ಫಿರೋಜಾಬಾದ್(ನ.30): ಉತ್ತರ ಪ್ರದೇಶದ ಫಿರೋಜಾಬಾದ್ನ(Firozabad) ಜಸ್ರಾನಾದಲ್ಲಿ ಮಂಗಳವಾರ ಹೃದಯ ವಿದ್ರಾವಕ ಅಪಘಾತ ಸಂಭವಿಸಿದೆ. ಇಲ್ಲಿನ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಅಂಗಡಿಯಲ್ಲಿ ಬೆಂಕಿ (Fire) ಕಾಣಿಸಿಕೊಂಡು ಒಂದೇ ಕುಟುಂಬದ 6 ಮಂದಿ ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ (Accident) 3 ಮಂದಿ ಗಂಭೀರವಾಗಿ ಸುಟ್ಟು ಕರಕಲಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಉಲ್ಲೇಖಿಸಿವೆ. ಅಪಘಾತದ ಬಳಿಕ ಸ್ಥಳದಲ್ಲಿದ್ದವರು ಘಟನೆಯ ಭೀಕರತೆ ತಿಳಿಸಿದ್ದಾರೆ. ತರಾತುರಿಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಅಪಘಾತದ ಮಾಹಿತಿ ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು (Police) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ದುರಂತ
ಜಸ್ರಾನಾ ಪ್ರದೇಶದ ಪಾಧಮ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ಫಿರೋಜಾಬಾದ್ ಎಸ್ಪಿ ಆಶಿಶ್ ತಿವಾರಿ ತಿಳಿಸಿದ್ದಾರೆ. ಇಲ್ಲಿನ ಇನ್ವರ್ಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿತ್ತು. ಅದು ಭೀಕರ ಬೆಂಕಿಯ ರೂಪವನ್ನು ಪಡೆದುಕೊಂಡಿತು. ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಇದರಲ್ಲಿ 4 ಮಕ್ಕಳೂ ಸೇರಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕ ದಳದ 18 ವಾಹನಗಳು ಸ್ಥಳದಲ್ಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ನಾಯಂಡಹಳ್ಳಿಯಲ್ಲಿ ಅಗ್ನಿಅವಘಡ: 20 ಗುಡಿಸಲು ಬೆಂಕಿಗೆ ಭಸ್ಮ
18 ಅಗ್ನಿಶಾಮಕ ದಳ ಮತ್ತು 12 ಪೊಲೀಸ್ ಠಾಣಾ ಸಿಬ್ಬಂದಿ
ರಕ್ಷಣಾ ಕಾರ್ಯದಲ್ಲಿ 18 ಅಗ್ನಿಶಾಮಕ ದಳ ಮತ್ತು 12 ಪೊಲೀಸ್ ಠಾಣಾ ಸಿಬ್ಬಂದಿ ಭಾಗಿ
ಆಗ್ರಾ, ಮೈನ್ಪುರಿ, ಇಟಾಹ್ ಮತ್ತು ಫಿರೋಜಾಬಾದ್ನಿಂದ 18 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ಫಿರೋಜಾಬಾದ್ ಎಸ್ಪಿ ಆಶಿಶ್ ತಿವಾರಿ ತಿಳಿಸಿದ್ದಾರೆ. ಇದರೊಂದಿಗೆ 12 ಪೊಲೀಸ್ ಠಾಣೆಗಳ ಪೊಲೀಸರು ಕೂಡ ಸ್ಥಳದಲ್ಲಿಯೇ ಇದ್ದಾರೆ. ಜನದಟ್ಟಣೆ ಇರುವ ಪ್ರದೇಶವಾಗಿರುವುದರಿಂದ ರಕ್ಷಣಾ ಸಿಬ್ಬಂದಿ ಹೆಚ್ಚಿನ ಶ್ರಮ ಪಡಬೇಕಾಯಿತು. ಯಾರಾದರೂ ಒಳಗೆ ಸಿಲುಕಿಕೊಂಡಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
Uttar Pradesh | 2adults & 4children of a family lost their lives in a fire that was ignited due to short circuit in an inverter factor, in Padham town of Jasrana area under Firozabad district. 18 fire tenders reached on spot along with Police: Ashish Tiwari, SP Firozabad Police pic.twitter.com/nnIaYYt7xh
— ANI UP/Uttarakhand (@ANINewsUP) November 29, 2022
ಪೊಲೀಸರ ಪ್ರಕಾರ, ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂತ್ತು. ಬಳಿಕ ಈ ಬೆಂಕಿ ಇಡೀ ಕಟ್ಟಡವನ್ನು ಆವರಿಸಿದೆ. ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬ ಇದೇ ಕಟ್ಟಡದಲ್ಲಿ ವಾಸವಾಗಿತ್ತು ಎನ್ನಲಾಗಿದೆ.
ಇದನ್ನೂ ಓದಿ: ದೇವರಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅನಾಹುತ; ಇಬ್ಬರ ಸಾವು
2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ಸಿಎಂ ಯೋಗಿ ಘೋಷಣೆ
ಫಿರೋಜಾಬಾದ್ನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಯೋಗಿ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸಿಎಂ ಯೋಗಿ ಸೂಚನೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ