HOME » NEWS » National-international » VIJAY DIWAS 2020 ALL YOU NEED TO KNOW ABOUT 1971 INDO PAK WAR AND BIRTH OF BANGLADESH LG

Vijay Diwas 2020: 1971ರ ಇಂಡೋ-ಪಾಕ್ ಯುದ್ಧ; ಭಾರತಕ್ಕೆ ಜಯ; ಇಂದು ವಿಜಯ್ ದಿವಸದ ಸ್ಮರಣೆ

Vijay Diwas 2020 | 1971ರ ಇಂಡೋ-ಪಾಕ್ ಯುದ್ಧವು ಸುಮಾರು 13 ದಿನಗಳ ಕಾಲ ನಡೆದು, ಡಿಸೆಂಬರ್ 16ರಂದು ಕೊನೆಗೊಂಡಿತು. 1971ಕ್ಕೂ ಮೊದಲು ಬಾಂಗ್ಲಾದೇಶ ಪಾಕಿಸ್ತಾನದ ಭಾಗವಾಗಿತ್ತು. ಆಗ ಬಾಂಗ್ಲಾವನ್ನು ಪೂರ್ವ ಪಾಕಿಸ್ತಾನ ಎಂದು ಕರೆಯಲಾಗುತ್ತಿತ್ತು. ಆದರೆ ಪೂರ್ವ ಪಾಕಿಸ್ತಾನದಲ್ಲಿ ಸೈನಿಕರು ಅಲ್ಲಿನ ಜನರ ಮೇಲೆ ಅತ್ಯಾಚಾರ, ಕೊಲೆ, ಸುಲಿಗೆ ನಡೆಸುತ್ತಿದ್ದರು.

news18-kannada
Updated:December 16, 2020, 2:01 PM IST
Vijay Diwas 2020: 1971ರ ಇಂಡೋ-ಪಾಕ್ ಯುದ್ಧ; ಭಾರತಕ್ಕೆ ಜಯ; ಇಂದು ವಿಜಯ್ ದಿವಸದ ಸ್ಮರಣೆ
ಪ್ರಾತಿನಿಧಿಕ ಚಿತ್ರ
  • Share this:
ನವದೆಹಲಿ(ಡಿ.16): ಇಂದು ವಿಜಯ ದಿವಸದ ಆಚರಣೆ. 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಅಭೂತಪೂರ್ವ ಜಯ ಸಾಧಿಸಿತ್ತು. ಈ ಗೆಲುವಿನ ಸಂಕೇತವಾಗಿ  ಡಿ.16ನ್ನು ವಿಜಯ ದಿವಸ ಎಂದು ಪ್ರತೀ ವರ್ಷ ಆಚರಿಸಲಾಗುತ್ತದೆ. ಈ ದಿನದಂದು ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಆ ವೇಳೆ ಬಾಂಗ್ಲಾದೇಶ ಎಂಬ ದೇಶವೂ ಉದಯವಾಯಿತು.

ವಿಜಯ್ ದಿವಸ್​ ಇತಿಹಾಸ

1971ರ ಇಂಡೋ-ಪಾಕ್ ಯುದ್ಧವು ಸುಮಾರು 13 ದಿನಗಳ ಕಾಲ ನಡೆದು, ಡಿಸೆಂಬರ್ 16ರಂದು ಕೊನೆಗೊಂಡಿತು. 1971ಕ್ಕೂ ಮೊದಲು ಬಾಂಗ್ಲಾದೇಶ ಪಾಕಿಸ್ತಾನದ ಭಾಗವಾಗಿತ್ತು. ಆಗ ಬಾಂಗ್ಲಾವನ್ನು ಪೂರ್ವ ಪಾಕಿಸ್ತಾನ ಎಂದು ಕರೆಯಲಾಗುತ್ತಿತ್ತು. ಆದರೆ ಪೂರ್ವ ಪಾಕಿಸ್ತಾನದಲ್ಲಿ ಸೈನಿಕರು ಅಲ್ಲಿನ ಜನರ ಮೇಲೆ ಅತ್ಯಾಚಾರ, ಕೊಲೆ, ಸುಲಿಗೆ ನಡೆಸುತ್ತಿದ್ದರು. ಇದರಿಂದಾಗಿ ಅಲ್ಲಿನ 9 ಲಕ್ಷ ನಿರಾಶ್ರಿತರು ಭಾರತದೊಳಕ್ಕೆ ನುಸುಳಿದ್ದರು. ಆಗ ಪೂರ್ವ ಪಾಕಿಸ್ತಾನದಲ್ಲಿ ಪಾಕ್​ ಸೇನೆ ನಡೆಸುತ್ತಿದ್ದ ಕೃತ್ಯವನ್ನು ವಿರೋಧಿಸಿ ಭಾರತ ಬಾಂಗ್ಲಾದೇಶಕ್ಕೆ ಬೆಂಬಲ ಕೊಟ್ಟಿತ್ತು.

ಮೂಲಭೂತ ಸೌಕರ್ಯಗಳೇ ಇಲ್ಲ ಆನೇಕಲ್ ತಾಲೂಕಿನ ಈ ಗ್ರಾಮದಲ್ಲಿ; ಸೌಲಭ್ಯ ಕಲ್ಪಿಸಲು ಅಧಿಕಾರಿಗಳೇ ಅಡ್ಡಗಾಲು

ಬಾಂಗ್ಲಾದೇಶ ವಿಮೋಚನೆಗೆ ಭಾರತವೂ ಬೆಂಬಲ ನೀಡಿತ್ತು. ಇದು ಪಾಕಿಸ್ತಾನದ ಸೇನಾ ಆಡಳಿತಗಾರ ಜನರಲ್ ಅಯೂಬ್ ಖಾನ್ ಗೆ ತೀವ್ರ ಹಿನ್ನಡೆಯಾದಂತಾಗಿತ್ತು. ಅಲ್ಲದೇ 1971ರ ಡಿಸೆಂಬರ್ 3ರಂದು ಪೂರ್ವ ಪಾಕಿಸ್ತಾನದ ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ವಿರುದ್ಧ ಸಮರ ನಡೆಸಲು ಸಜ್ಜಾಗಿ ಎಂದು ಭಾರತೀಯ ಸೇನೆಗೆ ಭಾರತದ ಸರ್ಕಾರ ಆದೇಶ ನೀಡಿತ್ತು.

ಬಂಗಾಳಿ ಮುಸ್ಲಿಮರು ಮತ್ತು ಹಿಂದೂಗಳನ್ನು ರಕ್ಷಿಸುವ ನಿಟ್ಟಿನಲ್ಲಿ 1971ರ ಡಿಸೆಂಬರ್ 3ರಂದು ಪಾಕಿಸ್ತಾನದ ವಿರುದ್ಧ ಯುದ್ಧ ನಡೆಸಲು ಭಾರತ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಕೇವಲ 13 ದಿನಗಳ ಕಾಲ ಭಾರತ ಮತ್ತು ಪಾಕ್ ಯೋಧರ ನಡುವೆ ಸಮರ ನಡೆದಿತ್ತು. ಕೊನೆಗೂ ಭಾರತೀಯ ಯೋಧರ ಶಕ್ತಿಯ ಮುಂದೆ ಪಾಕ್ ಸೇನೆ ಮಂಡಿಯೂರಿತ್ತು.

1971ರ ಡಿಸೆಂಬರ್ 16ರಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಎಎ ಖಾನ್ ನಿಯಾಜಿ ಮತ್ತು 93 ಸಾವಿರ ಸೈನಿಕರು ಭಾರತೀಯ ಸೇನೆ ಮತ್ತು ಮುಕ್ತಿ ಬಹಿನಿ ಒಳಗೊಂಡ ಮಿತ್ರ ಪಡೆಗಳಿಗೆ ಬೇಷರತ್ತಾಗಿ ಶರಣಾಗಿದ್ದರು. ಯುದ್ಧದಲ್ಲಿ ಗೆಲುವು ಸಾಧಿಸುವ ಮೂಲಕ ಬಾಂಗ್ಲಾದೇಶ ಜನ್ಮತಳೆದಿತ್ತು. ಈ ಯುದ್ಧದ ಅಂತ್ಯದ ಬಳಿಕ ಪೂರ್ವ ಪಾಕಿಸ್ತಾನವನ್ನು ಬಾಂಗ್ಲಾದೇಶ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿ ಮಾಡಲಾಯಿತು. ಇದರ ಪ್ರತೀಕವಾಗಿ ಬಾಂಗ್ಲಾದೇಶ ಪ್ರತೀ ವರ್ಷ ಡಿ.16ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತದೆ.
Youtube Video

ವಿಜಯ್ ದಿವಸ್ ಮಹತ್ವ

ಇಂಡೋ-ಪಾಕ್ ಯುದ್ಧದ ಸಮಯದಲ್ಲಿ ತಮ್ಮ ಪ್ರಾಣ ಅರ್ಪಿಸಿದ ಭಾರತದ ಹುತಾತ್ಮ ಯೋಧರಿಗೆ ಈ ದಿನದಂದು ಗೌರವ ನಮನ ಸಲ್ಲಿಸಲಾಗುತ್ತದೆ.
Published by: Latha CG
First published: December 16, 2020, 10:39 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories