Crime News: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 55 ದಿನಗಳಲ್ಲೇ ಜೀವಾವಧಿ ಶಿಕ್ಷೆ

ಬಂಧನವಾದ ಎರಡು ವಾರಗಳಲ್ಲಿ ಈ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದೇವೆ ಎಂದು ಇಟಾವಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಇಟಾವಾ ಪೊಲೀಸ್ ಮುಖ್ಯಸ್ಥ ಆಕಾಶ್ ತೋಮರ್ ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳ ವಿರುದ್ಧ ಪ್ರತಿಭಟನೆಯ ಸಾಂದರ್ಭಿಕ ಚಿತ್ರ

ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳ ವಿರುದ್ಧ ಪ್ರತಿಭಟನೆಯ ಸಾಂದರ್ಭಿಕ ಚಿತ್ರ

 • Share this:
  ಲಕ್ನೋ (ಮಾರ್ಚ್​ 16); ನಾಲ್ಕು ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ಅಪರಾಧಿ ಅರುಣ್ ಎಂಬಾತನಿಗೆ ಕೇವಲ 55 ದಿನದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಪ್ರಕರಣ ಇತ್ಯರ್ಥಪಡಿಸಿರುವ ಘಟನೆ ಉತ್ತರಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಶೀಘ್ರವಾಗಿ ನಡೆದ ತನಿಖೆಯೆ ಇದಕ್ಕೆ ಕಾರಣ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. ಅರುಣ್ ಕುಮಾರ್ ಎಂಬ ಆರೋಪಿಯನ್ನು ಜನವರಿ 19 ರಂದು ಇಟಾವಾ ಜಿಲ್ಲೆಯಿಂದ ಬಂಧಿಸಲಾಗಿತ್ತು. ನಂತರ ಅಪ್ರಾಪ್ತ ವಯಸ್ಕರ ವಿರುದ್ಧದ ಲೈಂಗಿಕ ಅಪರಾಧಗಳನ್ನು ನಿರ್ವಹಿಸುವ ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

  ಬಂಧನವಾದ ಎರಡು ವಾರಗಳಲ್ಲಿ ಈ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದೇವೆ ಎಂದು ಇಟಾವಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಇಟಾವಾ ಪೊಲೀಸ್ ಮುಖ್ಯಸ್ಥ ಆಕಾಶ್ ತೋಮರ್ ಟ್ವೀಟ್ ಮಾಡಿದ್ದು,  ಈ ಟ್ವೀಟ್​ನಲ್ಲಿ ಆರೋಪಿ ಅರುಣ್ ಜನವರಿ 2021 ರಲ್ಲಿ  4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಘಟನೆ ನಡೆದು 24 ಗಂಟೆಗಳ ಒಳಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಿರಂತರ ಮೇಲ್ವಿಚಾರಣೆಯಿಂದಾಗಿ ಘಟನೆ ನಡೆದು 55 ದಿನಗಳಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ" ಎಂದು ತಿಳಿಸಿದ್ದಾರೆ.
  Published by:MAshok Kumar
  First published: