Uttarakhand Disaster: ಉತ್ತರಾಖಂಡದ ಹಿಮನದಿ ಸ್ಫೋಟದ ಸಾವಿನ ಸಂಖ್ಯೆ 36ಕ್ಕೆ ಏರಿಕೆ; ಮುಂದುವರಿದ ಶೋಧ ಕಾರ್ಯಾಚರಣೆ

Uttarakhand Flood: ಉತ್ತರಾಖಂಡದ ಹಿಮನದಿ ಸ್ಫೋಟದಿಂದ ಉಂಟಾದ ಪ್ರವಾಹದ ಅಬ್ಬರಕ್ಕೆ ಇದುವರೆಗೂ 36 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸುಮಾರು 170 ಜನರು ನಾಪತ್ತೆಯಾಗಿದ್ದಾರೆ.

ಉತ್ತರಾಖಂಡದ ಹಿಮನದಿ ಸ್ಫೋಟದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ

ಉತ್ತರಾಖಂಡದ ಹಿಮನದಿ ಸ್ಫೋಟದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ

 • Share this:
  ಡೆಹ್ರಾಡೂನ್ (ಫೆ. 12): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಉಂಟಾದ ಹಿಮನದಿ ಸ್ಫೋಟದಿಂದ ಭಾರೀ ಪ್ರವಾಹ ಉಂಟಾಗಿತ್ತು. ಈ ಪ್ರವಾಹದ ಅಬ್ಬರಕ್ಕೆ ಇದುವರೆಗೂ 36 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸುಮಾರು 170 ಜನರು ನಾಪತ್ತೆಯಾಗಿದ್ದಾರೆ. ಈ ದುರಂತ ನಡೆದು 6 ದಿನಗಳೇ ಕಳೆದಿವೆ. ಆದರೆ, ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಅಲಕಾನಂದ ಮತ್ತು ದೌಲಿಗಂಗ ನದಿಯ ಪ್ರವಾಹದಲ್ಲಿ ನಾಪತ್ತೆಯಾದವರು ಬದುಕುಳಿದಿರುವುದು ಅನುಮಾನ. ಹೀಗಾಗಿ, ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

  ತಪೋವನ ವಿದ್ಯುತ್ ಯೋಜನೆಯ ಸ್ಥಳದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಟನೆಲ್​ನೊಳಗೆ ಸಿಲುಕಿಕೊಂಡಿದ್ದು, 6 ದಿನಗಳಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಉತ್ತರಾಖಂಡದ ಅಲಕಾನಂದ ಮತ್ತು ದೌಲಿಗಂಗಾ ನದಿಗಳಲ್ಲಿ ಪ್ರವಾಹ ಉಂಟಾಗಿದ್ದರಿಂದ ರಿಷಿಗಂಗಾ ಜಲವಿದ್ಯುತ್ ಯೋಜನೆ ಮತ್ತು ಎನ್​ಟಿಪಿಸಿ ಕೊಚ್ಚಿಹೋಗಿದೆ. ಈ ಘಟನೆಯಲ್ಲಿ ಇದುವರೆಗೂ ಇಬ್ಬರು ಪೊಲೀಸರು ಸೇರಿದಂತೆ 36 ಜನರ ಮೃತದೇಹಗಳು ಪತ್ತೆಯಾಗಿವೆ. ಇನ್ನೂ 170ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಅವರು ಬದುಕುಳಿದಿರುವ ಸಾಧ್ಯತೆ ಕಡಿಮೆಯಿದೆ. ಹೀಗಾಗಿ, ಟನೆಲ್​ನಲ್ಲಿ ಮತ್ತು ಕುಸಿದುಬಿದ್ದ ಕಟ್ಟಡಗಳ ಬಳಿ ಅವರ ದೇಹಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

  ರಿಷಿ ಗಂಗಾ ಜಲವಿದ್ಯುತ್ ಯೋಜನೆಗೆ ನಡೆಯುತ್ತಿದ್ದ ಕಾಮಗಾರಿ ಸ್ಥಳಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮವಾಗಿ, ಇಲ್ಲಿದ ಜನರು ಹಾಗೂ ಕಾಮಗಾರಿಗೆ ಬಳಸುತ್ತಿದ್ದ ಉಪಕರಣ, ವಾಹನ ಸೇರಿದಂತೆ ಎಲ್ಲವೂ ಕೊಚ್ಚಿ ಹೋಗಿದೆ. ಅಲಕಾನಂದ ನದಿಯಲ್ಲೂ ಪ್ರವಾಹ ಭೀತಿ ಎದುರಾಗಿದ್ದು, ಹಲವರನ್ನು ರಕ್ಷಿಸಲಾಗಿದೆ. ಇಂದು ಕೂಡ ಎನ್​ಡಿಆರ್​ಎಫ್​ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ದೌಲಿಗಂಗಾ ನದಿಯ ನೀರಿನ ಮಟ್ಟ ಮತ್ತೆ ಹೆಚ್ಚಾಗಿದ್ದರಿಂದ ನಿನ್ನೆ ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇಂದು ಮತ್ತೆ ಶೋಧ ಕಾರ್ಯಾಚರಣೆ ಮುಂದುವರೆದಿದೆ.

  ಪ್ರವಾಹದ ತೀವ್ರತೆಗೆ ಎನ್​ಪಿಟಿಸಿಯ 480 ಮೆಗಾವ್ಯಾಟ್ ತಪೋವನ್ - ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವ್ಯಾಟ್ ರಿಷಿಗಂಗಾ ಹೈಡೆಲ್ ಪ್ರಾಜೆಕ್ಟ್ ಹಾನಿಗೊಳಗಾಗಿದ್ದು, ನೂರಾರು ಕಾರ್ಮಿಕರು ಟನೆಲ್​ನೊಳಗೆ ಸಿಲುಕಿಕೊಂಡಿದ್ದರು. ಈ ಪ್ರವಾಹ ಉಂಟಾಗಿ 6 ದಿನಗಳೇ ಕಳೆದಿರುವುದರಿಂದ ಅವರು ಬದುಕಿರುವ ಸಾಧ್ಯತೆ ಕಡಿಮೆ.

  ಹಿಮನದಿ ಸ್ಫೋಟಕ್ಕೆ ಕಾರಣವೇನೆಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ನಾಪತ್ತೆಯಾಗಿರುವವರನ್ನು ಪತ್ತೆಹಚ್ಚಲು ಶ್ವಾನ ದಳವನ್ನೂ ನಿಯೋಜನೆ ಮಾಡಲಾಗಿದೆ. ಚಮೋಲಿಯ ತಪೋವನ ಡ್ಯಾಂ ಬಳಿ ಶ್ವಾನ ದಳ ಶೋಧ ಕಾರ್ಯ ನಡೆಸುತ್ತಿದೆ. ಇಂದು ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಯಲಿದೆ.

  ಉತ್ತರಾಖಂಡದಲ್ಲಿ ನಡೆದ ದುರಂತವನ್ನು ಪ್ರಧಾನಮಂತ್ರಿ ಮೋದಿಯವರೇ ಖುದ್ದಾಗಿ ಗಮನಿಸುತ್ತಿದ್ದಾರೆ. ಕಂಟ್ರೋಲ್ ರೂಂ ಮತ್ತು ಗೃಹ ಸಚಿವಾಲಯ ಅಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಗೆ ಉತ್ತರಾಖಂಡ ಸರ್ಕಾರಕ್ಕೆ ಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ನಿನ್ನೆ ತಿಳಿಸಿದ್ದಾರೆ.  ರಿಷಿಗಂಗಾ ಹೈಡ್ರೋ ಪವರ್ ಪ್ರಾಜೆಕ್ಟ್​ನ 22 ಕಾರ್ಮಿಕರು ಮತ್ತು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ (ಎನ್​ಟಿಪಿಸಿ)ಯ 148 ಕಾರ್ಮಿಕರು ನಾಪತ್ತೆಯಾಗಿದ್ದು, ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
  Published by:Sushma Chakre
  First published: