Vice President Election: ಯಾರಾಗಲಿದ್ದಾರೆ ಉಪ ರಾಷ್ಟ್ರಪತಿ? ಚುನಾವಣಾ ದಿನಾಂಕ ನಿಗದಿ

Venkaiah Naidu: ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್‌ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಉಪಾಧ್ಯಕ್ಷರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

  • Share this:
    ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ (Election For Vice President ) ನಡೆಯಲಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ವೆಂಕಯ್ಯ ನಾಯ್ಡು ಅವರು (Venkaiah Naidu) ಪ್ರಸ್ತುತ ಉಪರಾಷ್ಟ್ರಪತಿಯಾಗಿದ್ದು, ಅವರ ಅವಧಿ ಆಗಸ್ಟ್‌ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಉಪಾಧ್ಯಕ್ಷರು ರಾಜ್ಯಸಭೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಾರೆ. ಆಗಸ್ಟ್ 6ರಂದೇ ಉಪ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕೂಡ ನಡೆಯಲಿದೆ. ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನಕ್ಕೆ ಜುಲೈ 17 ಕೊನೆಯ ದಿನಾಂಕ ಎಂದು ಚಅಧಿಕೃತ ಮಾಹಿತಿಯನ್ನು ಚುನಾವಣಾ ಆಯೋಗ ತಿಳಿಸಿದೆ.

    ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಯಿತು.

    ಉಪ ರಾಷ್ಟ್ರಪತಿ ಚುನಾವಣೆಯ ಮುಖ್ಯಾಂಶಗಳು 

    • ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.

    • ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪಾಧ್ಯಕ್ಷರ ಚುನಾವಣೆಗಾಗಿ ಎಲೆಕ್ಟೋರಲ್ ಕಾಲೇಜ್​ನ್ನು ರಚಿಸುತ್ತಾರೆ.

    • ವೆಂಕಯ್ಯ ನಾಯ್ಡು ಅವರ ಉಪರಾಷ್ಟ್ರಪತಿ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.

      ಯಾರಾಗಲಿದ್ದಾರೆ ಅಭ್ಯರ್ಥಿಗಳು?
      ಇದುವರೆಗೆ ವೆಂಕಯ್ಯ ನಾಯ್ಡು ಅವರ ನಂತರ ಭಾರತದ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಸುಳಿವು ಯಾವುದೇ ಪಕ್ಷದಿಂದಲೂ ಹೊರಬಿದ್ದಿಲ್ಲ. ಯಾವುದೇ ರಾಜಕೀಯ ಪಕ್ಷಗಳೂ ತಮ್ಮ ಅಭ್ಯರ್ಥಿಗಳ ಕುರಿತು ಸುಳಿವು ಬಿಟ್ಟುಕೊಟ್ಟಿಲ್ಲ.  ಹೀಗಾಗಿ ಮುಂದಿನ ಉಪ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ದೇಶಜ ಪ್ರಜೆಗಳಲ್ಲಿ ಮನೆಮಾಡಿದೆ.

      ರಾಷ್ಟ್ರಪತಿ ಚುನಾವಣೆಯೂ ಸನ್ನಿಹಿತ
      ಅಲ್ಲದೇ ಮುಂದಿನ ರಾಷ್ಟ್ರಪತಿ ಆಯ್ಕೆಯ ಚುನಾವಣೆಯೂ ಸಹ ಇನ್ನೇನು ಕೆಲವು ದಿನಗಳಲ್ಲಿ ನಡೆಯಲಿದೆ.  ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳು ಬಿಡುಗಡೆಗೊಳಿಸಿವೆ.
      ಇದನ್ನೂ ಓದಿ: Draupadi Murma: ದ್ರೌಪದಿ ಮುರ್ಮು ಯಾರು? ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಹಿನ್ನೆಲೆ ಇಲ್ಲಿದೆ

      ಬಹು ಕುತೂಹಲ ಹುಟ್ಟಿಸಿದ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಹೆಸರು ಹೊರಬಿದ್ದಿದೆ. ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ. ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಜಾತಿ ಸಮುದಾಯಕ್ಕೆ ಸೇರಿದವರು. ಅವರು ಭಾರತೀಯ ಜನತಾ ಪಕ್ಷದ ಅವರು ಐದು ವರ್ಷಗಳ ಅವಧಿಯನ್ನು (2015-2021) ಪೂರ್ಣಗೊಳಿಸಿದ ಜಾರ್ಖಂಡ್‌ನ ಮೊದಲ ಗವರ್ನರ್ ಆಗಿದ್ದಾರೆ.

      ಇದನ್ನೂ ಓದಿ: Yashwant Sinha: ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಯಶ್ವಂತ್ ಸಿನ್ಹಾ ಹೆಜ್ಜೆ ಗುರುತು





      ಕಾಂಗ್ರೆಸ್ ಸೇರಿ ಎಲ್ಲ ವಿಪಕ್ಷಗಳು ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಸೂಚಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದ ಯಶವಂತ್ ಸಿನ್ಹಾ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

      ಇದೀಗ ಉಪ ರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ. ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ಯಾರು ಎಂಬುದನ್ನು ಕಾದುನೋಡಬೇಕಿದೆ.

    Published by:guruganesh bhat
    First published: