ಲೈಂಗಿಕ ದೌರ್ಜನ್ಯಕ್ಕೆ ವಿರೋಧ ಒಡ್ಡಿದ ಮಹಿಳೆಗೆ ಆಸಿಡ್ ಕುಡಿಸಿ, ಚಾಕುವಿನಿಂದ ಇರಿದ ಕಾಮಾಂಧ

ಸದ್ಯ ಹಲ್ಲೆಗೊಳಗಾದ 30 ವರ್ಷದ ಮಹಿಳೆಯನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಖೆಯ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಮಹಿಳೆಯ ಮೇಲೆ ಹಲ್ಲೆ ಮಾಡಿದಾತನನ್ನು ಸತೇಂದರ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈತ ಮಹಿಳೆಯ ಪಕ್ಕದ ಮನೆಯವನೇ ಎಂದು ತಿಳಿದು ಬಂದಿದೆ.

ಆಸ್ಪತ್ರೆಗೆ ದಾಖಲಾಗಿರುವ ಹಲ್ಲೆಗೊಳಗಾದ ಮಹಿಳೆ

ಆಸ್ಪತ್ರೆಗೆ ದಾಖಲಾಗಿರುವ ಹಲ್ಲೆಗೊಳಗಾದ ಮಹಿಳೆ

 • Share this:
  ಉತ್ತರ ಪ್ರದೇಶ(ಫೆ.03): ಲೈಂಗಿಕ ದೌರ್ಜನ್ಯ ಎಸಗಲು ಬಂದಾತನಿಗೆ ವಿರೋಧ ಒಡ್ಡಿದ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ, ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಸಿಕ್ರಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಎಲ್ಲರನ್ನೂ ದಿಗ್ಬ್ರಾಂತಗೊಳಿಸಿದ್ದು, ನೆರೆಹೊರೆಯ ಜನರು ಬೆಚ್ಚಿಬಿದ್ದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದ ಕಾಮಾಂಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದ. ಇದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ, ಬಲವಂತವಾಗಿ ಆಸಿಡ್ ಕುಡಿಸಿದ್ದಾನೆ. ಜೊತೆಗೆ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

  ಸದ್ಯ ಹಲ್ಲೆಗೊಳಗಾದ 30 ವರ್ಷದ ಮಹಿಳೆಯನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಖೆಯ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಮಹಿಳೆಯ ಮೇಲೆ ಹಲ್ಲೆ ಮಾಡಿದಾತನನ್ನು ಸತೇಂದರ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಈತ ಮಹಿಳೆಯ ಪಕ್ಕದ ಮನೆಯವನೇ ಎಂದು ತಿಳಿದು ಬಂದಿದೆ.

  Aero India 2021: ಬೆಂಗಳೂರಿನಲ್ಲಿ ಏರ್ ಶೋ; ಈ ರಸ್ತೆಗಳಲ್ಲಿ ಇಂದಿನಿಂದ 3 ದಿನ ಸಂಚಾರ ನಿಷೇಧ

  ಸೋಮವಾರ ತಡರಾತ್ರಿ ಆರೋಪಿ ಸತೇಂದರ ಮಹಿಳೆಯ ಮನೆಗೆ ನುಗ್ಗಿ, ಬಲವಂತವಾಗಿ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ. ಆಗ ಮಹಿಳೆ ಇದಕ್ಕೆ ವಿರೋಧ ಒಡ್ಡಿದ್ದಾಳೆ. ಇದರಿಂದ ಕುಪಿತಗೊಂಡ ಆರೋಪಿ ಆಕೆಗೆ ಬಲವಂತವಾಗಿ ಆಸಿಡ್ ಕುಡಿಸಿದ್ದಾನೆ. ಆಗ ಮಹಿಳೆ ಜೋರಾಗಿ ಚೀರಾಡಿದ್ದಾಳೆ. ಆಕೆಯ ಬಾಯಿಯನ್ನು ಮುಚ್ಚಿಸಲು ಅಲ್ಲೇ ಇದ್ದ ಚಾಕುವಿನಿಂದ ಮಹಿಳೆಯ ಹೊಟ್ಟೆಗೆ ಬಲವಾಗಿ ತಿವಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

  ಹಲ್ಲೆಗೊಳಗಾದ ಮಹಿಳೆಗೆ ಮೂರು ಮಕ್ಕಳಿದ್ದು, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಮಹಿಳೆಯ ಚೀರಾಟ ಕೇಳಿ ಸ್ಥಳಕ್ಕಾಗಮಿಸಿದ ನೆರೆ-ಹೊರೆಯವರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

  ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಆ್ಯಂಬುಲೆನ್ಸ್​ ಸಹಾಯದಿಂದ ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೊದಲಿಗೆ ಈ ಪ್ರಕರಣದ ಬಗ್ಗೆ ಪೊಲೀಸರು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕೊಲೆ ಯತ್ನದ ಕೇಸ್​ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
  Published by:Latha CG
  First published: