West Bengal, Assam Elections Result 2021 | ಅಸ್ಸಾಂ, ಬಂಗಾಳದಲ್ಲಿ ಯಾರಿಗೆ ಜೈ ಅಂದಿದ್ದಾನೆ ಮತದಾರ?

ಮಮತಾ ಬ್ಯಾನರ್ಜಿ ಹಾಗೂ ಪ್ರಧಾನಿ ಮೋದಿ.

ಮಮತಾ ಬ್ಯಾನರ್ಜಿ ಹಾಗೂ ಪ್ರಧಾನಿ ಮೋದಿ.

ಇಂದು ಈ ಎಲ್ಲಾ ರಾಜ್ಯಗಳ ಚುನಾವಣೆಯ ಅಂತಿಮ ಘಟ್ಟವಾಗಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಎಲ್ಲಾ ಐದು ರಾಜ್ಯಗಳಲ್ಲಿ ಮಾರ್ಚ್ 27ರಿಂದ ಆರಂಭವಾದ ಮತದಾನ ಏಪ್ರಿಲ್ 29ಕ್ಕೆ ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮಬಂಗಾಳ ಹಾಗೂ ಅಸ್ಸಾ ರಾಜ್ಯಗಳ ಮತದಾನ ಹಾಗೂ ಮತ ಎಣಿಕೆ ವಿವರ ಇಲ್ಲಿದೆ.

ಮುಂದೆ ಓದಿ ...
  • Share this:

ನವದೆಹಲಿ: ಕೊರೋನಾ ಎರಡನೇ ಹಾವಳಿ ವ್ಯಾಪಕವಾಗಿ ಮಿತಿಮೀರುತ್ತಿರುವ ಹೊತ್ತಿನಲ್ಲೇ ಕೇಂದ್ರ ಚುನಾವಣಾ ಆಯೋಗ ಪುದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿ ಪಶ್ಚಿಮಬಂಗಾಳ, ಅಸ್ಸಾಂ, ತಮಿಳುನಾಡು ಹಾಗೂ ಕೇರಳ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಯಶಸ್ವಿಯಾಗಿ ಮುಗಿಸಿದೆ. ಇಂದು ಈ ಎಲ್ಲಾ ರಾಜ್ಯಗಳ ಚುನಾವಣೆಯ ಅಂತಿಮ ಘಟ್ಟವಾಗಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಎಲ್ಲಾ ಐದು ರಾಜ್ಯಗಳಲ್ಲಿ ಮಾರ್ಚ್ 27ರಿಂದ ಆರಂಭವಾದ ಮತದಾನ ಏಪ್ರಿಲ್ 29ಕ್ಕೆ ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮಬಂಗಾಳ ಹಾಗೂ ಅಸ್ಸಾ ರಾಜ್ಯಗಳ ಮತದಾನ ಹಾಗೂ ಮತ ಎಣಿಕೆ ವಿವರ ಇಲ್ಲಿದೆ.


ಪಶ್ಚಿಮಬಂಗಾಳ ವಿಧಾನಸಭೆ 294 ಸದಸ್ಯ ಸ್ಥಾನವನ್ನು ಹೊಂದಿದ್ದು, ಕೇಂದ್ರ ಚುನಾವಣಾ ಆಯೋಗ 292 ಕ್ಷೇತ್ರಗಳಿಗೆ ಚುನಾವಣೆ ನಡೆಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮರಣ ಹೊಂದಿದ ಕಾರಣ ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಸಿಲ್ಲ. ಇಂದು ಸಂಜೆ ಐದು ಗಂಟೆಯೊಳಗೆ ಸ್ಪಷ್ಟ ಫಲಿತಾಂಶ ಪ್ರಕಟವಾಗಲಿದೆ. ಬಹುಮತಕ್ಕೆ 148 ಸ್ಥಾನಗಳನ್ನು ಗೆಲ್ಲಬೇಕಿದೆ.  ಒಟ್ಟು ಎಂಟು ಹಂತಗಳಲ್ಲಿ ಮತದಾನ ನಡೆದಿದೆ. ಮಾರ್ಚ್ 27ರಂದು ಮೊದಲ ಹಂತದ ಮತದಾನ ನಡೆದಿದ್ದರೆ, ಏಪ್ರಿಲ್ 29ರಂದು ಎಂಟನೇ ಹಾಗೂ ಕೊನೆಯ ಹಂತದ ಮತದಾನ ನಡೆದಿದೆ.


ಹಾಲಿ ಆಡಳಿತರೂಢ ಟಿಎಂಸಿ ಸರ್ಕಾರವನ್ನು ಕಿತ್ತೆಸೆದು ಅಧಿಕಾರ ಸ್ಥಾಪನೆಗೆ ಕೇಸರಿ ಪಕ್ಷ ಈ ಬಾರಿ ಬಂಗಾಳದಲ್ಲಿ ಬಾರಿ ಸರ್ಕಸ್ ನಡೆಸಿದೆ. ಬಿಜೆಪಿ ಪಕ್ಷದ ಘಟಾನುಘಟಿ ನಾಯಕರಾದ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವು ನಾಯಕರು ಬಂಗಾಳದಲ್ಲಿ ಭಾರೀ ಪ್ರಚಾರ ನಡೆಸಿದ್ದಾರೆ. ಆದರೆ, ಕೇಸರಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಹಾಲಿ ಸಿಎಂ ಮಮತಾ ಬ್ಯಾನರ್ಜಿ ಕೂಡ ಎಲ್ಲ ರೀತಿಯ ಚಾಣಾಕ್ಷತೆ ಉಪಯೋಗಿಸಿದ್ದಾರೆ. ಎರಡು ಪಕ್ಷಗಳ ನಡುವೆ ತೀವ್ರ ಪೈಪೋಟಿ ಇರುವುದಂತೂ ಸತ್ಯವಾಗಿದ್ದು, ಅಂತಿಮವಾಗಿ ಮತದಾರರ ಯಾರಿಗೆ ಜೈ ಎಂದಿದ್ದಾನೆ ಎಂಬುದು ಇಂದು ಪ್ರಕಟವಾಗಲಿದೆ.


ಟಿಎಂಸಿ ಅಧಿಕಾರ ಸಾಧ್ಯತೆ ಎಂದ ಚುನಾವಣೋತ್ತರ ಸಮೀಕ್ಷೆಗಳು


ಹಲವು ಮಾಧ್ಯಮ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲೂ ದೀದಿ ವರ್ಸಸ್ ಮೋದಿ ಫೈಟ್​ ಕಂಡುಬಂದಿದೆ. ಆಡಳಿತಾರೂಢ ಟಿಎಂಸಿಯನ್ನು ಅಧಿಕಾರದಿಂದ ಕಿತ್ತೆಸೆದು, ಬಿಜೆಪಿ ಅಧಿಪತ್ಯ ಸ್ಥಾಪನೆಗೆ ಭಾರೀ ಕಸರತ್ತು ನಡೆಸಿದರೆ, ಹಾಲಿ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಸರಿ ಪಕ್ಷವನ್ನು ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವಲ್ಲಿ ಈ ಬಾರಿ ಮತ್ತೆ ಯಶಸ್ವಿಯಾಗಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ.


ಸಮೀಕ್ಷಾ ಫಲಿತಾಂಶ ಹೀಗಿದೆ


ರಿಪಬ್ಲಿಕ್ ಸಿಎನ್​ಎಕ್ಸ್



  • ಟಿಎಂಸಿ- 128-138

  • ಬಿಜೆಪಿ 138-148

  • ಎಡಪಕ್ಷಗಳು 11-21



ಟೈಮ್ಸ್ ನೌ, ಸಿ- ವೋಟರ್


  • ಟಿಎಂಸಿ- 158

  • ಬಿಜೆಪಿ 115

  • ಎಡಪಕ್ಷಗಳು 19



ಎಬಿಪಿ, ಸಿ- ವೋಟರ್


  • ಟಿಎಂಸಿ- 154-164

  • ಬಿಜೆಪಿ 109-121

  • ಎಡಪಕ್ಷಗಳು 14-25



ನಾಲ್ಕು ಅಭ್ಯರ್ಥಿಗಳು ಕೊರೋನಾ ಸೋಂಕಿ ಸಾವು


ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುಣಾವಣೆ ಮುಕ್ತಾಯಗೊಳ್ಳುವ ಹೊತ್ತಿಗೆ ಒಟ್ಟು 4 ಜನ ಅಭ್ಯರ್ಥಿಗಳು ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನವೇ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸೋಮವಾರ (ಏಪ್ರಿಲ್ 26) ರ ರಾತ್ರಿ ಕೊರೋನಾ ಸೋಂಕು ದೃಢಪಟ್ಟ ನಂತರ ಅಭ್ಯರ್ಥಿ ಸಮೀರ್ ಘೋಷ್ (42) ಮೃತರಾಗಿದ್ದಾರೆ. ಸಮೀರ್ ಘೋಷ್ ಮಾಲ್ಡಾ ಜಿಲ್ಲೆಯ ಬೈಸ್ನಾಬ್‌ನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೇಂದ್ರ ಸಚಿವ, ಕೊಲ್ಕತ್ತಾದ ಟಾಲಿಗಂಜ್‌ನ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೋ ಕೂಡ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಮುರ್ಷಿದಾಬಾದ್‌ನ ಜಂಗೀಪುರದ ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಪ್ರದೀಪ್ ಕುಮಾರ್‌ ನಂದಿ, ಅದೇ ಜಿಲ್ಲೆಯಿಂದ ಸ್ಪರ್ಧಿಸುತ್ತಿದ್ದ ಕಾಂಗ್ರೆಸ್ಸಿನ ರೆಝಾಲ್ ಹಾಕ್ ಮತ್ತು ಉತ್ತರ 24 ಪರಗಣಗಳ ಖಾರ್ದಾಹಾದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಕಾಜಲ್ ಸಿನ್ಹಾ ಸಹ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ.


ಅಸ್ಸಾಂ ವಿಧಾನಸಭೆ


ನಕ್ಸಲ್ ಪೀಡಿತ ಪ್ರದೇಶವಾದ ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆದಿದೆ. ಮಾರ್ಚ್ 27ರಂದು ಮೊದಲ ಹಂತದ ಮತದಾನ ನಡೆದರೆ, ಏಪ್ರಿಲ್ 1ರಂದು ಎರಡನೇ ಹಂತ ಹಾಗೂ ಏಪ್ರಿಲ್ 6ರಂದು ಕೊನೆಯ ಹಂತದ ಮತದಾನ ನಡೆದಿತ್ತು. 126 ಕ್ಷೇತ್ರಗಳಲ್ಲಿ  64 ಸ್ಥಾನ ಪಡೆದ ಪಕ್ಷವು ಸರ್ಕಾರ ರಚಿಸಲಿದೆ.


ಮತಗಟ್ಟೆ ಸಮೀಕ್ಷೆ ಹೇಳಿದ್ದೇನು?


ಅಸ್ಸಾಂನಲ್ಲಿ ಬಿಜೆಪಿಯು 72 ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಬಹುದು ಎಂದು ಸಮೀಕ್ಷೆಗಳು ಹೇಳಿವೆ. ಅಸ್ಸಾಂನಲ್ಲಿ ಅಧಿಕಾರ ಪಡೆಯುವ ನಿರೀಕ್ಷೆ ಇರಿಸಿಕೊಂಡಿದ್ದ ಕಾಂಗ್ರೆಸ್ ವ್ಯಾಪಕ ಪ್ರಚಾರ ನಡೆಸಿತ್ತು. ಆದರೆ, ಅಲ್ಲಿ ಕಾಂಗ್ರೆಸ್ ಕೇವಲ 53 ಸ್ಥಾನಗಳನ್ನು ಗೆಲ್ಲಬಹುದು ಎಂದು ಮತಟ್ಟೆ ಸಮೀಕ್ಷೆಗಳು ಹೇಳಿವೆ.

First published: