HOME » NEWS » National-international » WHAT CAUSED THE INCREASE IN PETROL RATES PETROLEUM MINISTER DHARMENDRA PRADHAN CLARIFIES MAK

Petrol Price: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣವೇನು?; ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಸ್ಪಷ್ಟನೆ!

ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್‌ ಸೇರಿದಂತೆ ಅನೇಕ ಪಕ್ಷಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ, ಪೆಟ್ರೋಲ್ ಬೆಲೆಯನ್ನು ಜಿಎಸ್​ಟಿ ಅಡಿಯಲ್ಲಿ ತರಬೇಕು ಎಂದು ಒತ್ತಾಯಿಸುತ್ತಿವೆ.

news18-kannada
Updated:June 13, 2021, 9:26 PM IST
Petrol Price: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣವೇನು?; ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಸ್ಪಷ್ಟನೆ!
ಸಾಂದರ್ಭಿಕ ಚಿತ್ರ.
  • Share this:
ನವ ದೆಹಲಿ (ಜೂನ್ 13); ಕೊರೋನಾ ಸಂಕಷ್ಟ ಮತ್ತು ಲಾಕ್​ಡೌನ್ ಸಮಸ್ಯೆ ನಡುವೆ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಪೆಟ್ರೋಲ್‌, ಡಿಸೇಲ್‌ ದರ ದಿನನಿತ್ಯ ಏರುತ್ತಲೇ ಇದ್ದು, ಇದರ ಪರಿಣಾಮದಿಂದಾಗಿ ದಿನೋಪಯೋಗಿ ವಸ್ತುಗಳ ಬೆಲೆಯೂ ಏರುತ್ತಲೇ ಇದೆ. ಈಗಾಗಲೇ 100 ರೂಪಾಯಿ ಗಡಿ ದಾಟಿ ಮುನ್ನುಗ್ಗುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಜನ ಅನೇಕ ಕಡೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಹನಗಳಿಗೆ ಪೆಟ್ರೋಲ್ ಹಾಕಿಸುವುದಕ್ಕೆ ಜನ ಕೆಲಸಕ್ಕೆ ಹೋಗಬೇಕು ಎಂಬಂತಹ ಟ್ರೋಲ್​ಗಳು ರಾಷ್ಟ್ರದಾದ್ಯಂತ ವೈರಲ್ ಆಗುತ್ತಿದೆ. ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್‌ ಸೇರಿದಂತೆ ಅನೇಕ ಪಕ್ಷಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ, ಪೆಟ್ರೋಲ್ ಬೆಲೆಯನ್ನು ಜಿಎಸ್​ಟಿ ಅಡಿಯಲ್ಲಿ ತರಬೇಕು ಎಂದು ಒತ್ತಾಯಿಸುತ್ತಿವೆ. 

ಜನರ ಆಕ್ರೋಶ, ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಆರೋಪಗಳಿಗೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಧರ್ಮೇಂದ್ರ ಪ್ರಧಾನ್‌ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳಲ್ಲಿ ಪೆಟ್ರೋಲ್‌ ಬೆಲೆ ಅಧಿಕವಾಗಿದೆ. ಕಾಂಗ್ರೆಸ್‌ ಅಲ್ಲಿನ ಮುಖ್ಯಮಂತ್ರಿಗಳಿಗೆ ಹೇಳಿ ತೆರಿಗೆ ಕಡಿಮೆ ಮಾಡಿಸಬೇಕು. ಪಂಜಾಬ್‌, ರಾಜಸ್ಥಾನ, ಮಹಾರಾಷ್ಟ್ರಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಗೆ ಇಲ್ಲವೇ? ಎಂದು ಧರ್ಮೇಂದ್ರ ಪ್ರಧಾನ್‌ ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ನಮ್ಮಂತೆ ಜೇನುನೊಣಗಳು ಕೂಡ ಗಣಿತದ ಸಮಸ್ಯೆ ಬಗೆಹರಿಸುವುದನ್ನು ಸಂಶೋಧಿಸಿದ ವಿಜ್ಞಾನಿಗಳು..!

ಜನ ಸಾಮಾನ್ಯರಿಗೆ ಆಗುವ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಧರ್ಮೇಂದ್ರ ಪ್ರಧಾನ್‌ ಜನರಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿದಿದೆ. ವ್ಯಾಕ್ಸೀನ್‌ ಗಾಗಿ 35,000 ಕೋಟಿ ಹಣ ಖರ್ಚಾಗುತ್ತಿದೆ. ಬೇರೆ ಅಭಿವೃದ್ಧಿ ಕಾರ್ಯಕ್ಕೂ ಹಿನ್ನಡೆಯಾಗಿದೆ. ಈಗ ಪೆಟ್ರೋಲ್, ಡಿಸೇಲ್‌ ಮೇಲಿನ ತೆರಿಗೆ ಕಡಿತ ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಪೆಟ್ರೋಲ್‌ ಬೆಲೆ ಅತ್ಯಂತ ಹೆಚ್ಚಿರುವ ರಾಜ್ಯಗಳು ತೆರಿಗೆ ವಿನಾಯತಿಗೆ ಮುಂದಾಗಬೇಕು ಎಂದು ಧರ್ಮೇಂದ್ರ ಪ್ರಧಾನ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: MAshok Kumar
First published: June 13, 2021, 9:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories