ನವ ದೆಹಲಿ (ಫೆಬ್ರವರಿ 01); ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ಶಿಕ್ಷಣ ಕ್ಷೇತ್ರ ನಿಂತ ನೀರಾಗಿದೆ. ಹೀಗಾಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮತ್ತಷ್ಟು ಒತ್ತು ನೀಡಲು ಮುಂದಾಗಿದೆ. ಇದೇ ಮೊದಲ ಬಾರಿಗೆ ಶಿಕ್ಷಣ ಸಂಸ್ಥೆಗಳ ಎದುರು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನೂ ಆರ್ಥಿಕವಾಗಿ ಪ್ರಬಲಗೊಳಿಸಬೇಕು ಎಂದು ಮನಸ್ಸು ಮಾಡಿರುವ ಕೇಂದ್ರ ಸರ್ಕಾರ ಅದಕ್ಕೆಂದು ಹೊಸ ಯೋಜನೆ ರೂಪಿಸುವ ಭರವಸೆ ನೀಡಿದೆ. ಇದಲ್ಲದೆ, ಇಂದು ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, "ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು, ಅಲ್ಲದೆ, 15,000 ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗುವುದು, ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು" ಎಂದು ತಿಳಿಸಿದ್ದಾರೆ.
ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳೇನು?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ