ನವದೆಹಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದರು. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ನಾಲ್ಕು ರಾಜ್ಯಗಳಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಹಣ ಹಂಚಿಕೆ ಮಾಡಿದರು. ಈ ನಾಲ್ಕು ರಾಜ್ಯಗಳಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.
ತಮಿಳುನಾಡಿನಲ್ಲಿ 3,500 ಕಿ.ಮೀ. ಕಾರಿಡಾರ್ ಯೋಜನೆ, ಕೇರಳದಲ್ಲಿ 1,100 ಕಿ.ಮೀ. ರಸ್ತೆ ನಿರ್ಮಾಣಕ್ಕೆ 65,000 ಕೋಟಿ ರೂಪಾಯಿ ನೀಡಿದ್ದಾರೆ. ಅದೇ ರೀತಿ ಪಶ್ಚಿಮ ಬಂಗಾಳದಲ್ಲಿ 675 ಕಿ.ಮೀ. ರಸ್ತೆ ನಿರ್ಮಾಣಕ್ಕೆ 95,000 ಕೋಟಿ ರೂಪಾಯಿ ನೀಡಿದ್ದಾರೆ. ಅಸ್ಸಾಂನಲ್ಲಿ ಮುಂದಿನ ಮೂರು ವರ್ಷದಲ್ಲಿ 1,300 ಕಿ.ಮೀ. ರಸ್ತೆ ನಿರ್ಮಾಣಕ್ಕೆ 34 ಸಾವಿರ ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು.
ಇದನ್ನು ಓದಿ: Budget 2021 LIVE: ಕೇಂದ್ರ ಬಜೆಟ್ ಹೈಲೈಟ್ಸ್; ಬೆಂಗಳೂರು ಮೆಟ್ರೋಗೆ 14,788 ಕೋಟಿ ರೂ. ಅನುದಾನ
ಕೊರೋನಾ ನಡುವೆಯೇ ಸಂಸತ್ ಅಧಿವೇಶನ ಆರಂಭವಾಗಿದ್ದು, ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಲ್ಲಿ ಕಾಗದರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ Union Budget Mobile App ಬಿಡುಗಡೆ ಮಾಡಿದ್ದು, ಇದರಲ್ಲಿ ಬಜೆಟ್ನ ಪೂರ್ತಿ ಮಾಹಿತಿ, ದಾಖಲೆಗಳು ಸಿಗಲಿವೆ. ಕೊರೋನಾದಿಂದ ಸಂಕಷ್ಟಕ್ಕೀಡಾದ ಭಾರತಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನ ಬಜೆಟ್ ಮೂಲಕ ಯಾವ ರೀತಿಯ ಆರ್ಥಿಕ ಲಸಿಕೆ ನೀಡಲಿದ್ದಾರೆ ಎಂಬ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಉಂಟಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ