Union Minister Narayan Rane: ಕೇಂದ್ರ ಸಚಿವ ರಾಣೆಯನ್ನು ಬಂಧಿಸಲು ಪೊಲೀಸರು ರತ್ನಗಿರಿಗೆ ಬಂದಾಗ ಅವರು ಏನು ಮಾಡುತ್ತಿದ್ದರು ಗೊತ್ತೆ?

ಬಂಧನದ ಬಳಿಕ ಸಿಎನ್​ಎನ್​- ನ್ಯೂಸ್ 18 ಗೆ ಪ್ರತಿಕ್ರಿಯಿಸಿದ ರಾಣೆ ಅವರು ನನ್ನ ಹೇಳಿಕೆಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಈ ಹಿಂದೆ ಉದ್ಧವ್ ಕೂಡ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ನಾರಾಯಣ ರಾಣೆ

ಕೇಂದ್ರ ಸಚಿವ ನಾರಾಯಣ ರಾಣೆ

 • Share this:
  ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ (Maharashtra CM Uddhav Thackeray) ಅವರಿಗೆ ಹೊಡೆಯುವುದಾಗಿ ಬೆದರಿಕೆ ಹಾಕಿದ ಕೇಂದ್ರ ಸಚಿವ ನಾರಾಯಣ ರಾಣೆ (Union Minister Narayan Rane) ಅವರನ್ನು ಮಂಗಳವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ರಾಣೆ ಅವರನ್ನು ಕಾಣಲು ಬಂದಾಗ ಅವರು ಊಟ ಮಾಡುತ್ತಿದ್ದರು. ರಾಣೆ ಹೇಳಿಕೆ ನೀಡಿದ ಒಂದು ದಿನದ ಬಳಿಕ ರತ್ನಗಿರಿಯ (Ratnagiri)  ಸಂಗಮೇಶ್ವರ ಬಳಿ ಅವರನ್ನು ಬಂಧಿಸಲಾಗಿದೆ.  

   ಬಿಜೆಪಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ. ಆ ವಿಡಿಯೋದಲ್ಲಿ ರಾಣೆ ಅವರು ಮಧ್ಯಾಹ್ನ ಊಟ ಮಾಡುತ್ತಿದ್ದಾರೆ. ಆ ವೇಳೆಗೆ ಬಂದ ಪೊಲೀಸರು ಅವರನ್ನು ಬಂಧಿಸಲು ಮುಂದಾಗಿದ್ದಾರೆ. ಆ ವೇಳೆ ರಾಣೆ ಅವರ ಮಗ ನಿತೀಶ್ ಅವರು ಸರ್ ಊಟ ಮಾಡುತ್ತಿದ್ದಾರೆ. ಒನ್ ಮಿನಿಟ್, ಒನ್ ಮಿನಿಟ್, ನನ್ನನ್ನು ಮುಟ್ಟಬೇಡಿ ಎಂದು ಹೇಳುತ್ತಿರುವುದು ಕೇಳಿಸುತ್ತದೆ. ಜೊತೆಗೆ ರಾಣೆ ಅವರನ್ನು ಪೊಲೀಸರು ಕರೆದೊಯ್ಯುವಾಗ ಅವರ ಬೆಂಬಲಿಗರು ಅವರ ರಕ್ಷಣೆಗೆ ಮುಂದಾಗಿದ್ದಾರೆ.


  ಬಿಜೆಪಿಯ ಜನ ಆಶೀರ್ವಾದ ಯಾತ್ರೆಯ ಭಾಗವಾಗಿ ಅವರು ಪ್ರಯಾಣಿಸುತ್ತಿರುವ ಕರಾವಳಿಯ ರತ್ನಗಿರಿ ಜಿಲ್ಲೆಯಲ್ಲಿ ರಾಣೆ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಚಿವ ನಾರಾಯಣ ರಾಣೆ ಅವರನ್ನು ಸಂಗಮೇಶ್ವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  ನಾಸಿಕ್ ನಗರ ಶಿವಸೇನೆ ಘಟಕದ ಮುಖ್ಯಸ್ಥರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಐಪಿಸಿ ಸೆಕ್ಷನ್ 500 (ಮಾನನಷ್ಟ), 505 (2) (ಕಿಡಿಗೇಡಿತನ), 153-ಬಿ (1) (ಸಿ) ಅಡಿಯಲ್ಲಿ ರಾಣೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

  ಬಂಧನದ ಬಳಿಕ ಸಿಎನ್​ಎನ್​- ನ್ಯೂಸ್ 18 ಗೆ ಪ್ರತಿಕ್ರಿಯಿಸಿದ ರಾಣೆ ಅವರು ನನ್ನ ಹೇಳಿಕೆಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಈ ಹಿಂದೆ ಉದ್ಧವ್ ಕೂಡ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

   ಕೇಂದ್ರ ಸಚಿವ ನಾರಾಯಣ ರಾಣೆ ಹೇಳಿದ್ದೇನು?


  ಸೋಮವಾರ, ಪಕ್ಕದ ರಾಯಗಡ ಜಿಲ್ಲೆಯಲ್ಲಿ ನಡೆದ 'ಜನ್ ಆಶೀರ್ವಾದ್ ಯಾತ್ರೆಯ' ಸಮಯದಲ್ಲಿ, ಕೇಂದ್ರ ಸಚಿವ ನಾರಾಯಣ ರಾಣೆ ಅವರು, ಮುಖ್ಯಮಂತ್ರಿಗೆ ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಅವರು ತಮ್ಮ ಭಾಷಣದ ಸಮಯದಲ್ಲಿ ಸ್ವಾತಂತ್ರ್ಯದ ವರ್ಷಗಳ ಎಣಿಕೆಯ ಬಗ್ಗೆ ವಿಚಾರಿಸಲು ಹಿಂದಕ್ಕೆ ವಾಲಿದರು. ನಾನು ಅಲ್ಲಿ ಇದ್ದಿದ್ದರೆ, (ಅವನಿಗೆ) ಕಪಾಳಕ್ಕೆ ಬಿಗಿಯುತ್ತಿದ್ದೆ ಎಂದು ಸಿಎಂ ಉದ್ಧವ್ ಠಾಕ್ರೆ ಉದ್ದೇಶಿಸಿ ಹೇಳಿದ್ದರು.


  ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾದ ಬಳಿಕ ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಣೆ ಅವರು, "ನಾನು ಸಾಮಾನ್ಯ ಮನುಷ್ಯನಲ್ಲ. ನಾನು ಯಾವುದೇ ಅಪರಾಧ ಮಾಡಿಲ್ಲ. ಆಗಸ್ಟ್ 15 ರ ಬಗ್ಗೆ ಯಾರಿಗಾದರೂ ತಿಳಿದಿಲ್ಲದಿದ್ದರೆ ಅದು ಅಪರಾಧ ಅಲ್ಲವೇ? ನಾನು ಹೇಳಿದ ಮಾತು ಹೊಡೆಯುತ್ತಿದ್ದೆ ಎಂದು. ಇದು ಅಪರಾಧವಲ್ಲ" ಎಂದು ಹೇಳಿದ್ದಾರೆ.


  ಇದನ್ನು ಓದಿ: Narayan Rane Arrest; ಸಿಎಂ ಠಾಕ್ರೆ ವಿರುದ್ಧ ಹೇಳಿಕೆ; ಕೇಂದ್ರ ಸಚಿವ ನಾರಾಯಣ ಬಂಧಿಸಿದ ಮುಂಬೈ ಪೊಲೀಸರು!

  ಕೇಂದ್ರ ಸಚಿವ ನಾರಾಯಣ ರಾಣೆ ಅವರು ವಿರುದ್ಧ ದಾಖಲಾಗಿರುವ ಎಫ್​ಐಆರ್​ಗಳನ್ನು ವಜಾಗೊಳಿಸುವಂತೆ ಕೋರಿ ಸಚಿವರ ಪರವಾಗಿ ವಕೀಲ ಅನಿಕೇತ್ ನಿಕ್ಕಂ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಣೆ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಅಥವಾ ನೋಂದಾಯಿಸಲು ಸಿದ್ಧತೆ ನಡೆಸುತ್ತಿರುವುದನ್ನು  ರದ್ದುಗೊಳಿಸುವಂತೆ ಮನವಿ ಮಾಡಲಾಗಿದೆ. ಹಾಗೂ ತಕ್ಷಣದ ಪರಿಹಾರವಾಗಿ, ವಕೀಲ ನಿಕ್ಕಂ ಅವರು ಬಂಧನದಿಂದ ಪರಿಹಾರವನ್ನು ಹುಡುಕುತ್ತಿರುವುದಾಗಿ ಹೇಳಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:HR Ramesh
  First published: