ಯಮುನಾ ನದಿ ತೀರದಲ್ಲಿ ಇಂದು ಸಂಜೆ ವಾಜಪೇಯಿ ಅಂತ್ಯಸಂಸ್ಕಾರ


Updated:August 17, 2018, 8:53 AM IST
ಯಮುನಾ ನದಿ ತೀರದಲ್ಲಿ ಇಂದು ಸಂಜೆ ವಾಜಪೇಯಿ ಅಂತ್ಯಸಂಸ್ಕಾರ

Updated: August 17, 2018, 8:53 AM IST
ನ್ಯೂಸ್​-18 ಕನ್ನಡ

ಬೆಂಗಳೂರು (ಆಗಸ್ಟ್​.17): ಬಹು ದಿನಗಳ ಅಂಗಾಂಗ ವೈಫಲ್ಯದಿಂದ ಗುರುವಾರ ಸಂಜೆ ಅಸ್ತಂಗತರಾದ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಅಂತಿಮ ಸಂಸ್ಕಾರ ಇಂದು ಸಂಜೆ 5 ಗಂಟೆಗೆ ಯಮುನಾ ನದಿ ತೀರದಲ್ಲಿ ಬ್ರಾಹ್ಮಣ ಸಮುದಾಯದ ವಿಧಿಗಳ ಪ್ರಕಾರ ನೆರವೇರಲಿದೆ.

ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಕೃಷ್ಣ ಮೆನನ್ ನಿವಾಸದಲ್ಲಿ ಇರಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಬಿಜೆಪಿ ಕಚೇರಿಗೆ ಸ್ಥಳಾಂತರಿಸಿ, ಸಾವರ್ಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಸೇರಿ ಹಲವು ಗಣ್ಯರು ಅಟಲ್ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್​. ಚಂದ್ರಬಾಬು ನಾಯ್ಡು, ಕೇರಳ ರಾಜ್ಯಪಾಲ ಪಿ. ಸತ್ಯಶಿವಂ ಹಾಗೂ ಬಾಲಿವುಡ್​ ನಟರಾದ ಶಬಾನಾ ಅಜ್ಮಿ ಮತ್ತು ಜಾವೇದ್​ ಅಖ್ತರ್​ ಅವರು ಅಟಲ್​ ಅಂತಿಮ ದರ್ಶನ ದರ್ಶನ ಪಡೆದರು.

Loading...
ಕರ್ನಾಟಕ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರು ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಇನ್ನು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ರಾಜಕೀಯ ನಾಯಕರು ಅಂತಿಮ ದರ್ಶನ ಪಡೆಯಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಗುರುವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ  ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ರಾಷ್ಟ್ರಿಯ ಶೋಕಾಚರಣೆ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ಈಗಾಗಲೇ ರಾಜ್ ಘಾಟ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಒಂದೂವರೆ ಎಕರೆ ಮಂಜೂರು ಮಾಡಿದೆ.

ಬಿಜೆಪಿ ಹಿರಿಯ ಮುಖಂಡ ವಾಜಪೇಯಿ ಸುಮಾರು ಹತ್ತು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಆರೋಗ್ಯದಲ್ಲಿ ವಯೋಸಹಜ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಪ್ರತಿಬಾರಿ ಆರೋಗ್ಯ ತಪಾಸಣೆ ನಡೆಸಲು ಏಮ್ಸ್ಗೆ ಕರೆದೊಯ್ಯಲಾಗುತ್ತಿತ್ತು.

ವಾಜಪೇಯಿ ಅವರು ತಮ್ಮ ಆತ್ಮೀಯರನ್ನು ಗುರುತಿಸುವಲ್ಲಿ ವಿಫಲರಾಗುತ್ತಿದ್ದರು. ಡೆಮೆನ್ಷಿಯಾ ಮತ್ತು ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ತೀವ್ರ ಗಂಭೀರ ಸ್ಥಿತಿಗೆ ತಲುಪಿತ್ತು. ವೈದ್ಯರ ಸಲಹೆ ಮೇರೆಗೆ ಸೂಕ್ತ ಚಿಕಿತ್ಸೆ ಕೈಗೊಂಡರು ಫಲಿಸದೇ ವಿಧಿವಶರಾಗಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಅವರ ಅಕಾಲಿಕ ಮರಣದಿಂದ ದೇಶದಲ್ಲಿ ದುಃಖ ಮಡುಗಟ್ಟಿದೆ.
First published:August 16, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...