UP Polls 2022: ನಾಳೆ ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ; 623 ಅಭ್ಯರ್ಥಿಗಳು ಕಣದಲ್ಲಿ

ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಜಾಟ್ ಪ್ರಾಬಲ್ಯವಿರುವ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಲಕ್ನೋ (ಫೆ. 9):  ಉತ್ತರ ಪ್ರದೇಶದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನಾಳೆ ಮೊದಲ ಹಂತದ (UP First Phase Election) ಚುನಾವಣಾ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.  ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಘಾಜಿಯಾಬಾದ್, ಬುಲಂದ್‌ಶಹರ್, ಅಲಿಘರ್, ಮಥುರಾ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ (Election Commission) ಅಂಕಿಅಂಶಗಳ ಪ್ರಕಾರ, ಸುಮಾರು 2.27 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದ್ದು, ಸಂಜೆ ಆರು ಗಂಟೆವರೆಗೆ ಮತದಾನ (Voting) ಚಲಾಯಿಸಲು ಅವಕಾಶ ಇದೆ. ಮೊದಲ ಹಂತದ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳು ನಡೆಸಿದೆ.

  ಘಟಾನುಘಟಿ ನಾಯಕರು ಕಣದಲ್ಲಿ

  ಮೊದಲ ಹಂತದ ಚುನಾವಣೆ ಎದುರಿಸುತ್ತಿರುವ ಕ್ಷೇತ್ರದಲ್ಲಿ ನಿನ್ನೆ ಸಂಜೆಯಿಂದಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇಂದು ಮನೆ ಮನೆ ಪ್ರಚಾರ ಆರಂಭವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಜಾಟ್ ಪ್ರಾಬಲ್ಯವಿರುವ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಕಣದಲ್ಲಿ ಘಟಾನುಘಟಿ ನಾಯಕರು ಕಣದಲ್ಲಿದ್ದು, ರಾಜ್ಯ ಸರ್ಕಾರದ ಸಚಿವರಾದ ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧರಿ ಲಕ್ಷ್ಮೀ ನಾರಾಯಣ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

  ಕಳೆದ ಬಾರಿ 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಹಂತದಲ್ಲಿ 58 ಸ್ಥಾನಗಳ ಪೈಕಿ 53 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಲಾ ಎರಡು ಸ್ಥಾನಗಳನ್ನು ಪಡೆದಿದ್ದವು. ಇದಲ್ಲದೇ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಅಭ್ಯರ್ಥಿಯೂ ಗೆಲುವು ಸಾಧಿಸಿದ್ದರು.

  ಇದನ್ನು ಓದಿ: ಬೆಟ್ಟದ ಸೀಳಿನಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಸೇನಾಪಡೆ, ಊಫ್​.. ಬದುಕಿತು ಬಡಜೀವ!

  ಡಿಜಿಟಲ್​ ಪ್ರಚಾರದ ಮೊರೆ ಹೋದ ರಾಜಕೀಯ ಪಕ್ಷಗಳು
  ಮೊದಲ ಹಂತದ ಮತದಾನದ ಕ್ಷೇತ್ರದಲ್ಲಿ ಬಹುತೇಕ ರಾಜಕೀಯ ಪಕ್ಷಗಳು ಡಿಜಿಟಲ್​ ಮೂಲಕ ಪ್ರಚಾರ ನಡೆಸಿ, ಮತದಾರರ ಓಲೈಕೆ ನಡೆಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಮಾವೇಶ ಮತ್ತು ರೋಡ್ ಶೋಗೆ ನಿರ್ಬಂಧ ವಿಧಿಸಿದ ಹಿನ್ನಲೆ ವರ್ಚುಯಲ್​ ಸಮಾವೇಶವನ್ನು ರಾಜಕೀಯ ಪಕ್ಷಗಳು ಆಯ್ಕೆ ಮಾಡಿಕೊಂಡವು.

  ಇದನ್ನು ಓದಿ: ಯುಪಿಯಲ್ಲಿ ಬಿಜೆಪಿ ಗೆದ್ದರೆ ಲವ್ ಜಿಹಾದ್‌ಗೆ 10 ವರ್ಷ ಜೈಲು

  ಜನರ ಓಲೈಕೆಗೆ ರಾಜಕೀಯ ನಾಯಕರ ಕಸರತ್ತು

  ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವರ್ಚುಯಲ್​ ಚುನಾವಣಾ ಭಾಷಣದ ಮೂಲಕವೇ ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಪ್ರಯತ್ನ ಪಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017 ರ ಮೊದಲು ಕೈರಾನಾದಿಂದ ಹಿಂದೂಗಳ ವಲಸೆಯ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿ ಗಮನಸೆಳೆದರು.

  ಮತ್ತೊಂದೆಡೆ, ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಚೌಧರಿ ತಮ್ಮ ಚುನಾವಣಾ ಪ್ರಚಾರದಲ್ಲಿ ರೈತರ ಸಮಸ್ಯೆಗಳನ್ನು ಒತ್ತಿ ಹೇಳುವ ಮೂಲಕ ಕೃಷ ಕಾಯ್ದೆ ಬಗ್ಗೆ ಪ್ರಸ್ತಾಪಿಸಿದರು. ರಾಜ್ಯದಲ್ಲಿ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ತಮ್ಮ ಚುನಾವಣಾ ಪ್ರಚಾರವನ್ನು ತಡವಾಗಿ ಪ್ರಾರಂಭಿಸಿದರು, ಈ ವೇಳೆ ತಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಜನರಿಗೆ ಮನವರಿಕೆ ಮಾಡುವ ಯತ್ನ ನಡೆಸಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
  Published by:Seema R
  First published: