• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Budget 2023: 2047ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಮಿಷನ್; ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Budget 2023: 2047ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಮಿಷನ್; ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

2023-24ರ ಬಜೆಟ್​​ನಲ್ಲಿ ಆರೋಗ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ತಂತ್ರಜ್ಞಾನದ ನೆರವು ಪಡೆದುಕೊಂಡು, ಸಾರ್ವಜನಿಕ ಆರೋಗ್ಯ ನಿರ್ವಹಣೆಯನ್ನು ಸ್ಮಾರ್ಟ್ ಆಗಿಸಿ ಜನರ ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕಲು ಒಂದು ಅಡಿಪಾಯವನ್ನು ಸೃಷ್ಟಿಸಲು ಕೇಂದ್ರ ಸರ್ಕಾರ ಒತ್ತು ನೀಡಿದೆ.

  • News18 Kannada
  • 2-MIN READ
  • Last Updated :
  • Delhi, India
  • Share this:

ನವದೆಹಲಿ: ವಿಶ್ವವನ್ನೇ ನಡುಗಿಸಿದ ಕೊರೊನಾ ವೈರಸ್ (Covid 19) ಆತಂಕ ಇನ್ನೂ ದೂರವಾಗಿಲ್ಲ. ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು 2023-24ರ ಕೇಂದ್ರ ಬಜೆಟ್​ ಮಂಡಣೆ (Union Budget 2023) ಮಾಡಿದ್ದಾರೆ. ಅಂದಹಾಗೇ, ಮುಂಬರುವ ಸಾರ್ವತ್ರಿಕ ಚುನಾವಣೆಗೂ (General elections 2024) ಮೊದಲು ಮೋದಿ ಸರ್ಕಾರ ಮಂಡಿಸಿರುವ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ (PM Modi)ಅವರು ಆರೋಗ್ಯ ಮತ್ತು ರಕ್ಷಣಾ ಕ್ಷೇತ್ರಗಳು (Health and Defense Sector) ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದು ಪ್ರಸ್ತಾಪಿಸಿದ್ದರು. ಇಂದಿನ ಬಜೆಟ್‌ನಲ್ಲೂ ಕೇಂದ್ರ ಸರ್ಕಾರ ಈ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ಆರೋಗ್ಯ, ಔಷಧ ಮತ್ತು ವೈದ್ಯಕೀಯ ಸಾಧನಗಳ ವಿಭಾಗಗಳಿಗೆ ಸಂಬಂಧಿಸಿದಂತೆ ಬಜೆಟ್​​ನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.


ಈ ವರ್ಷ ಬಜೆಟ್​ನಲ್ಲಿ ಆರೋಗ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ತಂತ್ರಜ್ಞಾನದ ನೆರವು ಪಡೆದುಕೊಂಡು, ಸಾರ್ವಜನಿಕ ಆರೋಗ್ಯ ನಿರ್ವಹಣೆಯನ್ನು ಸ್ಮಾರ್ಟ್ ಆಗಿಸಿ, ಜನರ ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಅಡಿಪಾಯವನ್ನು ಸೃಷ್ಟಿಸಲು ಒತ್ತು ನೀಡಲಾಗಿದೆ.


प्रगति, उन्नति और नई गति का बजट!



ಆರೋಗ್ಯ ಕ್ಷೇತ್ರಕ್ಕೆ ಈ ವರ್ಷದಲ್ಲಿ ಸಿಕ್ಕಿದ್ದೇನು?


2014 ರಿಂದ ಸ್ಥಾಪಿತವಾಗಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಆ ಮೂಲಕ ನುರಿತ ಆರೋಗ್ಯ ಸಿಬ್ಬಂದಿಯ ಲಭ್ಯತೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದಾರೆ.


ಇದುವರೆಗೂ ದೇಶದ 102 ಕೋಟಿ ಜನರಿಗೆ 220 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.


ಇದನ್ನೂ ಓದಿ: Budget 2023: ಬಡವರಿಗೆ ಸರ್ಕಾರದ ಗಿಫ್ಟ್​, ಉಚಿತ ಆಹಾರ ಧಾನ್ಯಕ್ಕೆ 2 ಲಕ್ಷ ಕೋಟಿ ಮೀಸಲು, ಸಂಪೂರ್ಣ ವೆಚ್ಚ ಇನ್ನು ಕೇಂದ್ರದ್ದೇ!


2047ರ ವೇಳೆಗೆ ಸಿಕಲ್-ಸೆಲ್ ಅನೀಮಿಯಾ ರೋಗವನ್ನು ದೇಶದಿಂದ ತೊಡೆದು ಹಾಕಲು ಮಿಷನ್ ಸ್ಥಾಪನೆ ಮಾಡೋದಾಗಿ ಘೋಷಣೆ ಮಾಡಲಾಗಿದೆ. ಸಿಕಲ್-ಸೆಲ್ ಅನೀಮಿಯಾ ಎಂಬುವುದು ರಕ್ತಹೀನತೆಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ದೇಶದ ಬುಡಕಟ್ಟು ಜನಾಂಗದಲ್ಲಿ ಹೆಚ್ಚು ಕಾಡುತ್ತಿರುವ ಸಿಲಕ್​​ ಸೆಲ್​ ಅನಿಮೀಯಾ ರೋಗ ನಿವಾರಣೆಗೆ 0-40 ವರ್ಷ ವಯಸ್ಸಿನ 7 ಕೋಟಿ ಜನರ ಆರೋಗ್ಯ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಈ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಸೀತಾರಾಮನ್ ಹೇಳಿದ್ದಾರೆ.


ಔಷಧಿ (ಫಾರ್ಮಾಸ್ಯುಟಿಕಲ್ಸ್‌) ಉದ್ಯಮದಲ್ಲಿ ಹೊಸ ಹೊಸ ಸಂಶೋಧನೆಗಾಗಿ ಹೊಸ ಕಾರ್ಯಕ್ರಮವನ್ನು ರೂಪಿಸಲಾಗುವುದು ಮತ್ತು ಸಂಶೋಧನೆಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.



ಆಯ್ದ ICMR ಲ್ಯಾಬ್‌ಗಳಲ್ಲಿನ ಸೌಲಭ್ಯಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸೌಲಭ್ಯಗಳಿಂದ ಸಂಶೋಧನೆಗೆ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.


ಇದನ್ನೂ ಓದಿ: Union Budget 2023: ಪ್ರತಿ ರಾಜ್ಯದಲ್ಲಿ 1 ಯುನಿಟಿ ಮಾಲ್ ಆರಂಭ! ಏನಿದು?


ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಕ್ಸಲೆನ್ಸ್)ಯ ಮೂರು ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಈ ಕ್ಷೇತ್ರಗಳಲ್ಲಿ ಈಗಾಗಲೇ ಸಂಶೋಧನೆಗಳನ್ನು ನಡೆಸಿರುವ ಸಂಸ್ಥೆಗಳು ಹಾಗೂ ತಜ್ಞರು ಇದರಲ್ಲಿ ಪಾಲುದಾರರಾಗುತ್ತಾರೆ. ಆರೋಗ್ಯ ಕ್ಷೇತ್ರದ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ (ಪಿಪಿಪಿ) ಅವಕಾಶ ನೀಡಿ, ಆ ಮೂಲಕ ಅತ್ಯಾಧುನಿಕ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುತ್ತದೆ. ಇವುಗಳನ್ನು ಕೃಷಿ, ಆರೋಗ್ಯ ಸೇರಿದಂತೆ ಸುಸ್ಥಿರ ವ್ಯವಸ್ಥೆಯ ಕ್ಷೇತ್ರಗಳಲ್ಲಿ ಬಳಕೆ ಮಾಡಿ ಅಲ್ಲಿನ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.




2022-23 ರ ಬಜೆಟ್‌ನಲ್ಲಿ, ಹಿಂದಿನ ವರ್ಷಕ್ಕಿಂತ 16.5 ಶೇಕಡಾ ಹೆಚ್ಚು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 86,200 ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದರು. 2023ರ ಬಜೆಟ್‌ನಲ್ಲಿ ಈ ವಲಯಕ್ಕೆ ಶೇಕಡಾ 20 ರಿಂದ 30 ರಷ್ಟು ಹೆಚ್ಚಿನ ಹಣವನ್ನು ಮೀಸಲಿಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಅದರಲ್ಲೂ ವಿಮೆ, ಲಸಿಕೆಗಳು, ತಂತ್ರಜ್ಞಾನ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿರೀಕ್ಷೆ ಮಾಡಲಾಗಿತ್ತು.


ಇನ್ನು 2022-23ರ ಬಜೆಟ್​ನಲ್ಲಿ ಈ ಹಿಂದಿಗಿಂತ ಹೆಚ್ಚಿನ ಅನುದಾನ ಪಡೆದ ಸಚಿವಾಲಯಗಳಲ್ಲಿ ಮೊದಲ ಸ್ಥಾನವನ್ನು ಸಂವಹನ ಸಚಿವಾಲಯ ಪಡೆದುಕೊಂಡಿತ್ತು, ಶೇಕಡಾ 93ರಷ್ಟು ಹೆಚ್ಚಿನ ಅನುದಾನ ನೀಡಲಾಗಿತ್ತು. ಆ ಬಳಿಕ ರಸ್ತೆ ಮತ್ತು ಸಾರಿಗೆ ಸಚಿವಾಲಯ ಹಾಗೂ ಜಲ ಶಕ್ತಿ ಸಚಿವಾಲಯಗಳ ಕ್ರಮವಾಗಿ ಸ್ಥಾನ ಪಡೆದಿದ್ದವು. ಈ ಪೈಕಿ ರಕ್ಷಣಾ ಸಚಿವಾಲಯವು 2022-23ರಲ್ಲಿ ಅತಿ ಹೆಚ್ಚು ಅಂದರೆ 5,25,166 ಕೋಟಿ ರೂಪಾಯಿ, ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ರೂ. 2022-23ರಲ್ಲಿ 86,201 ಕೋಟಿ ರೂಪಾಯಿ ಘೋಷಿಸಲಾಗಿತ್ತು.

Published by:Sumanth SN
First published: