ನವದೆಹಲಿ: (New Delhi) ಕೊರೋನಾ ಕಾರಣ ದೇಶದಲ್ಲಿ ಲಾಕ್ಡೌನ್ (Lock down) ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಯಿತು. ಶಾಲಾ- ಕಾಲೇಜುಗಳನ್ನು ಮುಚ್ಚಲಾಯಿತು. ಕಚೇರಿಗಳು, ಅಂಗಡಿ- ಮುಂಗಟ್ಟುಗಳನ್ನು ಕ್ಲೋಸ್ ಮಾಡಲಾಯಿತು. ಕೋರ್ಟ್ ಭೌತಿಕ ಕಲಾಪಗಳನ್ನು ನಿಲ್ಲಿಸಲಾಯಿತು. ಇದೀಗ ಇದೇ ಕೋರ್ಟ್ ವಿಚಾರವಾಗಿ ಪುಟ್ಟ ಬಾಲಕಿಯೊಬ್ಬಳು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ (Supreme Court Chief Jistice) ಪತ್ರ ಬರೆದು, ಶಾಲೆಗಳು ಆರಂಭವಾಗಿದ್ದರೂ ಕೋರ್ಟ್ ಭೌತಿಕ ವಿಚಾರಣೆ ಇನ್ನು ಯಾಕೆ ಆರಂಭವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾಳೆ. ಇದೀಗ ಇದೇ ಪತ್ರದ ಆಧಾರದ ಮೇಲೆ ಕೋರ್ಟ್‌ಗಳಲ್ಲಿ ಭೌತಿಕ ವಿಚಾರಣೆಯನ್ನು (Court Physical Hearing) ಮರು ಆರಂಭಿಸುವ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ಸುಪ್ರೀಂ ಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದನ್ನು (PIL) ದಾಖಲಿಸಿಕೊಂಡಿದೆ.
ಕೋವಿಡ್ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಇದಾಗಲೇ ಪುನಾರಂಭಗೊಂಡಿವೆ, ಹಾಗಿದ್ದರೂ ನ್ಯಾಯಾಲಯಗಳು ಭೌತಿಕ ವಿಚಾರಣೆ ಆರಂಭಿಸುವುದಕ್ಕೆ ಉತ್ಸುಕತೆ ತೋರುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್ ವಿ ರಮಣ ಅವರಿಗೆ ಪುಟ್ಟ ಹುಡುಗಿಯೊಬ್ಬಳು ಪತ್ರ ಬರೆದಿದ್ದಾಳೆ. ಈ ಪತ್ರವನ್ನು ಆಧರಿಸಿ ಸುಪ್ರೀಂಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರನ್ನು ಅಭಿನಂದಿಸುವ ಸಲುವಾಗಿ ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಆಯೋಜಿಸಿದ್ದ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿನೀತ್ ಸರಣ್ ಈ ವಿಚಾರ ಬಹಿರಂಗಪಡಿಸಿದರು. "ಶಾಲೆಗಳನ್ನು ತೆರೆದಾಗ ನ್ಯಾಯಾಲಯಗಳನ್ನು ಏಕೆ ತೆರೆಯಬಾರದು ಎಂದು ಒಬ್ಬ ಚಿಕ್ಕ ಹುಡುಗಿ ನಿನ್ನೆ ಸಿಜೆಐಗೆ ಪತ್ರ ಬರೆದಿದ್ದಳು. ಸಿಜೆಐ ಇದನ್ನು ಪಿಐಎಲ್ ಆಗಿ ಪರಿಗಣಿಸಿದ್ದು ಶೀಘ್ರದಲ್ಲೇ ವಿಚಾರಣೆ ಆರಂಭವಾಗಲಿದೆ" ಎಂದು ನ್ಯಾಯಮೂರ್ತಿಗಳು ತಿಳಿಸಿದರು.
ಮಾರ್ಚ್ 2020ರಲ್ಲಿ ಕೋವಿಡ್ ಬಿಕ್ಕಟ್ಟು ಆರಂಭವಾದಾಗಿನಿಂದ ಭಾರತದಲ್ಲಿ ನ್ಯಾಯಾಲಯಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯನಿರ್ವಹಿಸುತ್ತಿವೆ. ಅನೇಕ ಹೈಕೋರ್ಟ್‌ಗಳು ಮಾತ್ರವಲ್ಲದೆ ಸುಪ್ರೀಂ ಕೋರ್ಟ್ ಕೂಡ ಸೀಮಿತ ನೆಲೆಯಲ್ಲಿ ಭೌತಿಕ (ನೇರ) ವಿಚಾರಣೆ ಆರಂಭಿಸಿದರೂ, ಬಹುತೇಕ ಪ್ರಕರಣಗಳ ವಿಚಾರಣೆ ಇನ್ನೂ ವರ್ಚುವಲ್ ವಿಧಾನದ ಮೂಲಕ ನಡೆಯುತ್ತಿದೆ.
ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 1ರಂದು ಹೈಬ್ರಿಡ್ ಕಾರ್ಯವಿಧಾನದ ಮೂಲಕ ಸೀಮಿತ ಭೌತಿಕ ವಿಚಾರಣೆ ಆರಂಭಿಸಿತ್ತು. ಅದರಂತೆ ವಕೀಲರಿಗೆ ನಿರ್ದಿಷ್ಟ ಪ್ರಕರಣದಲ್ಲಿ ವರ್ಚುವಲ್ ಅಥವಾ ಭೌತಿಕ ವಿಧಾನವನ್ನು ಆಯ್ಕೆ ಮಾಡುವ ಆಯ್ಕೆ ಇರುತ್ತದೆ. ಭೌತಿಕ ವಿಧಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹುಪಾಲು ವಕೀಲರು ತಮ್ಮ ಪ್ರಕರಣಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಾದಿಸಲು ಬಯಸುತ್ತಿದ್ದಾರೆ.
ಇದನ್ನು ಓದಿ: Rape: ಲಿಫ್ಟ್ ಕೊಡುವ ನೆಪದಲ್ಲಿ ಮಹಿಳೆಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಕಾಮುಕ!
ಇದಕ್ಕೆ ಸಂಬಂಧಿಸಿದಂತೆಯೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿಯೊಂದನ್ನು ಈ ಹಿಂದೆ ಸಲ್ಲಿಸಲಾಗಿದ್ದು ಸಂವಿಧಾನದ 19 (1) (ಎ) ಮತ್ತು (ಜಿ) ವಿಧಿಗಳಡಿ ವರ್ಚುವಲ್ ವಿಧಾನದ ಮೂಲಕ ನ್ಯಾಯಾಲಯ ಕಲಾಪಗಳಲ್ಲಿ ಭಾಗಿಯಾಗುವ ಹಕ್ಕು ವಕೀಲರಿಗೆ ಇದೆ ಎಂದು ವಾದಿಸಲಾಗಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ