ಅಕ್ಟೋಬರ್ 4 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

news18
Updated:September 29, 2018, 10:21 PM IST
ಅಕ್ಟೋಬರ್ 4 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ
news18
Updated: September 29, 2018, 10:21 PM IST
ನ್ಯೂಸ್ 18 ಕನ್ನಡ 

 ನವದೆಹಲಿ ( ಸೆ. 29) :  ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಅಕ್ಟೋಬರ್ 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ 19ನೇ ಭಾರತ - ರಷ್ಯಾ ವಾರ್ಷಿಕ ದ್ವಿಪಕ್ಷೀಯ ಸಮಿತಿ ಸಭೆಯಲ್ಲಿ ವ್ಲಾಡಿಮಿರ್ ಪುಟಿನ್ ಪಾಲ್ಗೊಳ್ಳಲಿದ್ದಾರೆಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವ್ಲಾಡಿಮಿರ್ ಪುಟಿನ್ ಸಭೆ ನಡೆಸಲಿದ್ದಾರೆ. ಎರಡೂ ದೇಶಗಳ ಸಂಬಂಧ ವೃದ್ಧಿ, ಪ್ರಸಕ್ತ ಅಂತಾರಾಷ್ಟ್ರೀಯ ಮತ್ತು ದೇಶದ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವರು.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌  ಅವರನ್ನು ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾಗಲಿದ್ದಾರೆ. ಆದರೆ, ಬಹುನಿರೀಕ್ಷಿತ ರಷ್ಯಾದ ಅತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆ S-400 ಟ್ರಯಂಫ್‌ ಖರೀದಿಯ ಕುರಿತು ಮಾತುಕತೆ ನಡೆಯಲಿದೆಯಾ ಇಲ್ಲಾ ಎಂಬುದನ್ನು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ದೃಢಪಡಿಸಿಲ್ಲ.

 
First published:September 29, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...