• Home
  • »
  • News
  • »
  • national-international
  • »
  • Vizag Gas Leak: ವಿಶಾಖಪಟ್ಟಣಂ ವಿಷಾನಿಲ ದುರಂತ; ಸುತ್ತಮುತ್ತಲಿನ 5 ಗ್ರಾಮಗಳ ಜನರ ಸ್ಥಳಾಂತರ

Vizag Gas Leak: ವಿಶಾಖಪಟ್ಟಣಂ ವಿಷಾನಿಲ ದುರಂತ; ಸುತ್ತಮುತ್ತಲಿನ 5 ಗ್ರಾಮಗಳ ಜನರ ಸ್ಥಳಾಂತರ

ವಿಶಾಖಪಟ್ಟಣಂ ಅನಿಲ ದುರಂತ

ವಿಶಾಖಪಟ್ಟಣಂ ಅನಿಲ ದುರಂತ

Visakhapatnam Gas Leak: ಮುನ್ನೆಚ್ಚರಿಕಾ ಕ್ರಮವಾಗಿ ಎಲ್​ಜಿ ಪಾಲಿಮರ್ಸ್​ ಕಾರ್ಖಾನೆಯ ಸುತ್ತಮತ್ತಲೂ 5 ಕಿ.ಮೀ. ವ್ಯಾಪ್ತಿಯ 5 ಗ್ರಾಮಗಳನ್ನು ಸಂಪೂರ್ಣ ಖಾಲಿ ಮಾಡಿಸಲಾಗಿದೆ.

  • Share this:

ವಿಶಾಖಪಟ್ಟಣಂ (ಮೇ 7): ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಎಲ್​ಜಿ ಪಾಲಿಮರ್ಸ್​ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಸೋರಿಕೆಯಾದ ಗ್ಯಾಸ್​ ಕಿಲೋಮೀಟರ್​ಗಟ್ಟಲೆ ವ್ಯಾಪಿಸುತ್ತಿರುವುದರಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲು 5 ಗ್ರಾಮಗಳ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಿಂದ ಈಗಾಗಲೇ 10 ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 5,000ಕ್ಕೂ ಹೆಚ್ಚು ಜನರು ವಿಷಾನಿಲ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ. 


ಮುನ್ನೆಚ್ಚರಿಕಾ ಕ್ರಮವಾಗಿ ಎಲ್​ಜಿ ಪಾಲಿಮರ್ಸ್​ ಕಾರ್ಖಾನೆಯ ಸುತ್ತಮತ್ತಲೂ 5 ಕಿ.ಮೀ. ವ್ಯಾಪ್ತಿಯ 5 ಗ್ರಾಮಗಳನ್ನು ಸಂಪೂರ್ಣ ಖಾಲಿ ಮಾಡಿಸಲಾಗಿದೆ. ಇನ್ನೂ 2 ಗ್ರಾಮಗಳ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.


ಈ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ವಹಿಸಿ, ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟುವಂತೆ ಗೃಹ ಸಚಿವಾಲಯಕ್ಕೆ ಸೂಚಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ. ಇದರಿಂದ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಸಾಕಷ್ಟು ಜನರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.


ಇದನ್ನೂ ಓದಿ: Visakhapatnam Gas Leak: ವಿಶಾಖಪಟ್ಟಣಂ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; ಇಬ್ಬರು ಮಕ್ಕಳು ಸೇರಿ 7 ಸಾವು, 200ಕ್ಕೂ ಹೆಚ್ಚು ಜನ ಗಂಭೀರ


ವಿಷಾನಿಲ ಸೇವನೆಯಿಂದ ಜನರು ರಸ್ತೆಗಳಲ್ಲಿ ಬಿದ್ದು ಹೊರಳಾಡುತ್ತಿದ್ದ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ. ಹತ್ತಾರು ಆಂಬುಲೆನ್ಸ್​ಗಳ ಮೂಲಕ ಅಸ್ವಸ್ಥಗೊಂಡಿದ್ದ ಜನರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಫ್ಯಾಕ್ಟರಿಯಿಂದ ಗ್ಯಾಸ್​ ಹರಡುತ್ತಲೇ ಇರುವುದರಿಂದ ಇಲ್ಲಿನ ಸುತ್ತಮುತ್ತಲಿನ 5 ಗ್ರಾಮಗಳ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.


ಈ ಘಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಜನರು ವಿಷಾದ ವ್ಯಕ್ತಪಡಿಸಿದ್ದಾರೆ.

Published by:Sushma Chakre
First published: