ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗ ಇಲ್ಲ: ವಿವಾದಕ್ಕೀಡಾದ ಯುಪಿ ಸರ್ಕಾರದ ಹೊಸ ಪ್ರಸ್ತಾವನೆ

ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಪಡೆದವರು ಸರ್ಕಾರಿ ಸಬ್ಸಿಡಿ, ಸರ್ಕಾರದ ಕಲ್ಯಾಣ ಯೋಜನೆಗಳಿಂದ ವಂಚಿತರಾಗಲಿದ್ದಾರೆ. 3ನೇ ಮಗು, ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ನಿರ್ಬಂಧಗಳು ಹೊಸ ಕಾಯ್ದೆಯಲ್ಲಿವೆ.

ಯುಪಿ ಸಿಎಂ ಯೋಗಿ

ಯುಪಿ ಸಿಎಂ ಯೋಗಿ

  • Share this:
ಲಖನೌ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿಥ್ಯನಾಥ್​ ಸರ್ಕಾರ ಜಾರಿಗೆ ತರಲಿರುವ ಹೊಸ ಜನಸಂಖ್ಯಾ ನಿಯಂತ್ರಣ ಕಾಯ್ದೆ ವಿವಾದಕ್ಕೆ ಗುರಿಯಾಗಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರು ಸರ್ಕಾರಿ ಉದ್ಯೋಗಕ್ಕೆ ಅರ್ಹರಲ್ಲ ಎಂಬ ಹೊಸ ನಿಯಮಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಪಡೆದವರು ಸರ್ಕಾರಿ ಸಬ್ಸಿಡಿ, ಸರ್ಕಾರದ ಕಲ್ಯಾಣ ಯೋಜನೆಗಳಿಂದ ವಂಚಿತರಾಗಲಿದ್ದಾರೆ. 3ನೇ ಮಗು, ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ನಿರ್ಬಂಧಗಳು ಹೊಸ ಕಾಯ್ದೆಯಲ್ಲಿವೆ.

ಉತ್ತರ ಪ್ರದೇಶ ರಾಜ್ಯ ಜನಸಂಖ್ಯಾ ನಿಯಂತ್ರಣ ಹಾಗೂ ಸ್ಥಿರೀಕರಣ ಕಾಯ್ದೆ- 2021ನ್ನು ಜಾರಿಗೆ ತರಲು ಬಿಜೆಪಿಯ ಯೋಗಿ ಸರ್ಕಾರ ಮುಂದಾಗಿದೆ. ಕಾಯ್ದೆ ಬಗ್ಗೆ ಸಾರ್ವಜನಿಕ ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 19ರವರೆಗೆ ಕಾಲಾವಕಾಶ ನೀಡಲಾಗಿದೆ. ರಾಜ್ಯದಲ್ಲಿ ಮುಂಬರುವ ಮುನ್ಸಿಪಲ್​ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಈ ಹೊಸ ಕಾಯ್ದೆಯನ್ನು ತರಲಾಗಿದೆ. ರಾಜಕೀಯ ಉದ್ದೇಶದೊಂದಿಗೆ ಕಾಯ್ದೆ ರೂಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಾಯ್ದೆ ಜಾರಿಯ ನಂತರ ನಿಯಮಗಳನ್ನು ಉಲ್ಲಂಘಿಸಿದರೆ ಎಲ್ಲಾ ರೀತಿಯ ಸರ್ಕಾರಿ ಸೌಲಭ್ಯಗಳಿಂದ ಬಹಿಷ್ಕರಿಸಲಾಗುವುದು ಎಂಬುದನ್ನೂ ಕಾಯ್ದೆಯಲ್ಲಿ ಹೇಳಲಾಗಿದೆ. ಇನ್ನು ಹೀಗಾಗಲೇ ಸರ್ಕಾರಿ ಉದ್ಯೋಗದಲ್ಲಿದ್ದು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಪಡೆದರೆ ಉದ್ಯೋಗ ಬಡ್ತಿಯಿಂದ ವಂಚಿತರಾಗಲಿದ್ದಾರಂತೆ. ಇನ್ನು ರೇಷನ್​ ಕಾರ್ಡ್​​ ಕೇವಲ 4 ಮಂದಿಗೆ ಮಾತ್ರ ಸಿಮಿತವಾಗಲಿದೆ. 4 ಜನರಿಗೆ ಆಗುವಷ್ಟು ಪಡಿತರವನ್ನು ಮಾತ್ರ ಸರ್ಕಾರ ನೀಡಲಿದೆ. ಯುಪಿ ಸರ್ಕಾರದ ಹೊಸ ಜನಸಂಖ್ಯಾ ನಿಯಂತ್ರಣ ಕಾಯ್ದೆ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗುತ್ತಿದೆ

ಇದನ್ನೂ ಓದಿ: ಅಂಬಿ ಬಳಗ ಸಿಡಿದೇಳುತ್ತಲೇ ತಣ್ಣಗಾದರಾ ಎಚ್.ಡಿ.ಕುಮಾರಸ್ವಾಮಿ.. ಮಂಡ್ಯ ಸಂಸದೆ ಸುಮಲತಾ ಮೇಲುಗೈ?

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Kavya V
First published: