ಹಾಥ್ರಸ್ ಘಟನೆಯ ತೀವ್ರ ತನಿಖೆಗೆಗಾಗಿ ಸಿಬಿಐಗೆ ವಹಿಸುತ್ತಿದ್ದೇವೆ. ಈ ಘಟನೆಗೆ ಕಾರಣರಾದವರು ಮತ್ತು ಜವಾಬ್ದಾರರಾದವರಿಗೆ ಕಠಿಣಾತಿಕಠಿಣ ಶಿಕ್ಷೆ ಕೊಡಲು ಬದ್ಧರಾಗಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಲಕ್ನೋ: ದೇಶಾದ್ಯಂತ ಸುದ್ದಿಯಾಗಿರುವ ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಶನಿವಾರ ನಡೆದ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆಯಿಂದ ಹಿಡಿದು ಆಕೆಯ ಪೋಷಕರ ಅನುಪಸ್ಥಿತಿಯಲ್ಲಿ ಸಂಶಯಾಸ್ಪದವಾಗಿ ಶವಸಂಸ್ಕಾರ ಮಾಡುವವರೆಗೆ ಈ ಪ್ರಕರಣದ ಎಳೆ ಎಳೆಯನ್ನೂ ತನಿಖೆಗೆ ಒಳಪಡಿಸಬೇಕು ಎಂದು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.
ಹಾಥ್ರಸ್ ಘಟನೆಯ ತೀವ್ರ ತನಿಖೆಗೆಗಾಗಿ ಸಿಬಿಐಗೆ ವಹಿಸುತ್ತಿದ್ದೇವೆ. ಈ ಘಟನೆಗೆ ಕಾರಣರಾದವರು ಮತ್ತು ಜವಾಬ್ದಾರರಾದವರಿಗೆ ಕಠಿಣಾತಿಕಠಿಣ ಶಿಕ್ಷೆ ಕೊಡಲು ಬದ್ಧರಾಗಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿಗಳು ಹೇಳಿದ್ದಾರೆ.
हाथरस की दुर्भाग्यपूर्ण घटना और जुड़े सभी बिंदुओं की गहन पड़ताल के उद्देश्य से @UPGovt इस प्रकरण की विवेचना केंद्रीय अन्वेषण ब्यूरो (CBI) के माध्यम से कराने की संस्तुति कर रही है।
इस घटना के लिए जिम्मेदार सभी लोगों को कठोरतम सजा दिलाने के लिए हम संकल्पबद्ध हैं।
ಆದರೆ, ಹಾಥ್ರಸ್ ಅತ್ಯಾಚಾರದದಲ್ಲಿ ಬಲಿಯಾದ 19 ವರ್ಷದ ದಲಿತ ಯುವತಿಯ ಪೋಷಕರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮಾರ್ಗದರ್ಶನದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಂದು ಡಿಜಿಪಿ ಹೆಚ್.ಸಿ. ಅವಾಸ್ಥಿ ಹಾಗೂ ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಅವಿನಾಶ್ ಅವಾಸ್ತಿ ಅವರು ಯುವತಿಯ ಕುಟುಂಬವನ್ನು ಭೇಟಿ ಮಾಡಿ ಬಂದರು. ಇದೇ ವೇಳೆ, ಘಟನೆ ನಡೆದ ಬೆನ್ನಲ್ಲೇ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ತನ್ನ ವರದಿಯನ್ನ ಇವತ್ತು ಸಿಎಂಗೆ ಸಲ್ಲಿಸಿತು. ಇದಾದ ಬಳಿಕ ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನು ನಡೆಸಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
ಇನ್ನು, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ ವಿರೋಧ ಪಕ್ಷಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನ ಹಮ್ಮಿಕೊಂಡಿವೆ. ಇವತ್ತು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಹಾಥ್ರಸ್ಗೆ ಭೇಟಿ ನೀಡಿದ್ಧಾರೆ. ನಿನ್ನೆ ಅವರು ಇದೇ ಪ್ರಯತ್ನದಲ್ಲಿದ್ದಾಗ ಪೊಲೀಸರು ತಡೆದು ದೆಹಲಿಗೆ ವಾಪಸ್ ಕಳುಹಿಸಿದ್ದರು. ದೆಹಲಿಯ ಜಂತರ್ ಮಂತರ್ನಲ್ಲಿ ಕಾಂಗ್ರೆಸ್, ಟಿಎಂಸಿ ಮೊದಲಾದ ಪಕ್ಷಗಳ ನಾಯಕರು, ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಹಾಥ್ರಸ್ ಘಟನೆಯನ್ನು ಖಂಡಿಸಿ ಯೋಗಿ ಆದಿತ್ಯನಾಥ್ ಅವರ ರಾಜೀನಾಮೆಗೆ ಆಗ್ರಹಿಸಿದ್ದರು.
Published by:Vijayasarthy SN
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ