UPSC Specialist Grade Recruitment 2021: ಸಹಾಯಕ ಪ್ರಾಧ್ಯಾಪಕ, ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ ಹೇಗೆ?:  ಸಹಾಯಕ ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

JOB

JOB

  • Share this:
    ಕೇಂದ್ರ ಲೋಕ ಸೇವಾ ಆಯೋಗವು (UPSC) ಖಾಲಿ ಇರುವ 56 ಸಹಾಯಕ ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಅರ್ಜಿ ಸಲ್ಲಿಸಲು ತಿಳಿಸಿದೆ

    ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂ.ಎಸ್ಸಿ, ಬಿ.ಎಸ್ಸಿ ಮತ್ತು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ಸಹಾಯಕ ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರು ಅರ್ಜಿ ಹಾಕಬಹುದು.

    -ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ

    -ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

    -ಅಂತೆಯೇ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ ಹೇಗೆ?:  ಸಹಾಯಕ ಪ್ರಾಧ್ಯಾಪಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು  25 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ: ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.  ಜನವರಿ 28,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
    First published: