Gujarat Development| ಬಿಜೆಪಿ ಹೈಕಮಾಂಡ್ ಗುಜರಾತ್ ಸಿಎಂ ರೂಪಾಣಿ ರಾಜೀನಾಮೆ ಪಡೆದದ್ದೇಕೆ?

ಇತ್ತೀಚೆಗೆ ಉತ್ತರಖಂಡ, ಕರ್ನಾಟಕದಲ್ಲೂ ಮುಖ್ಯಮಂತ್ರಿ ಬದಲಾವಣೆ ಮಾಡಿ ಮುಂದಿನ‌‌ ಚುನಾವಣೆಗಳಿಗೆ ಅಣಿಯಾಗುತ್ತಿರುವ ಬಿಜೆಪಿ ಹೈಕಮಾಂಡ್ ಗುಜರಾತಿನಲ್ಲೂ ಮುಖ್ಯಮಂತ್ರಿ ಬದಲಾವಣೆಯ ಅಸ್ತ್ರವನ್ನೇ ಬಳಸುತ್ತಿದೆ.

ವಿಜಯ್​ ರೂಪಾನಿ.

ವಿಜಯ್​ ರೂಪಾನಿ.

  • Share this:
ಅಹಮದಾಬಾದ್ (ಸೆಪ್ಟೆಂಬರ್ 11): ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್​ ಮುಖ್ಯಮಂತ್ರಿ (Gujarath Chief Minister) ವಿಜಯ್​ ರೂಪಾಣಿ (Vijay Rupani) ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ರಾಷ್ಟ್ರೀಯ ಮಟ್ಟದಲ್ಲೂ ಸಂಚಲನ ಮೂಡಿಸಿದೆ. ಇದ್ದಕ್ಕಿದ್ದಂತೆ ವಿಜಯ್ ರೂಪಾಣಿ ರಾಜೀನಾಮೆ ನೀಡಿದ್ದೇಕೆ? ಇದರ ಹಿಂದಿನ ಲೆಕ್ಕಾಚಾರ ಏನು ಎಂಬಿತ್ಯಾದಿ ಕುತೂಹಲ ಮೂಡಿವೆ. ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Assembly Election)ಬರೊಬ್ಬರಿ ಇನ್ನು 14 ತಿಂಗಳು ಕಾಲಾವಕಾಶ‌ ಇದೆ. ಈ‌ ಹಂತದಲ್ಲಿ ಬಿಜೆಪಿ ಹೈಕಮಾಂಡ್ (BJO High Command) ನಾಯಕರು ಗುಜರಾತಿನಲ್ಲಿ ಮುಖ್ಯಮಂತ್ರಿ ಬದಲಿಸಿ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚೆಗೆ ಉತ್ತರಖಂಡ, ಕರ್ನಾಟಕದಲ್ಲೂ ಮುಖ್ಯಮಂತ್ರಿ ಬದಲಾವಣೆ ಮಾಡಿ ಮುಂದಿನ‌‌ ಚುನಾವಣೆಗಳಿಗೆ ಅಣಿಯಾಗು ತ್ತಿರುವ ಬಿಜೆಪಿ ಹೈಕಮಾಂಡ್ ಗುಜರಾತಿನಲ್ಲೂ ಮುಖ್ಯಮಂತ್ರಿ ಬದಲಾವಣೆಯ ಅಸ್ತ್ರವನ್ನೇ ಬಳಸುತ್ತಿದೆ.

ಗುಜರಾತ್ ವಿಧಾನಸಭಾ ಚುನಾವಣೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amith Sha) ಅವರ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಚುನಾವಣೆ. ಗುಜರಾತ್ ಅವರದೇ ರಾಜ್ಯ ಎನ್ನುವ ಕಾರಣಕ್ಕೆ ಇದು ಮಹತ್ವದ ಚುನಾವಣೆ. ಎಲ್ಲೆಡೆ ಸೋತರೂ ಪರವಾಗಿಲ್ಲ. ತವರು ರಾಜ್ಯದಲ್ಲಿ ಮಾತ್ರ ಮುಖಭಂಗ ಅನುಭವಿಸಬಾರದು ಅಂತಾ ಮೋದಿ ಮತ್ತು ಅಮಿತ್ ಶಾ ಗುಜರಾತ್ ಚುನಾವಣೆ ಬಗ್ಗೆ ಹೆಚ್ಚು ಗಮನಹರಿಸಿದ್ದಾರೆ.

ಗುಜರಾತಿನಲ್ಲಿ ಗೆಲ್ಲಲೇ‌ಬೇಕು ಎಂಬುದು ಅವರ ದೃಢ ಸಂಕಲ್ಪ. ಆದರೆ ವಿಜಯ್ ರೂಪಾಣಿ ನಿರೀಕ್ಷಿತ ಮಟ್ಟದಲ್ಲಿ ಜನಪ್ರಿಯರಾಗಿಲ್ಲ. ಇವರದೇ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಯಡವಟ್ಟಾಗಿ ಬಿಡಬಹುದು ಎಂದು ರೂಪಾಣಿ ರಾಜೀನಾಮೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಗುಡ್ ಫಾರ್ ನಥಿಂಗ್ ವಿಜಯ್ ರೂಪಾಣಿ!;

ಹಾಗೆ ನೋಡಿದರೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಬಗ್ಗೆ ಅಲ್ಲಿ ಅಸಮಾಧಾನ, ಆಕ್ರೋಶ, ಬಂಡಾಯಗಳೇನೂ ಇರಲಿಲ್ಲ. ಒಳ್ಳೆಯವರು ಎಂದೇ ಹೆಸರು ಮಾಡಿದ್ದರು. ಆದರೆ ಅವರ ಆಡಳಿತದಲ್ಲಿ ಚುರುಕಿರಲಿಲ್ಲ. ಕೊರೋನಾ ಕಾಲದಲ್ಲಿ ಜನರಿಗೆ ಸರಿಯಾಗಿ ಸ್ಪಂದಿಸಲಿಲ್ಲ. 'ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ' ಇವರಿಂದ ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಸ್ವತಃ ತಮ್ಮದೇ ಅಭ್ಯರ್ಥಿಯಾದರೂ ವಿಜಯ್ ರೂಪಾಣಿಗೆ ರಾಜೀನಾಮೆ ನೀಡುವಂತೆ ಅಮಿತ್ ಶಾ ಶಾಕಿಂಗ್ ಸೂಚನೆ ನೀಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಮುಂದಿನ ಮುಖ್ಯಮಂತ್ರಿ ಯಾರು?

ವಿಜಯ್​ ರೂಪಾಣಿ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನ ಯಾರ ಪಾಲಾಗುತ್ತದೆ ಎಂಬುದು ಸದ್ಯದ ಕುತೂಹಲ. ‌ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ (Nithin Patel) ಹೆಸರು ಕೇಳಿಬರುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ನಿತಿನ್ ಪಟೇಲ್ ಹೆಸರು ಕೇಳಿಬಂದಿತ್ತು. ಗುಜರಾತಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಪಟೇಲ್ ಸಮುದಾಯವನ್ನು (Patel Community) ತನ್ನತ್ತ ಸೆಳೆಯಲು ನಿತಿನ್ ಪಟೇಲ್ ಅವರಿಗೆ ಈ ಬಾರಿ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.

ಇದಕ್ಕೂ ಮೀರಿ ಅಚ್ಚರಿಯ ವ್ಯಕ್ತಿ ಮುಖ್ಯಮಂತ್ರಿ ಆದರೆ ಆಶ್ವರ್ಯಪಡುವಂತಿಲ್ಲ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Union Health Minister Munsuk Mandoviya) ಹೆಸರು ಕೂಡ ಕೇಳಲ್ಪಡುತ್ತಿದೆ. ಆದರೆ ಅವಕಾಶಗಳು ಕಡಿಮೆ ಎನ್ನಬಹುದು.

ಮಂಗಳವಾರ ನೂತನ ಸಿಎಂ ಆಯ್ಕೆ ಸಾಧ್ಯತೆ;

ವಿಜಯ್​ ರೂಪಾನಿ ದಿಢೀರ್​ ರಾಜೀನಾಮೆ ಹಿನ್ನಲೆಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್​. ಸಂತೋಷ್​  ಗುಜರಾತ್ ಶಾಸಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆಗೆ ಮಂಗಳವಾರ ಗುಜರಾತ್​ ಬಿಜೆಪಿ ಶಾಸಕರು ಸಭೆ ನಡೆಸಲಿದ್ದು, (BJP Legislative Party Meeting) ಸಭೆಯಲ್ಲಿ ನೂತನ ಸಿಎಂ ಆಯ್ಕೆ ನಡೆಯಲಿದೆ.

ನನ್ನ ರಾಜೀನಾಮೆ ಪಕ್ಷದ ನಿರ್ಧಾರ;

ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿರುವ ವಿಜಯ್ ರೂಪಾಣಿ, ಇದು ಪಕ್ಷದ ನಿರ್ಧಾರ.  ನನ್ನ ರಾಜೀನಾಮೆಯಲ್ಲಿ ಯಾವುದೇ ರೀತಿ ಗೊಂದಲ್ಲ ಇಲ್ಲ. ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಮುಂದೆ ಪಕ್ಷದಲ್ಲಿ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ಪ್ರಧಾನಿ ಮೋದಿ ಹೆಸರಿನಲ್ಲಿ ಮುಂದಿನ ಚುನಾವಣೆ ನಡೆಯಲಿದೆ. ಈವರೆಗೆ ಅವಕಾಶ ನೀಡಿದ  ಪ್ರಧಾನಿ ಮೋದಿಗೆ ಮತ್ತು ಪಕ್ಷಕ್ಜೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Vijay Rupani Resignation: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಜಯ್​ ರೂಪಾನಿ; ಗುಜರಾತ್​ನಲ್ಲಿ ​ಅಚ್ಚರಿಯ ರಾಜಕೀಯ ಬೆಳವಣಿಗೆ

ಬಿಎಸ್​ವೈ ಬಳಿಕ ಬಿಜೆಪಿಯ ಮೂರನೇ ಸಿಎಂ ಪದತ್ಯಾಗ;

ಕಳೆದ ಕೆಲವು ವಾರಗಳಿಂದ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪದತ್ಯಾಗ ನಡೆಯುತ್ತಿದೆ. ಈ ರೀತಿ ಪದತ್ಯಾಗ ಮಾಡಿದ ಮೂರನೇ ಸಿಎಂ ವಿಜಯ ರೂಪಾಣಿಯಾಗಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕದಲ್ಲಿ ಬಿ.ಎಸ್​. ಯಡಿಯೂರಪ್ಪ (B.S. Yadiyurappa) ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದಿದ್ದರು. ಇದಾದ ಬಳಿಕ ಉತ್ತರ ಖಂಡ ಸಿಎಂ ತಿರಾಂತ್​ ಸಿಂಗ್​ ರಾವತ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Published by:MAshok Kumar
First published: