Union Budget 2021: ಜನವರಿ 29ರಿಂದ ಕೇಂದ್ರದ ಬಜೆಟ್ ಅಧಿವೇಶನ: ಸಂಸದರಿಗೆ RT-PCR ಟೆಸ್ಟ್ ಕಡ್ಢಾಯ

ದೇಶದಲ್ಲಿ ಆರ್ಥಿಕ ಮುಗ್ಗಟ್ಟು ಸೃಷ್ಟಿಯಾಗಿದ್ದು ಆರ್ಥಿಕ ಪುನಶ್ಚೇತನಕ್ಕೆ ಪೂರಕವಾದ ಬಜೆಟ್ ಮಂಡಿಸುವ ಗುರುತರ ಹೊಣೆಗಾರಿಕೆ ನಿರ್ಮಲಾ ಸೀತಾರಾಮನ್ ಅವರ ಮೇಲಿದೆ.

ಅಧಿವೇಶನ

ಅಧಿವೇಶನ

  • Share this:
    ನವದೆಹಲಿ (ಜ. 20): ಕೊರೋನಾ ಕಾರಣದಿಂದ ಅನಿಶ್ಚಿತಗೊಂಡಿದ್ದ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜನವರಿ 29ರಿಂದ ಸಂಸತ್ತಿನ ಬಜೆಟ್ ಅಧಿವೇಶನ ನಿಗದಿಯಾಗಿದ್ದು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸತ್ ಸದಸ್ಯರು RT-PCR ಟೆಸ್ಟ್ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಹೇಳಿದರು. ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಓಂ ಬಿರ್ಲಾ, ದೇಶದಲ್ಲಿ ಇನ್ನು ಕೂಡ ಕೊರೋನಾ ವೈರಸ್ ಹರಡುವಿಕೆ ಕಡಿಮೆ ಆಗಿಲ್ಲದ ಕಾರಣ ಬಜೆಟ್ ಅಧಿವೇಶನವನ್ನೂ ಮಳೆಗಾಲದ ಅಧಿವೇಶನದಂತೆ ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಾಜ್ಯಸಭೆಯ ಕಲಾಪಗಳು ನಡೆಯಲಿವೆ. 2 ಗಂಟೆಗಳ ಬಿಡುವಿನಲ್ಲಿ ಕಲಾಪ ನಡೆಯುವ ಸ್ಥಳವನ್ನು ಸ್ಯಾನಿಟೈಸ್ ಮಾಡಿ ಮತ್ತೆ ಸಂಜೆ 4ರಿಂದ ರಾತ್ರಿ 9 ಗಂಟೆವರೆಗೆ ಲೋಕಸಭೆಯ ಕಲಾಪ ನಡೆಸಲಾಗುವುದು ಎಂದು ವಿವರಿಸಿದರು.

    ಸಮಯಾವಕಾಶ ಕಡಿಮೆ ಇರುವುದರಿಂದ ಕಲಾಪದಲ್ಲಿ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರಕ್ಕೆ ಅವಕಾಶ ನೀಡಲಾಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಓಂ ಬಿರ್ಲ, ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರಗಳು ಇರಲಿವೆ ಎಂದು ತಿಳಿಸಿದರು.

    ಸಿದ್ದರಾಮಯ್ಯನವರೇ ನಿಮ್ಮನ್ನು ಕುರುಬ ಸಮಾಜದಿಂದ ಬಹಿಷ್ಕಾರ ಹಾಕಬೇಕಾಗುತ್ತದೆ ಎಚ್ಚರಿಕೆ..!; ಹೆಚ್​‌. ವಿಶ್ವನಾಥ್ ಕಿಡಿನುಡಿ

    ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಜನವರಿ 29ರಿಂದ ಏಪ್ರಿಲ್ 8ರವರೆಗೆ ಬಜೆಟ್ ಅಧಿವೇಶನ ನಡೆಸುವಂತೆ ಶಿಫಾರಸು ಮಾಡಿದೆ.‌ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸು ಮೇರೆಗೆ ಜನವರಿ 29 ರಿಂದ ಫೆಬ್ರವರಿ 15ರವರೆಗೆ ಮೊದಲ ಹಂತದ ಅಧಿವೇಶನ ನಡೆಸಲಾಗುವುದು.‌ ಮಾರ್ಚ್ 8 ರಿಂದ ಏಪ್ರಿಲ್ 8ರವರೆಗೆ ಎರಡನೇ ಹಂತದ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು.

    ಈ ನಡುವೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಜನವರಿ 29 ರಂದು ಲೋಕಸಭೆ ಮತ್ತು ರಾಜ್ಯಸಭೆ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 1ಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುವರು. ಕೊರೋನಾ ಮತ್ತು ಲಾಕ್ಡೌನ್ ನಂತರ ಮಂಡನೆ ಆಗುತ್ತಿರುವ ಮೊದಲ ಬಜೆಟ್ ಇದಾಗಿರುವುದರಿಂದ ಈ ಬಜೆಟ್ ತೀವ್ರ ಕುತೂಹಲ ಮೂಡಿಸಿದೆ. ದೇಶದಲ್ಲಿ ಆರ್ಥಿಕ ಮುಗ್ಗಟ್ಟು ಸೃಷ್ಟಿಯಾಗಿದ್ದು ಆರ್ಥಿಕ ಪುನಶ್ಚೇತನಕ್ಕೆ ಪೂರಕವಾದ ಬಜೆಟ್ ಮಂಡಿಸುವ ಗುರುತರ ಹೊಣೆಗಾರಿಕೆ ನಿರ್ಮಲಾ ಸೀತಾರಾಮನ್ ಅವರ ಮೇಲಿದೆ.

    ಕೋವಿಡ್ ಮಾರ್ಗಸೂಚಿಗಳ ಅನ್ವಯ ಉಭಯ ಸದನಗಳಲ್ಲಿ ತಲಾ 4 ಗಂಟೆಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.‌ ಅದಕ್ಕಾಗಿ ಲೋಕಸಭೆ, ರಾಜ್ಯಸಭೆಯ ಸಂಸದರ ಗ್ಯಾಲರಿಗಳು, ಸ್ಪೀಕರ್ ಗ್ಯಾಲರಿಗಳು, ಸಂದರ್ಶಕರ ಗ್ಯಾಲರಿಗಳು, ಸೆಂಟ್ರಲ್ ಹಾಲ್ ಮತ್ತಿತರ ಜಾಗಗಳಲ್ಲಿ ಸಂಸದರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಅಧಿವೇಶನದಲ್ಲಿ ಕೊರೊನಾ, ಆರ್ಥಿಕ ಹಿನ್ನಡೆ, ಗಡಿ ಸಮಸ್ಯೆ ಬಗ್ಗೆ ಚರ್ಚೆಯಾಗುವ ಸಂಭವ ಇದೆ.
    Published by:Latha CG
    First published: