಗೆ ಆದಾಯ ತೆರಿಗೆ ವಿನಾಯಿತಿ; ಪೆಟ್ರೋಲ್, ಡೀಸೆಲ್, ಚಿನ್ನದ ಬೆಲೆ ಏರಿಕೆ
Live 2019 Union Budget Updates: ಇಂದು ಕೇಂದ್ರ ಸರ್ಕಾರದ 2019-20ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ಬಜೆಟ್ ಮಂಡಿಸುತ್ತಿರುವ ದೇಶದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Union Budget 2019 LIVE: ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಜನರಿಗೆ ಯಾವೆಲ್ಲಾ ಕೊಡುಗೆಗಳನ್ನು ನೀಡಲಿದೆ ಎಂಬ ಕುತೂಹಲ ಮನೆಮಾಡಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಣಕಾಸು ಇಲಾಖೆಯನ್ನೂ ನಿರ್ವಹಿಸಿದ್ದರು. ಆದರೆ, ಪೂರ್ಣ ಪ್ರಮಾಣದ ವಿತ್ತ ಸಚಿವರಾಗಿ ಬಜೆಟ್ ಮಂಡಿಸುತ್ತಿರುವ ಮೊದಲ ಮಹಿಳೆ ಎಂಬ ಕೀರ್ತಿಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ. ಅಭಿವೃದ್ಧಿ ಮಂತ್ರದೊಂದಿಗೆ ಚೊಚ್ಚಲ ಬಜೆಟ್ ಮಂಡನೆಯನ್ನು ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಸಚಿವ ಪಿಯೂಷ್ ಗೋಯಲ್ ಮಧ್ಯಂತರ ಬಜೆಟ್ ಮಂಡಿಸಿದ್ದರು. ಇದೀಗ ಎನ್ಡಿಎ ಸರ್ಕಾರ ಇಂದು ಪೂರ್ಣಪ್ರಮಾಣದ ಬಜೆಟ್ ಮಂಡಿಸುತ್ತಿದೆ.
ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ, ಮೇಕ್ ಇನ್ ಇಂಡಿಯಾ, ಮಂಗಳಯಾನ, ಚಂದ್ರಯಾನ ಮತ್ತು ಉಪಗ್ರಹಗಳ ಉಡಾವಣೆ ಸೇರಿದಂತೆ ಒಟ್ಟೂ 10 ಅಂಶಗಳು ಬಜೆಟ್ನ ಹೈಲೈಟ್ಸ್ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಈ ಬಗ್ಗೆ ಕ್ಷಣಕ್ಷಣದ ಮಾಹಿತಿ ನ್ಯೂಸ್18 ಕನ್ನಡ ವೆಬ್ಸೈಟ್ನಲ್ಲಿ ಲಭ್ಯ. Read More