ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುವ ಲಾಭ-ನಷ್ಟಗಳೇನು?

2020ರ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಯು 21ನೇ ಶತಮಾನದ ವಾಸ್ತವತೆ, ನಮ್ಯತೆ ಮತ್ತು ಆಕಾಂಕ್ಷೆಗಳಿಗೆ ಅನುಗುಣವಾಗಿ ಇದೆ. ಈ ಕಾಯ್ದೆ ಕೃಷಿ ಸರಕುಗಳ ಉತ್ಪಾದನೆ ಮತ್ತು ವಿತರಣೆ ಮೇಲೆ ಹೇರುವ ಅತಿಯಾದ ನಿಯಂತ್ರಣವನ್ನು ಸರಾಗಗೊಳಿಸುವ ಗುರಿಯನ್ನು ಹೊಂದಿದೆ.

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ

 • Share this:
  ನವದೆಹಲಿ(ಡಿ.14): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಕಳೆದ 18 ದಿನಗಳಿಂದ ಅನ್ನದಾತರು ದೆಹಲಿಯ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇಂದಿನಿಂದ ರೈತರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದು, ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಂಡಿದೆ. ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ ಇದುವರೆಗೆ 5 ಸುತ್ತಿನ ಮಾತುಕತೆಗಳು ನಡೆದಿವೆ. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ರೈತ ಪ್ರತಿನಿಧಿಗಳ ಜೊತೆ ಅನೌಪಚಾರಿಕ ಮಾತುಕತೆ ನಡೆಸಿದ್ದರು. ಆದರೆ ಇದ್ಯಾವುದೂ ಸಹ ವಿಫಲವಾಗಿಲ್ಲ. ಹೀಗಾಗಿ ರೈತರು ತಮ್ಮ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಿದ್ದಾರೆ.

  ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಈ ಅನ್ನದಾತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳ ನಾಯಕರು ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಎನ್​ಸಿಪಿ ನಾಯಕ ಶರದ್ ಪವಾರ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಭಾರತ್ ಬಂದ್​ಗೆ ಬೆಂಬಲ ನೀಡಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರು ಬೆಳೆದ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಅನ್ನದಾತರು ಒತ್ತಾಯಿಸಿದ್ದಾರೆ.

  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಮೂರು ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುವ ಲಾಭ-ನಷ್ಟಗಳೇನು ಎಂಬುದನ್ನು ನೋಡುವುದಾದರೆ,

  Farmers Protest: ದೆಹಲಿ ಗಡಿಯಲ್ಲಿ19 ದಿನದಿಂದ ರೈತರ ಪ್ರತಿಭಟನೆ; ಇಂದಿನಿಂದ ಉಪವಾಸ ಸತ್ಯಾಗ್ರಹ

  ರೈತರು ಮಾರಾಟ ಮಾಡುವ ನಮ್ಯತೆಯನ್ನು ಕಳೆದುಕೊಳ್ಳುತ್ತಾರೆ

  ಮೊದಲನೆಯದಾಗಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆಯಿಂದಾಗಿ ರೈತರು ತಾವು ಬೆಳೆದ ಉತ್ಪನ್ನಗಳನ್ನು ಉತ್ತಮ ಬೆಲೆಗೆ ಮಾರಾಟ ಮಾಡುವ ನಮ್ಯತೆಯನ್ನು (ಫ್ಲೆಕ್ಸಿಬಿಲಿಟಿ) ಕಳೆದುಕೊಳ್ಳುತ್ತಾರೆ. 2020ರ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆಯು ಎಪಿಎಂಸಿ ಕಾಯ್ದೆ ಮೇಲೆ ಏಕಸ್ವಾಮ್ಯವನ್ನು ಹೊಂದಿದೆ. ಆರ್ಥಿಕ ಪರಿಸ್ಥತಿ ತೀರಾ ಹದಗೆಟ್ಟಿರುವ ಈ ಸಮಯದಲ್ಲಿ ರಚಿಸಲಾದ ಒಂದು ಸಂಸ್ಥೆಯಾಗಿದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಬೇರೆಲ್ಲೂ ಮಾರಾಟ ಮಾಡದೆ ಎಪಿಎಂಸಿಗಳಿಗೆ ಮಾತ್ರವೇ ಮಾರಾಟ ಮಾಡಬೇಕಿದೆ.

  ರೈತರು ಬೆಲೆ ನಿಯಂತ್ರಣದ ಯುಗಕ್ಕೆ ಮರಳುತ್ತಾರೆ

  ಎರಡನೆಯದಾಗಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕಾನೂನಿನಲ್ಲಿ ರೈತರು ಬೆಲೆ ನಿಯಂತ್ರಣದ ಯುಗಕ್ಕೆ ಮತ್ತೆ ತೆರಳುತ್ತಾರೆ. ರೈತರು ಬೆಳೆದ ಬೆಳೆಗಳಿಗೆ ಯಾವುದೇ ನಷ್ಟವಾಗುವುದಿಲ್ಲ. 2020ರ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಯು 21ನೇ ಶತಮಾನದ ವಾಸ್ತವತೆ, ನಮ್ಯತೆ ಮತ್ತು ಆಕಾಂಕ್ಷೆಗಳಿಗೆ ಅನುಗುಣವಾಗಿ ಇದೆ. ಈ ಕಾಯ್ದೆ ಕೃಷಿ ಸರಕುಗಳ ಉತ್ಪಾದನೆ ಮತ್ತು ವಿತರಣೆ ಮೇಲೆ ಹೇರುವ ಅತಿಯಾದ ನಿಯಂತ್ರಣವನ್ನು ಸರಾಗಗೊಳಿಸುವ ಗುರಿಯನ್ನು ಹೊಂದಿದೆ. ಇದು ಸಿರಿಧಾನ್ಯಗಳು, ಬೇಳೆ ಕಾಳುಗಳು, ಆಲೂಗೆಡ್ಡೆ, ಈರುಳ್ಳಿ, ಎಣ್ಣೆ ಬೀಜಗಳ ಬೆಲೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತದೆ. ಈ ಕಾಯ್ದೆ ಯುದ್ಧ, ಕ್ಷಾಮ, ಅಸಾಧಾರಣ ಬೆಲೆ ಏರಿಕೆ ಮತ್ತು ಗಂಭೀರ ಪ್ರಕೃತಿ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ಮಾತ್ರ ಅನ್ವಯವಾಗುತ್ತದೆ.

  ಸಂಸ್ಥೆಗಳೊಂದಿಗೆ ವ್ಯವಹರಿಸುವಾಗ ರೈತರು ರಕ್ಷಣೆಯನ್ನು ಕಳೆದುಕೊಳ್ಳುತ್ತಾರೆ

  ರೈತರು ಕೃಷಿ ವ್ಯಾಪಾರ ಸಂಸ್ಥೆಗಳು, ಸಗಟು ವ್ಯಾಪಾರಿಗಳು, ರಫ್ತುದಾರರು ಅಥವಾ ದೊಡ್ಡ ಚಿಲ್ಲರೆ ವ್ಯಾಪಾರಿಗಳು, ಎಪಿಎಂಸಿ ಅಲ್ಲದ ಖರೀದಿದಾರರೊಂದಿಗೆ ವ್ಯವಹರಿಸುವಾಗ ರೈತರಿಗೆ ಯಾವುದೇ ರಕ್ಷಣೆ ಇರುವುದಿಲ್ಲ.

  ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳದಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ದೇಶದ ಬೇರೆಡೆಯಲ್ಲೂ ಪ್ರತಿಭಟನೆ ನಡೆಸುವಂತೆ ಕರೆಕೊಟ್ಟಿದ್ದಾರೆ.

  ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದಾರೆ. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಈಗ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದಾರೆ. ಹೀಗೆ ಹಂತಹಂತವಾಗಿ ಪ್ರತಿಭಟನೆ ತೀವ್ರಗೊಳಿಸುತ್ತಿದ್ದು ಇಂದಿನಿಂದ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದಾರೆ.
  Published by:Latha CG
  First published: