news18-kannada Updated:February 17, 2020, 1:48 PM IST
ಪ್ರಧಾನಿ ಮೋದಿ-ಟ್ರಂಪ್
ವಾಷಿಂಗ್ಟನ್(ಫೆ.11): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ ತಿಂಗಳಾಂತ್ಯದಲ್ಲಿ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ವೇತ ಭವನದ ಮೂಲಗಳು ತಿಳಿಸಿವೆ.
ಟ್ರಂಪ್ ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಫೆಬ್ರವರಿ 24 ಮತ್ತು 25ರಂದು ಎರಡು ದಿನ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
ಟ್ರಂಪ್ ಮತ್ತು ಅವರ ಹೆಂಡತಿ ಮೆಲಾನಿಯಾ ಫೆ.24ರಂದು ಭಾರತಕ್ಕೆ ಬಂದಿಳಿಯಲಿದ್ದಾರೆ. ಟ್ರಂಪ್ ಭೇಟಿ 'ಅಮೆರಿಕ ಮತ್ತು ಭಾರತದ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಸಹಕಾರಿಯಾಗಲಿದೆ' ಎಂದು ಶ್ವೇತ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಿಲ್ಲಿ ಫಲಿತಾಂಶಕ್ಕೆ ಕ್ಷಣಗಣನೆ: ಎಲ್ಲ ಸಮೀಕ್ಷೆಗಳ ಪ್ರಕಾರ ಆಪ್ ಫೇವರೆಟ್
ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಈ ವಾರಾಂತ್ಯದಲ್ಲಿ ದೂರವಾಣಿ ಸಂಭಾಷಣೆ ನಡೆಸಿದ್ದರು ಎಂದು ಶ್ವೇತ ಭವನದ ಮೂಲಗಳು ತಿಳಿಸಿವೆ. ಇಬ್ಬರು ಪ್ರಬಲ ನಾಯಕರು ನಿಕಟ ಬಾಂಧವ್ಯ ಹೊಂದಿದ್ದಾರೆ. ಪ್ರಧಾನಿ ಮೋದಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಅಮೆರಿಕದ ಟೆಕ್ಸಾಸ್ನ ಹೂಸ್ಟನ್ನಲ್ಲಿ ನಡೆದ 'ಹೌಡಿ ಮೋದಿ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಅಹಮದಾಬಾದ್ಗೆ ಟ್ರಂಪ್ ದಂಪತಿ ಭೇಟಿ ನೀಡಲಿದ್ದಾರೆ. ಈ ಹಿಂದೆ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ 2010 ಮತ್ತು 2015ರಲ್ಲಿ ಎರಡು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು. 2015ರ ಗಣರಾಜ್ಯೋತ್ಸವದ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.
ಬಿಎಸ್ವೈಗೆ ಮತ್ತೆ ಶುರುವಾಯ್ತ ವಲಸಿಗರ ಕಾಟ?; ಎಂಎಸ್ಐಎಲ್ ಅಧ್ಯಕ್ಷ ಸ್ಥಾನ ನಿರಾಕರಿಸಿದ ಕುಮಟಳ್ಳಿ
"ದ್ವಿಪಕ್ಷೀಯ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಮೆರಿಕ-ಭಾರತದ ನಡುವಿನ ಬಾಂಧವ್ಯ ವೃದ್ಧಿಸಲು ಟ್ರಂಪ್ ಅವರ ಭಾರತ ಪ್ರವಾಸವು ಸಮಯೋಚಿತವಾಗಿದೆ" ಎಂದು ಭಾರತ-ಅಮೆರಿಕದ ಲೋಕೋಪಕಾರಿ ಎಂ.ಆರ್.ರಂಗಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
First published:
February 11, 2020, 8:11 AM IST