‘ಜನಗಣತಿ ಮಾಡಿ, ಆದರೆ ಎನ್​​ಪಿಆರ್ ಮತ್ತು ಎನ್​​ಆರ್​ಸಿಗೆ ಸಹಕಾರ ಸಾಧ್ಯವಿಲ್ಲ‘: ಕೇರಳ ಖಡಕ್​​ ಸಂದೇಶ

ಇನ್ನು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ವಿಧಾನಸಭೆ ಒತ್ತಾಯಿಸಿದೆ. ಈ ಒತ್ತಾಯವೂ ಜನರ ದ್ವನಿಯಾಗಿದೆ. ಕೇಂದ್ರ ಸರ್ಕಾರ ಮತ್ತು ಚುನಾಯಿತ ಪ್ರತಿನಿಧಿಗಳು ಈ ಕುರಿತು ಗಮನವಹಿಸಬೇಕಿದೆ” ಎಂದು ಆಗ್ರಹಿಸಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

 • Share this:
  ತಿರುವನಂತಪುರಂ(ಜ.21): ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಗೆ ಸಹಕಾರ ನೀಡಲು ಸಾಧ್ಯವೇ ಇಲ್ಲ ಎಂದು ಕೇರಳದ ಸಿಪಿಎಂ ನೇತೃತ್ವದ ಸರ್ಕಾರ ಕೇಂದ್ರ ಸರ್ಕಾರಕ್ಕೆ ಖಡಕ್​​ ಸಂದೇಶ ರವಾನಿಸಿದೆ. ಎನ್​​ಪಿಆರ್​​ ರಾಜ್ಯದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಈ ವಿಚಾರದಲ್ಲಿ ಜನರ ಭಯ ಹೋಗಲಾಡಿಸುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಹಾಗಾಗಿ ಕೇಂದ್ರ ಸರ್ಕಾರ ಜನಗಣತಿ ನಡೆಸಲು ಯಾವುದೇ ತೊಂದರೆಯಿಲ್ಲ. ಆದರೆ, ಎನ್​​ಪಿಆರ್ ಮಾತ್ರ ಉನ್ನತೀಕರಿಸಲು ಆಗುವುದಿಲ್ಲ ಎಂದು ಹೇಳಿದೆ.

  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವಿಚಾರವನ್ನು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ(ಆರ್‌ಜಿಐ) ಮತ್ತು ಕೇಂದ್ರ ಗೃಹ ಇಲಾಖೆ ಅಧೀನದಲ್ಲಿರುವ ಜನಗಣತಿ ಆಯುಕ್ತರಿಗೆ ಔಪಚಾರಿಕವಾಗಿ ತಿಳಿಸಿದೆ.

  ಎನ್​​ಪಿಆರ್​​ ಪ್ರಕ್ರಿಯೆಯು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಡೆಮಾಡಿಕೊಡಲಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ. ಕೇರಳದಲ್ಲಿ ಎನ್​​ಆರ್​ಸಿ ಜಾರಿಯಾದರೆ ಅರಾಜಕತೆ ಸೃಷ್ಟಿಯಾಗಲಿದೆ. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಲಾಗಿದೆ.

  ಇದನ್ನೂ ಓದಿ: ‘ನೀವು ಎಷ್ಟೇ ಪ್ರತಿಭಟಿಸಿದರೂ ಪೌರತ್ವ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ‘: ಕೇಂದ್ರ ಗೃಹ ಸಚಿವ ಅಮಿತ್​​ ಶಾ

  ಕಳೆದ ವರ್ಷ ಡಿಸೆಂಬರ್ 31ರಂದು ಕೇರಳ ವಿಧಾನಸಭೆಯೂ ತಮ್ಮ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಒಮ್ಮತದ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಚತ್ತೀಸ್​ಗಢ ಸೇರಿದಂತೆ ಹಲವು ಬಿಜೆಪಿಯೇತರ ರಾಜ್ಯಗಳು ಕೂಡ ಈ ಕಾಯ್ದೆ ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟಿವೆ. ತಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ಕಾನೂನಿಗೆ ಜಾಗವಿಲ್ಲ ಎಂದು ಸ್ಪಷ್ಟಪಡಿಸಿವೆ.

  ಇನ್ನು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ವಿಧಾನಸಭೆ ಒತ್ತಾಯಿಸಿದೆ. ಈ ಒತ್ತಾಯವೂ ಜನರ ದ್ವನಿಯಾಗಿದೆ. ಕೇಂದ್ರ ಸರ್ಕಾರ ಮತ್ತು ಚುನಾಯಿತ ಪ್ರತಿನಿಧಿಗಳು ಈ ಕುರಿತು ಗಮನವಹಿಸಬೇಕಿದೆ” ಎಂದು ಆಗ್ರಹಿಸಿದೆ.
  First published: