ಹೈದರಾಬಾದ್ (ಜೂ. 30): ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ಸೋರಿಕೆ ಪ್ರಕರಣ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಾನಿಲದ ಉಸಿರಾಟದಿಂದ ಸದ್ಯಕ್ಕೆ ನಾಲ್ವರ ಸ್ಥಿತಿ ಗಂಭೀರವಾಗಿದೆ. ವಿಶಾಖಪಟ್ಟಣಂನ ವೈಜಾಗ್ನಲ್ಲಿರುವ ಪರವಾಡ ಫಾರ್ಮಾ ಸಿಟಿಯಲ್ಲಿರುವ ಸೈನರ್ ಲೈಫ್ ಸೈನ್ಸ್ನಲ್ಲಿ ಗ್ಯಾಸ್ ಸೋರಿಕೆಯಾಗಿದೆ.
ಇಂದು ಮುಂಜಾನೆ ನಡೆದ ಈ ಘಟನೆಯಿಂದ ಸುತ್ತಮುತ್ತಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ತಿಂಗಳ ಆರಂಭದಲ್ಲಿ ಕೂಡ ವಿಶಾಖಪಟ್ಟಣಂನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ವಿಶಾಖಪಟ್ಟಣಂ ಜಿಲ್ಲೆಯ ಆರ್.ಆರ್. ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲದ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿತ್ತು. ಬೆಳ್ಳಂಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ 13ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. 1 ಸಾವಿರಕ್ಕೂ ಹೆಚ್ಚು ಜನರು ವಿಷಾನಿಲ ಸೇವನೆಯಿಂದ ಆಸ್ಪತ್ರೆ ಸೇರಿದ್ದರು. ಹಸು, ಸಾಕುಪ್ರಾಣಿಗಳು ರಸ್ತೆಯಲ್ಲಿ ಸತ್ತುಬಿದ್ದಿದ್ದವು. ಆ ದುರಂತದ ಆಘಾತವನ್ನು ಮರೆಯುವ ಮೊದಲೇ ಇದೀಗ ಮತ್ತೊಮ್ಮೆ ವಿಷಾನಿಲ ಸೋರಿಕೆಯಾಗಿದೆ.
ಇದನ್ನೂ ಓದಿ: ವಿಶಾಖಪಟ್ಟಣಂ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 11 ಸಾವು, 5,000ಕ್ಕೂ ಹೆಚ್ಚು ಜನ ಅಸ್ವಸ್ಥ
#UPDATE - 2 people dead & 4 admitted at hospitals. Situation under control now. The 2 persons who died were workers and were present at the leakage site. Gas has not spread anywhere else: Uday Kumar, Inspector, Parwada Police Station https://t.co/ogbuc3QfoY pic.twitter.com/TuPCeWK8ZF
— ANI (@ANI) June 30, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ