ಉತ್ತರಪ್ರದೇಶ; ಚೋಟಾ ರಾಜನ್ ಭಾರತದ ಭೂಗತ ಲೋಕವನ್ನು ಆಳಿದ ಒಂದು ಕಾಲದ ಡಾನ್. ಮುಂಬೈ ಸರಣಿ ಸ್ಪೋಟದ ರುವಾರಿ ದಾವೂದ್ ಇಬ್ರಾಹಿಂನ ಒಂದು ಕಾಲದ ಬಂಟ. ಈತನ ವಿರುದ್ಧ ಭಾರತದ ವಿವಿಧ ರಾಜ್ಯಗಳಲ್ಲಿ ಹತ್ತಾರು ಅಪರಾಧ ಪ್ರಕರಣಗಳು ದಾಖಲಾಗಿವೆ. ಕೆಲವು ಪ್ರಕರಣಗಳಲ್ಲಿ ಈತ ಕರ್ನಾಟಕ ಪೊಲೀಸರಿಗೂ ಅಗತ್ಯವಿದ್ದಾನೆ. ಈತನನ್ನು ಇತ್ತೀಚೆಗೆ ವಿದೇಶದಲ್ಲಿ ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ, ಭಾರತಕ್ಕೆ ಕರೆತರಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಇಂತಹ ಸಂದರ್ಭದಲ್ಲಿ ಉತ್ತರ ಪ್ರದೇಶದ ಕಾನ್ಪುರ ಅಂಚೆ ಇಲಾಖೆಯು ಕುಖ್ಯಾತ ಭೂಗತ ಪಾತಕಿಗಳಾದ ಚೋಟಾ ರಾಜನ್ ಮತ್ತು ಮುನ್ನಾ ಭಜರಂಗಿಯ ಚಿತ್ರಗಳಿರುವ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವ ಮೂಲಕ ವಿವಾದಕ್ಕೆ ಗುರಿಯಾಗಿದೆ. ಅಂಚೆ ಚೀಟಿಗಳನ್ನು ‘ಮೈ ಸ್ಟಾಂಪ್’ ಯೋಜನೆಯಡಿ ಮುದ್ರಿಸಲಾಗಿದ್ದು, ಹಲವರು ಅಂಚೆ ಇಲಾಖೆ ಮತ್ತು ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಅಂಚೆ ಇಲಾಖೆ ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಉತ್ತರಪ್ರದೇಶದ ಕಾನ್ಪುರ ಅಂಚೆ ಇಲಾಖೆ ಹೀಗೆ ಭೂಗತ ಪಾತಕಿಗಳ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ಸಾಧಕರಿಗೆ ಅಗೌರವ ತೋರಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.
#Respect, for the way our govt respects every citizen!
Postal stamps of Chhota Rajan and Munna Bajrangi released in Kanpur - 'माई स्टैंप' योजना ...
https://t.co/YC57uEwfq1
— Bhuvan Bagga 吧奥文 (@Bhuvanbagga) December 28, 2020
Standup comedy in Indian state of UTTAR Pradesh released Postal Ticket in the name of Notorious war lord Chota Rajan and Local State Mafioso Munna Bajrangi . But timing is good as crime rate of UP perhaps forced them to consider Mafioso as their Legend Lol.@WSJ @TheSun @gulf_news https://t.co/Y0E2MU2zVj
— Abid Asad (@AbidAsad) December 28, 2020
ಇದನ್ನೂ ಓದಿ; Farmers Protest: ಡಿ. 30ರಂದು ರೈತರ ಸಭೆ ಕರೆದ ಕೇಂದ್ರ; ಸಮಸ್ಯೆ ಬಗೆಹರಿಸಲು ಸಮಿತಿ ಬದ್ಧ
‘ಮೈ ಸ್ಟಾಂಪ್’ ಯೋಜನೆಯಡಿ ಆಸಕ್ತರು ನಿಗದಿತ ಶುಲ್ಕ ಪಾವತಿಸಿ ತಮ್ಮ ವ್ಯಕ್ತಿ ಚಿತ್ರವುಳ್ಳ ಅಂಚೆ ಚೀಟಿಯ ಹಾಳೆಗಳನ್ನು ಪಡೆಯಬಹುದು. ಈ ಸ್ಟಾಂಪ್‌ಗಳನ್ನು ಪತ್ರ, ಲಕೋಟೆ ಕಳುಹಿಸಲು ಬಳಸಬಹುದು. ಇದಕ್ಕಾಗಿ ಅರ್ಜಿದಾರರರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಗುರುತು ಖಾತರಿಪಡಿಸುವ ದಾಖಲೆಯನ್ನು ಅಂಚೆ ಅಧಿಕಾರಿಗಳಿಗೆ ನೀಡಬೇಕಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ