ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಿಸಿದ ಯೋಗಿ ಆದಿತ್ಯನಾಥ್ ಸರ್ಕಾರ

ಇಂದು ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪ್ರಕರಣ ತನಿಖೆ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಏನು ಹೇಳುತ್ತಾರೋ ಅದನ್ನೇ ನಾವು ಮಾಡುತ್ತೇವೆ. ಯಾರು ದುಷ್ಕೃತ್ಯ ನಡೆಸಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ.

G Hareeshkumar | news18-kannada
Updated:December 7, 2019, 9:40 PM IST
ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಿಸಿದ ಯೋಗಿ ಆದಿತ್ಯನಾಥ್ ಸರ್ಕಾರ
ಸಾಂದರ್ಭಿಕ ಚಿತ್ರ
  • Share this:
ಲಕ್ನೋ(ಡಿ.07): ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಜೊತೆಗೆ ಮನೆ ನಿರ್ಮಾಣ ಮಾಡಿಕೊಡುವ ಭರವಸೆಯನ್ನುನೀಡಿದೆ. 

ಜೊತೆಗೆ ಸಂತ್ರಸ್ತೆಯ ಕುಟುಂಬವನ್ನ ಇಂದು ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಪ್ರಕರಣ ತನಿಖೆ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಏನು ಹೇಳುತ್ತಾರೋ ಅದನ್ನೇ ನಾವು ಮಾಡುತ್ತೇವೆ. ಯಾರು ದುಷ್ಕೃತ್ಯ ನಡೆಸಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಮಾಡಲ್ಲ  ಎಂದು ಹೇಳಿದರು.

ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಗುರುವಾರ ಮಧ್ಯಾಹ್ನ ಬೆಂಕಿ ಹಚ್ಚಲಾಗಿತ್ತು. ಕೋರ್ಟ್​ಗೆ ತೆರಳುತ್ತಿದ್ದ ಯುವತಿಯನ್ನು ಇದ್ದಕ್ಕಿದ್ದಂತೆ ಅಟ್ಟಿಸಿಕೊಂಡು ಬಂದ ಆಗಂತುಕರು ಆಕೆಗೆ ಬೆಂಕಿ ಹಚ್ಚಿ ಓಡಿ ಹೋಗಿದ್ದರು. ಈ ಘಟನೆಯಿಂದ ಯುವತಿಯ ದೇಹದ ಬಹುಪಾಲು ಸುಟ್ಟುಹೋಗಿತ್ತು. 40 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ : ಈ ದೇಶದ ಆಡಳಿತ ನಡೆಸುತ್ತಿರುವವರು ಹಿಂಸೆಯಲ್ಲಿ ನಂಬಿಕೆ ಹೊಂದಿದ್ದಾರೆ; ರಾಹುಲ್​ ಗಾಂಧಿ

ನಿರ್ಭಯಾ ಹತ್ಯೆ ಪ್ರಕರಣದ ನಂತರ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮತ್ತೊಂದು ಅಮಾನವೀಯ ಘಟನೆ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ಆರೋಪಿಗೂ ಶಿಕ್ಷೆಯಾಗಿರಲಿಲ್ಲ. 2017ರ ಮಾರ್ಚ್​ನಲ್ಲಿ ನಡೆದ ಪ್ರಕರಣದಲ್ಲಿ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗಾರ್ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದರು.

 
First published:December 7, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ