ಕಾಶ್ಮೀರ ಯಾವಾಗ ನಿಮ್ಮ ದೇಶದ ಭಾಗವಾಗಿತ್ತು? ಪಿಓಕೆ ಸಹ ಭಾರತದ್ದೆ ನೆನಪಿರಲಿ; ಪಾಕ್​ಗೆ ಕಡಕ್ ಎಚ್ಚರಿಕೆ ಕೊಟ್ಟ ರಾಜ್​ನಾಥ್​ ಸಿಂಗ್

ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ನಮಗೂ ಆಸಕ್ತಿ ಇದೆ. ಆದರೆ, ಭಯೋತ್ಪಾದನೆಯನ್ನು ಬಳಸಿಕೊಂಡು ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನದ ಜೊತೆ ನಾವು ಹೇಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ತಿಳಿಸಿದ್ದಾರೆ.

MAshok Kumar | news18-kannada
Updated:August 29, 2019, 1:51 PM IST
ಕಾಶ್ಮೀರ ಯಾವಾಗ ನಿಮ್ಮ ದೇಶದ ಭಾಗವಾಗಿತ್ತು? ಪಿಓಕೆ ಸಹ ಭಾರತದ್ದೆ ನೆನಪಿರಲಿ; ಪಾಕ್​ಗೆ ಕಡಕ್ ಎಚ್ಚರಿಕೆ ಕೊಟ್ಟ ರಾಜ್​ನಾಥ್​ ಸಿಂಗ್
ರಾಜ್​ನಾಥ್​ ಸಿಂಗ್
  • Share this:
ಲೇಹ್ (ಆಗಸ್ಟ್.29); ಭಾರತ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡುತ್ತಿದ್ದ ವಿಶೇಷ ಸ್ಥಾನಮಾನ ವಿಧಿ 370 ಅನ್ನು ರದ್ದುಗೊಳಿಸಿದೆ. ಆದರೆ, ಈ ವಿಚಾರವನ್ನು ಮುಂದಿಟ್ಟು ಪಾಕಿಸ್ತಾನ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಕಡಕ್ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್, “ಕಾಶ್ಮೀರ ಯಾವಾಗ ಪಾಕಿಸ್ತಾನದ ಭಾಗವಾಗಿತ್ತು? ಅದು ಎಂದಿಗೂ ಭಾರತದ ಅವಿಭಾಜ್ಯ ಅಂಗ ಅಲ್ಲದೆ, ಪಾಕಿಸ್ತಾನ್ ಆಕ್ರಮಿತ ಕಾಶ್ಮೀರವೂ ನಮ್ಮದೆ ಎಂಬುದು ನೆನಪಿರಲಿ” ಎಂದಿದ್ದಾರೆ.

ಲೇಹ್​ನಲ್ಲಿರುವ ಡಿಆರ್​ಡಿಓನಲ್ಲಿ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿರುವ ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್, ”ಕಾಶ್ಮೀರದ ವಿಚಾರವನ್ನು ಮುಂದಿಟ್ಟು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಬಿಕ್ಕಟ್ಟು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅಸಲಿಗೆ ಕಾಶ್ಮೀರ ಯಾವಾಗ ಪಾಕಿಸ್ತಾನದ ಭಾಗವಾಗಿತ್ತು? ಅಲ್ಲದೆ, ಕಾಶ್ಮೀರ ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವೂ ನಮ್ಮದೇ ಭಾಗ ಎಂದು ಅವರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ, ಪಾಕಿಸ್ತಾನ ಕಲಂ 370 ನಿಷೇಧದ ಕುರಿತು ಮಾತನಾಡುವ ಮೊದಲು ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಆಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದೌರ್ಜನ್ಯದ ಕುರಿತು ಗಮನಹರಿಸಲಿ. ಪಾಕಿಸ್ತಾನ ಸರ್ಕಾರ ಮೊದಲು ಈ ಸಮಸ್ಯೆಯನ್ನು ಬಗೆಹರಿಸಲಿ ಆನಂತರ ಕಾಶ್ಮೀರದ ಕುರಿತು ಚಿಂತಿಸಲಿ” ಎಂದು ಕಿವಿಮಾತು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, “ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ನಮಗೂ ಆಸಕ್ತಿ ಇದೆ. ಆದರೆ, ಭಯೋತ್ಪಾದನೆಯನ್ನು ಬಳಸಿಕೊಂಡು ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನದ ಜೊತೆ ನಾವು ಹೇಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯ. ಪಾಕಿಸ್ತಾನದ ಜೊತೆ ಉತ್ತಮ ನೆರೆಯ ಸಂಬಂಧವನ್ನು ಹೊಂದಲು ಭಾರತ ಸರ್ಕಾರ ಬಯಸಿದೆ. ಆದರೆ, ಆ ದೇಶ ಮೊದಲು ಭಯೋತ್ಪಾದಕರನ್ನು ಭಾರತಕ್ಕೆ ರಫ್ತು ಮಾಡುವುದನ್ನು ನಿಲ್ಲಿಸಬೇಕು” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಲಂ 370 ಅನ್ನು ನಿಷೇಧಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೆ ಈ ವಿಚಾರವನ್ನು ಪಾಕಿಸ್ತಾನ ವಿಶ್ವಸಂಸ್ಥೆಯವರೆಗೆ ಕೊಂಡು ಹೋಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಬಿಕ್ಕಟ್ಟು ಸೃಷ್ಟಿಸಲು ಪ್ರಯತ್ನಿಸಿತ್ತು.

ಇದನ್ನೂ ಓದಿ : ಪೊಲೀಸ್ ಅಧಿಕಾರಿಗಳ ಮೇಲೆ ಸಿಎಂ ಅಳಿಯ ರಾಜೇಶನ ದರ್ಪ; ಏಕ ವಚನದಲ್ಲೇ ಆವಾಜ್, ವೈರಲ್ ಆಯ್ತು ವಿಡಿಯೋ!

First published:August 29, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading