UP Elections: ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ

ಯೋಗಿ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಪಾಲ್ಗೊಳ್ಳುತ್ತಾರೆ ಎಂಬ‌ ನಿರೀಕ್ಷೆ ಇತ್ತು. ಈಗ ಕೇಂದ್ರ ಗೃಹ ‌ಸಚಿವ ಅಮಿತ್ ಶಾ ಮಾತ್ರ ಭಾಗವಹಿಸುತ್ತಿದ್ದಾರೆ. ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆಗೂ ಮುನ್ನ ಅಮಿತ್ ಶಾ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್

ಸಿಎಂ ಯೋಗಿ ಆದಿತ್ಯನಾಥ್

  • Share this:
ನವದೆಹಲಿ (ಫೆ. 4): ಉತ್ತರ ಪ್ರದೇಶ ವಿಧಾನಸಭಾ ಚುನಾಚಣೆಯ (Uttar Pradesh Assembly Elections) ಮೊದಲ ಹಂತದ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು‌ (Political Activities) ಚುರುಕುಗೊಂಡಿವೆ. ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Chief Minister of Uttar Pradesh Yogi Adityanath) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧೆ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಇಂದು ಬೆಳಿಗ್ಗೆ 10.30ಕ್ಕೆ ಗೋರಖ್‌ಪುರ ನಗರ (Gorakhpur Urban) ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದಾರನಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಯೋಗಿಗೆ ಅಮಿತ್ ಶಾ ಸಾಥ್

ಮೊದಲಿಗೆ ಮಥುರಾ ಅಥವಾ ಅಯೋಧ್ಯೆಯ ವಿಧಾನಸಭಾ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಕಡೆಗೆ ಹಿಂದೆ ಅವರು ‌ಲೋಕಸಭೆಗೆ ಸ್ಪರ್ಧೆ ಮಾಡುತ್ತಿದ್ದ ಗೋರಖ್‌ಪುರ ವ್ಯಾಪ್ತಿಯ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದಿದ್ದಾರೆ. ಪೂರ್ವ ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯ ಇಲ್ಲದಿರುವುದರಿಂದ ಬಿಜೆಪಿಗೆ ಶಕ್ತ ನೀಡಲು‌ ಗೋರಖ್‌ಪುರ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಪಾಲ್ಗೊಳ್ಳುತ್ತಾರೆ ಎಂಬ‌ ನಿರೀಕ್ಷೆ ಇತ್ತು. ಈಗ ಕೇಂದ್ರ ಗೃಹ ‌ಸಚಿವ ಅಮಿತ್ ಶಾ ಮಾತ್ರ ಭಾಗವಹಿಸುತ್ತಿದ್ದಾರೆ. ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆಗೂ ಮುನ್ನ ಅಮಿತ್ ಶಾ ಸಾರ್ವಜನಿಕ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: Goa Elections: ಇಂದು ಗೋವಾದಲ್ಲಿ ಮನೆ-ಮನೆಗೆ ತೆರಳಿ ಪ್ರಚಾರ ಮಾಡಲಿರುವ ರಾಹುಲ್ ಗಾಂಧಿ‌

ಪಶ್ಚಿಮದಿಂದ ಪೂರ್ವಕ್ಕೆ ಬಂದ ಅಮಿತ್ ಶಾ

ಕೇಂದ್ರ ಸರ್ಕಾರ ತಂದಿದ್ದ ಮೂರು ರೈತ ವಿರೋಧಿ ಕೃಷಿ ಕಾನೂನುಗಳ ಕಾರಣಕ್ಕೆ ಬಿಜೆಪಿ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಟ್ ಸಮುದಾಯ ಸಿಡಿದೆದ್ದಿದೆ. ಹಾಗಾಗಿ ಜಾಟ್ ಸಮುದಾಯದ ಪ್ರಾಬಲ್ಯ ಇರುವ ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ ಆಗಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 10 ಮತ್ತು 14ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಮೊದಲ ಮತ್ತು ಎರಡನೇ ಹಂತದ ಮತದಾನ ನಡೆಯಲಿದ್ದು ಎರಡೂ ಹಂತದ ಮತದಾನದ ವೇಳೆ ಬಿಜೆಪಿಗೆ ಹೊಡೆತ ಬೀಳಲಿದೆ. ಮೊದಲೆರಡು ಹಂತಗಳಲ್ಲಿ ಹಿನ್ನಡೆಯಾದರೆ ಅದೇ ಸಾರ್ವಜನಿಕ ಅಭಿಪ್ರಾಯ ಮುಂದಿನ ಹಂತಗಳಿಗೂ ವಿಸ್ತರಿಸಬಹುದು ಅಥವಾ ಪ್ರತಿಕೂಲ ಪರಿಣಾಮ ಬೀರಬಹುದೆಂದು ಬಿಜೆಪಿ ಚಿಂತಾಕ್ರಾಂತವಾಗಿದೆ. ಅದೇ ಕಾರಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ. ನಿನ್ನೆ ಕೂಡ ಲೋನಿಯಲ್ಲಿ ಪ್ರಚಾರ ನಡೆಸಿದ್ದಾರಲ್ಲದೆ ಜಾಟ್ ಸಮುದಾಯದ ಪಕ್ಷ ಎಂದೇ ಹೇಳಲಾಗುವ ರಾಷ್ಟ್ರೀಯ ಲೋಕದಳದ ನಾಯಕ‌ ಜಯಂತ್ ಚೌಧರಿ ವಿರುದ್ಧ ಹರಿಹಾಯ್ದಿದ್ದರು. ಇಂದು ಈಗಾಗಲೇ ಅಷ್ಟೇನೂ ಪ್ರಾಬಲ್ಯ ಇಲ್ಲದಿರುವ ಪೂರ್ವ ಉತ್ತರ ಪ್ರದೇಶದಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: UP Elections: ರಂಗೇರಿದ ಚುನಾವಣಾ ರಣಕಣ, ಇಂದು‌ ಪ್ರಿಯಾಂಕಾ ಗಾಂಧಿ ಮನೆ ಮನೆಗೆ ತೆರಳಿ ಪ್ರಚಾರ

ಇನ್ನೊಂದೆಡೆ ಪ್ರಿಯಾಂಕಾ ಪ್ರಚಾರ

ಕೊರೋನಾ ಮತ್ತು ಓಮೈಕ್ರಾನ್ ಹಿನ್ನೆಲೆಯಲ್ಲಿ ಫೆಬ್ರವರಿ 11ರವರೆಗೆ ಬಹಿರಂಗವಾಗಿ ಸಭೆ, ಸಮಾರಂಭ, ಬೈಕ್ ಶೋ ಹಾಗೂ ರ್‍ಯಾಲಿಗಳನ್ನು ನಡೆಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುವುದರಿಂದ ರಾಜಕೀಯ ಪಕ್ಷಗಳ ನಾಯಕರು ಈಗ ಮನೆ ಮನೆಗೆ ತೆರಳಿ ಮತದಾರರ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ‌ ಅವರು ಇಂದು ಗಾಜಿಯಾಬಾದ್ ನಲ್ಲಿ ಮನೆ ಮನೆ ಪ್ರಚಾರ ಮಾಡಲಿದ್ದಾರೆ.
Published by:Latha CG
First published: